Friday, 13th December 2024

ಸಂಕ್ರಾಂತಿಗೆ ಸರ್‌ಪ್ರೈಸ್‌ ನೀಡಿದ ಸುದೀಪ್‌

ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸಂಕ್ರಾಂತಿಯ ದಿನವೇ ಭರ್ಜರಿ ಉಡುಗೊರೆ ಸಿಕ್ಕಿದೆ. ಸೂಪರ್ ಸ್ಟಾರ್ ಉಪೇಂದ್ರ ನಾಯಕರಾಗಿ
ನಟಿಸುತ್ತಿರುವ, ‘ಕಬ್ಜ’ ಸಿನಿಮಾದಲ್ಲಿ ಸುದೀಪ್ ಕೂಡ ಬಹುಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇಂದು ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಆಗಿದ್ದು, ಪೋಸ್ಟರ್‌ನಲ್ಲಿ ಡಿಫರೆಂಟ್ ಲುಕ್‌ನಲ್ಲಿ ಕಿಚ್ಚ ಸುದೀಪ್ ಮಿಂಚಿದ್ದಾರೆ. ಹುರಿಮೀಸೆ ಬಿಟ್ಟು ವಿಭಿನ್ನ ಗೆಟಪ್‌ನಲ್ಲಿ ಕಂಗೊಳಿಸುತ್ತಿರುವ ನೆಚ್ಚಿನ ನಟನನ್ನು ಕಂಡು ಅಭಿಮಾನಿಗಳು ಫುಲ್‌ಖುಷ್ ಆಗಿ ದ್ದಾರೆ.

‘ಕಬ್ಜ’ ಅಂಡರ್‌ ವರ್ಲ್ಡ್‌‌ ಕಥೆಯ ಚಿತ್ರವಾಗಿದ್ದು, ಭೂಗತ ಲೋಕದ ಕರಾಳ ಸತ್ಯವನ್ನು ಚಿತ್ರದಲ್ಲಿ ಹೇಳಲಾಗುತ್ತಿದೆ. ಚಿತ್ರದಲ್ಲಿ ಸುದೀಪ್ ಭಾರ್ಗವ್ ಬಕ್ಷಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. 1947 ರಿಂದ 1986 ರವರೆಗೆ ಭೂಗತ ಲೋಕವನ್ನು ಆಳಿದ ವ್ಯಕಿಯೇ ಈ ಭಾರ್ಗವ್ ಬಕ್ಷಿ ಎಂಬುದನ್ನು ಪೋಸ್ಟರ್‌ನಲ್ಲಿ ಹೇಳಲಾಗಿದೆ.

ಆರ್ ಚಂದ್ರು ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಕಬ್ಜ’ ಪ್ಯಾನ್ ಇಂಡಿಯಾ ಸಿನಿಮಾವಾಗಿದೆ. ಬೆಂಗಳೂರು, ಹೈದರಾಬಾದ್ ಮುಂತಾದ ಕಡೆ, ಅದ್ಧೂರಿ ಸೆಟ್ ನಿರ್ಮಿಸಲಾಗಿದ್ದು ಚಿತ್ರೀಕರಣ ಭರದಿಂದ ಸಾಗಿದೆ. ಉಪೇಂದ್ರ ಅವರು ಚಿತ್ರದ ಕಥೆಗೆ ತಕ್ಕಂತೆ
ಸಜ್ಜಾಗಿ, ಬಹಳ ಸುಂದರವಾಗಿ ಕಾಣಿಸಿಕೊಂಡಿದ್ದಾರೆ. ‘ಕಬ್ಜ’ ಪ್ಯಾನ್ ಇಂಡಿಯಾ ಸಿನಿಮಾ ಆಗಿರುವುದರಿಂದ ಅದ್ದೂರಿತನಕ್ಕೆ ಯಾವುದೇ ಕೊರತೆ ಇಲ್ಲ. ಅಭಿಮಾನಿಗಳ ನಿರೀಕ್ಷೆಗೆ ತಕ್ಕ ಹಾಗೆ ‘ಕಬ್ಜ ’ಮೂಡಿಬರುತ್ತಿದೆ ಎನ್ನುತ್ತಾರೆ ಆರ್.ಚಂದ್ರು.

ಈ ಚಿತ್ರಕ್ಕೆ ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರು ಸಂಗೀತ ನೀಡುತ್ತಿದ್ದಾರೆ. ಎ.ಜೆ.ಶೆಟ್ಟಿ ಛಾಯಾಗ್ರಹಣ, ಮಹೇಶ್ ಸಂಕಲನ, ರಾಜು ಸುಂದರಂ, ಗಣೇಶ್, ಶೇಖರ್ ನೃತ್ಯ ನಿರ್ದೇಶನ ಹಾಗೂ ರವಿವರ್ಮ, ವಿಕ್ರಂಮೊರ್, ವಿಜಯ್ ಸಾಹಸ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ, ಐ ಮೂವಿ ಖ್ಯಾತಿ ಕಾಮರಾಜನ್, ಜಗಪತಿ ಬಾಬು, ರಾಹುಲ್ ಜಗತಪ್,ಅನೂಪ್ ರೇವಣ್ಣ, ಜಾನ್ ಕೊಕ್ಕಿನ್, ರಾಹುಲ್ ದೇವ್, ನವೀನ್, ಕೋಟ ಶ್ರೀನಿವಾಸ್, ಜಯಪ್ರಕಾಶ್, ಕಾಟ್ ರಾಜು, ಸುಬ್ಬರಾಜು ಮುಂತಾದವರಿದ್ದಾರೆ.