Sunday, 16th June 2024

ಹಾಸ್ಟೆಲ್‌ ಹುಡುಗರ ಹುಡುಕಿ ಬಂದ ರಮ್ಯಾ

ವಿಭಿನ್ನ ಶೀರ್ಷಿಕೆಯ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ವಿಭಿನ್ನವಾಗಿಯೇ ಪ್ರಮೋಷನ್ ಮಾಡುತ್ತಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಚಿತ್ರದ ಪೋಸ್ಟರ್ ಲಾಂಚ್ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದರು. ಈಗ ಚಿತ್ರತಂಡಕ್ಕೆ ಮೋಹಕ ತಾರೆ ರಮ್ಯಾ ಕೂಡ ಸಾಥ್ ನೀಡಿದ್ದಾರೆ.

ರಕ್ಷಿತ್ ಶೆಟ್ಟಿ, ಕಿಚ್ಚ ಸುದೀಪ್ ಅವರಿಂದ ಸಿನಿಮಾ ಪ್ರಮೋಷನಲ್ ಕಟೆಂಟ್ ಮಾಡಿಸಿ ಚಿತ್ರತಂಡ ಗಮನಸೆಳೆದಿದೆ. ವರುಣ್ ಸ್ಟುಡಿಯೋಸ್ ಹಾಗೂ ಪ್ರಜ್ವಲ್ ಬಿ.ಪಿ.ಗುಲ್ ಮೋಹರ್ ಫಿಲಂಸ್ ಬ್ಯಾನರ್‌ನಲ್ಲಿ ಚಿತ್ರ ನಿರ್ಮಾಣವಾಗಿದೆ. ಪುನೀತ್ ರಾಜ್‌ಕುಮಾರ್ ಚಿತ್ರದ ಕಥೆ ಕೇಳಿ ಮೆಚ್ಚಿ, ಚಿತ್ರತಂಡಕ್ಕೆ ಬೆನ್ನುತಟ್ಟಿ ಪ್ರೋತ್ಸಾಹ ನೀಡಿದ್ದಾರೆ. ಅವರ ಆಶೀರ್ವಾದದೊಂದಿಗೆ ಸಿನಿಮಾ ಚಿತ್ರೀಕರಣ ಆರಂಭಿಸಿದೆವು ಎನ್ನುತ್ತಾರೆ ನಿರ್ಮಾಪಕ ವರುಣ್ ಕುಮಾರ್.

ಹಾಸ್ಟೆಲ್ ಹುಡುಗರ ಚಿತ್ರಕ್ಕೆ ನಿತಿನ್ ಕೃಷ್ಣಮೂರ್ತಿ ಕಥೆ ಬರೆದು ನಿರ್ದೇಶನ ಮಾಡಿ ದ್ದಾರೆ. ಹಲವು ರಂಗಭೂಮಿ ಪ್ರತಿಭೆಗಳು ಈ ಚಿತ್ರದಲ್ಲಿ ನಟಿಸಿದ್ದಾರೆ.

ಇವರ ಜತೆಗೆ ಸ್ಯಾಂಡಲ್‌ವುಡ್ ಸ್ಟಾರ್ ನಟರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡ ಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದ್ದು, ಜನವರಿಯಲ್ಲಿ ಸಿನಿಮಾ ತೆರೆಗೆ ತರುವ ಪ್ಲಾನ್ ಮಾಡಿದೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಅರವಿಂದ್ ಕಶ್ಯಪ್ ಛಾಯಾಗ್ರಹಣ, ಸುರೇಶ್ ಸಂಕಲನ ಈ ಚಿತ್ರಕ್ಕಿದೆ.

error: Content is protected !!