Saturday, 5th October 2024

ಹೊಸ ಚಿತ್ರಕ್ಕೆ ರಾಕಿ ಭಾಯಿ ಭರ್ಜರಿ ತಯಾರಿ

ಕೆಜಿಎಫ್ ನಲ್ಲಿ ಅಬ್ಬರಿಸಿದ ರಾಕಿಂಗ್ ಸ್ಟಾರ್ ಯಶ್ ಅವರ ಮುಂದಿನ ಚಿತ್ರ ಯಾವುದು ಎಂಬ ಕುತೂಹಲ ಎಲ್ಲರಲ್ಲಿಯೂ ಇದೆ. ತಮ್ಮ ಮುಂದಿನ ಚಿತ್ರದ ಬಗ್ಗೆ ಯಶ್ ಎಲ್ಲಿಯೂ ಬಹಿರಂಗಪಡಿಸಲಿಲ್ಲ. ಯಾವುದೇ ಮಾಹಿತಿಯನ್ನು ನೀಡಿಲ್ಲ.

ಯಶ್ ಮತ್ತೊಂದು ಹೈಬಜೆಟ್ ಸಿನಿಮಾದಲ್ಲಿ ನಟಿಸುವುದು ಖಚಿತ. ಅದರ ಬಗ್ಗೆ ಎರಡು ಮಾತಿಲ್ಲ. ಯಶ್ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರ ಹೊಮ್ಮಿದ್ದಾರೆ. ಹಾಗಾಗಿ ಪರಭಾಷೆಯಲ್ಲಿಯೂ ಯಶ್‌ಗೆ ಬಲು ಬೇಡಿಕೆ ಇದೆ. ರಾಕಿಬಾಯಿ ಚಿತ್ರಕ್ಕೆ ಬಂಡವಾಳ ಹೂಡಲು ನಿರ್ಮಾಪಕರು ತುದಿಗಾಲಲ್ಲಿ ನಿಂತಿದ್ದಾರೆ. ನರ್ತನ್ ನಿರ್ದೇಶನದಲ್ಲಿ ಮೂಡಿ ಬರಲಿರುವ ಹೊಸ ಚಿತ್ರದಲ್ಲಿ ಯಶ್ ನಟಿಸಲಿದ್ದಾರೆ ಎನ್ನುವ ಮಾತುಗಳು ಕೇಳಿಬರು ತ್ತಿವೆ.

ನರ್ತನ್, ಯಶ್‌ಗಾಗಿ ಅದ್ಭುತ ಕಥೆಯನ್ನು ಸಿದ್ದಪಡಿಸಿ ಇಟ್ಟುಕೊಂಡಿದ್ದಾರೆ. ಕೆವಿನ್ ಪ್ರೊಡಕ್ಷನ್‌ನಲ್ಲಿ ಈ ಚಿತ್ರ ಸೆಟ್ಟೇರಲಿದೆ ಯಂತೆ. ಹಾಗಾಗಿ ಯಶ್ ತಮ್ಮ ಮುಂದಿನ ಚಿತ್ರಕ್ಕೆ ಭರ್ಜರಿ ತಯಾರಿ ಆರಂಭಿಸಿದ್ದಾರೆ. ಇದಕ್ಕಾಗಿ ಜಿಮ್‌ನಲ್ಲಿ ಗಂಟೆಗಟ್ಟಲೆ ವರ್ಕ್‌ಔಟ್ ಮಾಡುತ್ತಿದ್ದಾರೆ. ಮುಂದಿನ ಚಿತ್ರಕ್ಕಾಗಿ ತೂಕ ಇಳಿಸಿಕೊಳ್ಳಲಿರುವ ಯಶ್, ಹೊಸ ಗೆಟಪ್‌ನಲ್ಲಿ ಮಿಂಚಲಿದ್ದಾರೆ. ವಿಶೇಷ ಎಂದರೆ ಯಶ್ ಮುಂದಿನ ಚಿತ್ರದಲ್ಲಿ ಪೂಜಾ ಹೆಗ್ಡೆ ನಾಯಕಿಯಾಗಿ ಬಣ್ಣಹಚ್ಚಲಿದ್ದಾರಂತೆ.