ಕಿಶನ್ ಫಿಲ್ಮ್ ಫ್ಯಾಕ್ಟರಿ ಬ್ಯಾನರ್ನಲ್ಲಿ ನಿರ್ಮಾಣವಾಗುತ್ತಿರುವ ಶಂಕಿತ ಚಿತ್ರದ ಪೋಸ್ಟರ್ ರಿಲೀಸ್ ಆಗಿದೆ. ನಟ ಶ್ರೀನಗರ ಕಿಟ್ಟಿ, ಚಿತ್ರದ ಪೋಸ್ಟರ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು. ಟೈಟಲ್ ಹಾಗೂ ಹಿನ್ನೆಲೆ ಸಂಗೀತಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಶಂಕಿತ ಮರ್ಡರ್ ಮಿಸ್ಟರಿ ಕಥೆಯನ್ನು ಒಳಗೊಂಡಿದೆ. ರೋಚಕವಾದ ತನಿಖೆ ಚಿತ್ರದು ದ್ದಕ್ಕೂ ಸಾಗಲಿದೆ. ನಟ ಕಿಶನ್ ಉತ್ತಪ್ಪ ಚಿತ್ರ ನಿರ್ಮಾಣಕ್ಕೆ ಬಂಡವಾಳ ಹೂಡುವ ಜತೆಗೆ ನಾಯಕನಾಗಿಯೂ ನಟಿಸುತ್ತಿದ್ದಾರೆ.
ರಾಜೇಶ್ವರಿ ಹಾಗೂ ಹರ್ಷಿತಾ ನಾಯಕಿಯರಾಗಿ ಕಾಣಿಸಿಕೊಳ್ಳಲಿದ್ದಾರೆ. ರಾಕೇಶ್ ಶರ್ಮ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಮನುಗೌಡ ಛಾಯಾ ಗ್ರಹಣ, ವಿಶಾಲ್ ಸಂಗೀತ ಈ ಚಿತ್ರಕ್ಕಿದೆ.
ಇದೇ ಜೂನ್ ೨ ರಂದು ಚಿತ್ರದ ಮುಹೂರ್ತ ನಡೆಯಲಿದ್ದು,ಮಡಿಕೇರಿ, ಮೈಸೂರು ಸುತ್ತಮುತ್ತ ಎರಡು ಹಂತದಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಪ್ಲಾನ್ ಮಾಡಿದೆ.