Sunday, 15th December 2024

ಓ ಮೈ ಲವ್‌ನಲ್ಲಿ ಭರ್ಜರಿ Action

ಜಿಸಿಬಿ ಪ್ರೊಡಕ್ಷನ್ ಲಾಂಛನದಲ್ಲಿ ಜಿ. ರಾಮಾಂಜಿನಿ ಕಥೆ ಬರೆದು ನಿರ್ಮಿಸು ತ್ತಿರುವ ‘ಓ ಮೈ ಲವ್’ ಚಿತ್ರಕ್ಕೆ ತೆಲುಗಿನ ಖ್ಯಾತ ಖಳ ನಟ ದೇವಗಿಲ್ ಎಂಟ್ರಿ ಕೊಟ್ಟದ್ದಾರೆ. ಈ ಚಿತ್ರಕ್ಕೆ ಇತ್ತೀಚೆಗೆ ಬೆಂಗಳೂರಿನ ಮಿನರ್ವ ಮಿಲ್‌ನ ಆವರಣ ದಲ್ಲಿ ಅದ್ಧೂರಿ ವೆಚ್ಚದಲ್ಲಿ ಸೆಟ್ ನಿರ್ಮಿಸಿದ್ದು, ಅಲ್ಲಿ ಸಾಹಸ ಸನ್ನಿವೇಶಗಳನ್ನು ಸೆರೆ ಹಿಡಿಯಲಾಗುತ್ತಿದೆ.

‘ಮಗಧೀರ’ ಖ್ಯಾತಿಯ ಖಳನಟ ದೇವಗಿಲ್ ಹಾಗೂ ನಾಯಕ ಅಕ್ಷಿತ್ ಶಶಿ ಕುಮಾರ್ ನಡುವೆ ಭರ್ಜರಿ ಸಾಹಸ ದೃಶ್ಯಗಳನ್ನು ರಿಯಲ್ ಸತೀಶ್ ಸಾರಥ್ಯ ದಲ್ಲಿ ಚಿತ್ರೀಕರಿಸಿಕೊಳ್ಳಲಾಗಿದೆ. ನಾಯಕಿ ಕೀರ್ತಿ ಕಲ್ಕೇರಿ, ಎಸ್.ನಾರಾಯಣ್, ಸಂಗೀತಾ, ಭಾಗ್ಯಶ್ರೀ, ಪೃಥ್ವಿರಾಜ್ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.

ಈ ಸಾಹಸ ದೃಶ್ಯದೊಂದಿಗೆ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಭಿನ್ನವಾದ ಲವ್, ಫ್ಯಾಮಿಲಿ ಎಂಟರ್‌ಟೈನರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು‘ಬಳ್ಳಾರಿ ದಬಾರ್’, ‘ತೂಫಾನ್’ ಹಾಗೂ ‘18 ಟು 25’ ಚಿತ್ರಗಳನ್ನು ನಿರ್ದೇಶಿಸಿದ್ದ ಸ್ಮೈಲ್ ಶ್ರೀನು ಚಿತ್ರಕಥೆ, ಸಂಭಾಷಣೆ ಬರೆದು ಆ್ಯಕ್ಷನ್‌ಕಟ್ ಹೇಳುತ್ತಿದ್ದಾರೆ.

ಚಿತ್ರಕ್ಕೆ ಚರಣ್ ಅರ್ಜುನ್ ಸಂಗೀತ, ಡಾ.ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ, ಮುರಳಿ ನೃತ್ಯ ನಿರ್ದೇಶನವಿದೆ, ಡಿ.ಮಲ್ಲಿಕ್ ಸಂಕಲನ, ಜನಾರ್ಧನ್ ಅವರ ಕಲಾ ನಿರ್ದೇಶನವಿದೆ.