Wednesday, 11th December 2024

ಚಿತ್ರೀಕರಣ ಮುಗಿಸಿದ ಮೇಘಾ ಶೆಟ್ಟಿ

ನಿರ್ದೇಶಕ ಸಡಗರ ರಾಘವೇಂದ್ರ ನಿರ್ದೇಶನದ ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್ನಿನ ಹೊಸಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್ ಆಗಿದೆ. ಪ್ಯಾನ್ ಇಂಡಿಯಾ ಮಾದರಿಯಲ್ಲಿ ಮೂಡಿ ಬರುತ್ತಿರುವ ಈ ಚಿತ್ರದ ಕನ್ನಡ ಹಾಗೂ ಮರಾಠಿಯಲ್ಲಿ ನಿರ್ಮಾಣವಾಗುತ್ತಿದೆ.

ನಿರ್ಮಾಪಕ ವಿಜಯ್ ಕುಮಾರ್ ಶೆಟ್ಟಿ ಮತ್ತು ರಮೇಶ್ ಕೊಠಾರಿ ನಿರ್ಮಾಣ ಸಂಸ್ಥೆ ಇಂಡಿಯನ್ ಫಿಲ್ಮ್ ಫ್ಯಾಕ್ಟರಿಯಿಂದ ಈ ಚಿತ್ರ ಅದ್ಧೂರಿಯಾಗಿ ನಿರ್ಮಾಣವಾಗುತ್ತಿದೆ. ಬಹುಭಾಷಾ ಕಲಾವಿದರು ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಇದೊಂದು ವಿಭಿನ್ನ ಕಥೆಯನ್ನು ಹೊಂದಿರುವ ಚಿತ್ರವಾಗಿದ್ದು, ಪ್ರೇಕ್ಷಕನ ಕುತೂಹಲ ಕೆರಳಿಸುವ ಪಕ್ಕಾ ಕಮರ್ಷಿಯಲ್ ಚಿತ್ರವಾಗಿದೆ ಎನ್ನುತ್ತಾರೆ ನಿರ್ದೇಶಕ ರಾಘವೇಂದ್ರ. ಮರಾಠಿಯ ಶಿವಾನಿ ಸುರ್ವೆ ಮತ್ತು ವಿರಾಟ್ ಮಡ್ಕೆ ಚಿತ್ರತಂಡ ಸೇರಿರುವುದು ಚಿತ್ರದ ಬಗ್ಗೆ ಕುತೂಹಲ ಇಮ್ಮಡಿಗೊಂಡಿದೆ.

ಇದೇ ತಿಂಗಳ ಅಂತ್ಯದಲ್ಲಿ ಎರಡನೆಯ ಹಂತದ ಚಿತ್ರೀಕರಣಕ್ಕೆ ಚಿತ್ರತಂಡ ಸಜ್ಜಾಗುತ್ತಿದೆ. ಜತೆಗೆ ಸದ್ಯ ದಲ್ಲಿಯೇ ಚಿತ್ರದ ಶೀರ್ಷಿಕೆ ಅನಾವರಣವಾಗಲಿದೆ.