Sunday, 15th December 2024

ಶಾನುಭೋಗರ ಮಗಳ ಜತೆಯಾದ ಕಿಶೋರ್‌

ಭಾಗ್ಯ ಕೃಷ್ಣಮೂರ್ತಿ ಅವರ ಕಾದಂಬರಿ ಆಧಾರಿತ ಶಾನುಭೋಗರ ಮಗಳು ಚಿತ್ರದ ವಿಶೇಷ ಪಾತ್ರದಲ್ಲಿ ಬಹುಭಾಷಾ ನಟ  ಕಿಶೋರ್ ಅಭಿನಯಿಸಲಿದ್ದಾರೆ.

ರಾಗಿಣಿ ಪ್ರಜ್ವಲ್ ಶಾನು ಭೋಗರ ಮಗಳಾಗಿ ಕಾಣಿಸಿಕೊಳ್ಳುತ್ತಿದ್ದು, ಮೇಘಶ್ರೀ, ನಿರಂಜನ್ ಶೆಟ್ಟಿ, ರಮೇಶ್ ಭಟ್, ಸುಧಾ ಬೆಳವಾಡಿ, ಭಾಗ್ಯಶ್ರೀ, ಟಿ.ಎನ್.ಶ್ರೀನಿವಾಸಮೂರ್ತಿ, ಟೆನ್ನಿಸ್ ಕೃಷ್ಣ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಈ ಚಿತ್ರದ ಚಿತ್ರೀಕರಣ ಅಕ್ಟೋಬರ್ ೫ರ ವಿಜಯದಶಮಿ ಶುಭದಿನದಂದು ಚನ್ನಪಟ್ಟಣದ ಅರಳಾಳು ಸಂದ್ರದಲ್ಲಿ ಆರಂಭ ವಾಗಲಿದೆ. ಶ್ರೀರಂಗಪಟ್ಟಣ, ಮೇಲುಕೋಟೆ, ಕುಂತಿ ಬೆಟ್ಟ, ಬೆಂಗಳೂರು, ಮೈಸೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ.

ಭುವನ್ ಫಿಲಂಸ್ ಲಾಂಛನದಲ್ಲಿ ನಾರಾಯಣ್ ನಿರ್ಮಿಸುತ್ತಿರುವ ಈ ಚಿತ್ರವನ್ನು ಕೊಡ್ಲು ರಾಮಕೃಷ್ಣ ನಿರ್ದೇಶಿಸುತ್ತಿದ್ದಾರೆ. ಇದು ಕೊಡ್ಲು ರಾಮಕೃಷ್ಣ ನಿರ್ದೇಶನದ ಹದಿನಾಲ್ಕನೇ ಕಾದಂಬರಿ ಆಧಾರಿತ ಚಿತ್ರವಾಗಿದೆ. ಬಿ.ಎ.ಮಧು ಚಿತ್ರಕಥೆ ಹಾಗೂ ಸಂಭಾಷಣೆ ಬರೆಯು ತ್ತಿರುವ ಈ ಚಿತ್ರಕ್ಕೆ ಜೈ ಆನಂದ್ ಛಾಯಾಗ್ರಹಣ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಹಾಗೂ ವಸಂತ್ ರಾವ್ ಕುಲಕರ್ಣಿ ಕಲಾ ನಿರ್ದೇಶನವಿದೆ.

ಮೆಲೋಡಿ ಮೂಲಕ ಮೋಡಿ ಮಾಡಿರುವ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ಈಗ ಸಿನಿಮಾ ನಿರ್ದೇಶದತ್ತಲೂ ಒಲವು ತಾಳಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟಿಸಲಿರುವ ಹೊಸ ಚಿತ್ರಕ್ಕೆ ಅರ್ಜುನ್ ಜನ್ಯ ಆಕ್ಷನ್ ಕಟ್ ಹೇಳಲಿದ್ದಾರೆ. ಈ ಹಿಂದೆಯೇ ಚಿತ್ರ ಘೋಷಣೆಯಾಗಿತ್ತು. ಈ ನಡುವೆಯೇ ಹೊಸ ಸುದ್ಧಿಯೊಂದು ಹೊರ ಬಿದ್ದಿದೆ. ಅದು ಈ ಚಿತ್ರದಲ್ಲಿ ಶಿವಣ್ಣನ ಜತೆಗೆ ಉಪೇಂದ್ರ ಕೂಡ ನಟಿಸಲಿದ್ದಾರೆ ಎನ್ನುವುದು.

ಹೌದು, ಬಹು ವರ್ಷಗಳ ಬಳಿಕ ಶಿವಣ್ಣ ಹಾಗೂ ಉಪ್ಪಿಯನ್ನು ಒಂದೇ ಚಿತ್ರದಲ್ಲಿ ಕಣ್ತುಂಬಿಕೊಳ್ಳುವ ಅವಕಾಶ ಸಿನಿಪ್ರಿಯರಿಗೆ ಸಿಗ ಲಿದೆ. ಈ ಹಿಂದೆ ಪ್ರೀತ್ಸೆ ಚಿತ್ರದಲ್ಲಿ ಇಬ್ಬರೂ ಒಟ್ಟಿಗೆ ಕಾಣಿ ಸಿಕೊಂಡಿದ್ದರು, ಈ ಚಿತ್ರ ಸೂಪರ್ ಹಿಟ್ ಆಗಿತ್ತು. ಬಳಿಕ ಲವ
ಕುಶ ಚಿತ್ರದಲ್ಲಿಯೂ ಇಬ್ಬರು ಒಟ್ಟಿಗೆ ನಟಿಸಿದ್ದರು. ಈಗ ಮತ್ತೆ ಒಂದೇ ಚಿತ್ರದಲ್ಲಿ ಇಬ್ಬರು ನಟಿಸುತ್ತಿದ್ದಾರೆ. ಹೈಬಜೆಟ್‌ನಲ್ಲಿ ಈ
ಚಿತ್ರ ನಿರ್ಮಾಣವಾಗಲಿದೆ.