Friday, 13th December 2024

ಮರೀಚಿಯಾದ ಚಿನ್ನಾರಿ ಮುತ್ತ

ವಿಜಯ ರಾಘವೇಂದ್ರ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಮತ್ತೊಂದು ಹೊಸ ಸಿನಿಮಾವನ್ನು ಒಪ್ಪಿ ಕೊಂಡಿದ್ದಾರೆ. ಸಿದ್ದ್ರುವ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಮರೀಚಿ ಎಂಬ ಚಿತ್ರದಲ್ಲಿ ನಟಿಸಲು ಚಿನ್ನಾರಿ ಮುತ್ತ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಮರೀಚಿ ಶೀಘ್ರದಲ್ಲಿಯೇ ಸೆಟ್ಟೇರಲಿದೆ.

ಮರೀಚಿ ಸಸ್ಪೆನ್ಸ್, ಥ್ರಿಲ್ಲರ್ ಸಿನಿಮಾವಾಗಿದೆ. ಹಲವು ಕಿರುಚಿತ್ರಗಳನ್ನು ನಿರ್ದೇಶಿಸಿ, ಒಂದಿಷ್ಟು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ಕಾರ್ಯನಿರ್ವಹಿಸಿದ ಅನುಭವ ಇರುವ ಸಿದ್ಧ್ರುವ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಿರ್ದೇಶಕರೇ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಮರೀಚಿ ಕಥೆ ಕೇಳಿ ವಿಜಯ ರಾಘವೇಂದ್ರ ಕೂಡ ಮೆಚ್ಚಿದ್ದಾರೆ. ಚಿತ್ರದಲ್ಲಿ ವಿಜಯ ರಾಘವೇಂದ್ರ ಜತೆಯಾಗಿ ನಟಿ ಸೋನು ಗೌಡ ಅಭಿನಯಿಸುತ್ತಿದ್ದಾರೆ.

ಅಭಿ ದಾಸ್, ಸ್ಪಂದನಾ,  ಆರ್ಯನ್, ಶೃತಿ ಪಾಟೀಲ್, ಗೋಪಾಲ್ ಕೃಷ್ಣ ದೇಶಪಾಂಡೆ, ಅರುಣಾ ಬಾಲರಾಜ್ ಮತ್ತಿತರರು ಚಿತ್ರದ ತಾರಾಬಳಗದಲ್ಲಿದ್ದಾರೆ. ಮನೋಹರ್ ಜೋಶಿ ಛಾಯಾಗ್ರಹಣ, ಜ್ಯೂಡ ಸ್ಯಾಂಡಿ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಎಸ್ ಎಸ್ ರೆಕ್ ಬ್ಯಾನರ್‌ನಲ್ಲಿ ನಿರ್ದೇಶಕ ಸಿದ್ಧ್ರುವ್ ಹಾಗೂ ಸಂತೋಷ್ ಮಾಯಪ್ಪ ಜಂಟಿಯಾಗಿ ಚಿತ್ರ ನಿರ್ಮಾಣಕ್ಕೆ ಬಂಡವಾಳ ಹೂಡಿದ್ದಾರೆ.

ನವೆಂಬರ್ ನಲ್ಲಿ ಮರೀಚಿ ಚಿತ್ರೀಕರಣ ಆರಂಭಗೊಳ್ಳಲಿದ್ದು, ಬೆಂಗಳೂರು, ರಾಮನಗರ, ಚಿಕ್ಕಮಗಳೂರು, ಮಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲು ಚಿತ್ರತಂಡ ನಿರ್ಧರಿಸಿದೆ.