Sunday, 15th December 2024

ವಿಜಯ ದಶಮಿಗೆ ಕೃಷ್ಣಜಿಮೇಲ್.ಕಾಮ್

ಡಾಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಕೃಷ್ಣಜಿಮೇಲ್.ಕಾಮ್ ಚಿತ್ರ ವಿಜಯ ದಶಮಿಯಂದು ಅದ್ಧೂರಿಯಾಗಿ ತೆರೆಗೆ ಬರಲಿದೆ. ನಿರ್ದೇಶಕ ನಾಗ ಶೇಖರ್ ಈ ಚಿತ್ರಕ್ಕೆ ಕಥೆ, ಸಂಭಾಷಣೆ ಬರೆದಿದ್ದು ಆಕ್ಷನ್ ಕಟ್ ಹೇಳಿದ್ದಾರೆ.

ಪ್ರೀತಮ್ ಗುಬ್ಬಿ ಚಿತ್ರಕಥೆ ಬರೆದಿದ್ದಾರೆ. ಚಿತ್ರದ ಶೀರ್ಷಿಕೆ ವಿಭಿನ್ನವಾಗಿದೆ ಅಂತೇಯೇ ಚಿತ್ರದ ಕಥೆಯೂ ವಿಭಿನ್ನವಾಗಿದೆ. ಲವ್ ಸ್ಟೋರಿಯ ಜತೆಗೆ ಸಸ್ಪೆನ್ಸ್, ಥ್ರಿಲ್ಲರ್ ಸ್ಟೋರಿ ಚಿತ್ರದಲ್ಲಿದೆ. ಡಾಲಿಂಗ್ ಕೃಷ್ಣ ಅವರಿಗೆ ನಾಯಕಿ ಯಾಗಿ ಭಾವನಾ ಮೆನನ್ ನಟಿಸಿದ್ದಾರೆ. ಚಂದನ್ ಗೌಡ ದ್ವಿತೀಯ ನಾಯಕ ನಾಗಿ ಅಭಿನಯಿಸಿದ್ದು, ನಿರ್ದೇಶಕ, ನಾಯಕ ರಿಷಬ್ ಶೆಟ್ಟಿ ಚಿತ್ರದ ಅತಿಥಿ
ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ದತ್ತಣ್ಣ, ಸಾಧುಕೋಕಿಲ, ಅಚ್ಯುತರಾವ್, ಸಾತ್ವಿಕ್, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮತ್ತಿತರರು ಚಿತ್ರದಲ್ಲಿ ನಟಿಸಿದ್ದಾರೆ. ವಿಜಯ್ ಪ್ರಕಾಶ್ ಅವರ ದನಿಯಲ್ಲಿ ಮೂಡಿಬಂದಿರುವ ನಮಗೆಲ್ಲಾ ಯಾರು ಬೀಳ್ತಾರೆ.. ಹಾಡು ಸಂಗೀತ ಪ್ರಿಯರ ಮನಗೆದ್ದಿದೆ. ಐದು ಹಾಡುಗಳಿರುವ ಈ ಚಿತ್ರಕ್ಕೆ  ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಕವಿರಾಜ್ ಸಾಹಿತ್ಯ. ಸತ್ಯ ಹೆಗಡೆ ಛಾಯಾಗ್ರಹಣ ಕೃಷ್ಣಜಿಮೇಲ್.ಕಾಮ್ ಚಿತ್ರಕ್ಕಿದೆ. ಸಂದೇಶ್ ನಾಗರಾಜ್ ನಿರ್ಮಾಣದಲ್ಲಿ ಚಿತ್ರ ಮೂಡಿಬಂದಿದೆ.