Friday, 13th December 2024

ಸದ್ದು ಮಾಡುತ್ತಿದೆ ಶೋಕಿವಾಲ ಟೀಸರ್‌

ಕ್ರಿಸ್ಟಲ್ ಪಾರ್ಕ್ ಸಿನಿಮಾ ಲಾಂಛನದಲ್ಲಿ ಟಿ.ಆರ್.ಚಂದ್ರಶೇಖರ್ ಹಾಗೂ ಕಿಶೋರ್ ನಿರ್ಮಿಸಿರುವ ಶೋಕಿವಾಲ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್ ಒಂದಷ್ಟು ವಿಭಿನ್ನವಾಗಿಯೇ ಮೂಡಿಬಂದಿದೆ.

ಹಳ್ಳಿಗಾಡಿನ ಕಾಮಿಡಿ ಕಥೆಯ ಜತೆಗೆ ನವಿರಾದ ಪ್ರೇಮ ಕಥೆಯೂ ಚಿತ್ರದಲ್ಲಿದೆ. ಜತೆಗೆ ಸೆಂಟಿಮೆಂಟ್ ಸ್ಟೋರಿ ಯೂ ಮಿಳಿತವಾಗಿದೆ ಎಂಬುದು ಟೀಸರ್‌ನಲ್ಲಿ ಸ್ಪಷ್ಟವಾಗುತ್ತದೆ. ಜಾಕಿ ನಿರ್ದೇಶನದಲ್ಲಿ ಚಿತ್ರ ಮೂಡಿ ಬಂದಿದ್ದು, ಅಜಯ್ ರಾವ್ ನಾಯಕರಾಗಿ ನಟಿಸಿದ್ದಾರೆ. ಸಲಗ ಬೆಡಗಿ ಸಂಜನಾ ಆನಂದ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇವರ ಜತೆಗೆ ಶರತ್ ಲೋಹಿತಾಶ್ವ, ಗಿರೀಶ್ ಶಿವಣ್ಣ , ತಬಲಾ ನಾಣಿ, ಮುನಿರಾಜ್, ಪ್ರಮೋದ್ ಶೆಟ್ಟಿ, ಅರುಣ ಬಾಲರಾಜ್, ವಾಣಿ, ಚಂದನಾ, ಲಾಸ್ಯಾ, ನಾಗರಾಜಮೂರ್ತಿ ಮುಂತಾದ ಕಲಾ ವಿದರು ನಟಿಸಿದ್ದಾರೆ.

ನನ್ನ ಮೊದಲ ಸಿನಿಮಾದ ಟೀಸರ್ ರೀಲಿಸ್ ಅಗಿದೆ. ಎಲ್ಲಾ ಕಡೆಯಿಂದಲ್ಲೂ ಒಳ್ಳೆಯ ಪ್ರತಿಕ್ರಿಯೆ ಬರುತ್ತಿದೆ. ಮುಂದಿನ ದಿನಗಳಲ್ಲಿ ಶೋಕಿವಾಲ ಚಿತ್ರದ ಮೊದಲ ವಿಡಿಯೊ ಸಾಂಗ್ ಬಿಡುಗಡೆಯಾಗಲಿದೆ. ಇದೇ ತಿಂಗಳು ೨೯ ರಂದು ಚಿತ್ರವನ್ನು ತೆರೆಗೆ ತರಲಿದ್ದೇವೆ. ಅಜಯ್ ರಾವ್ ಅವರಿಗೆ ಈ ಚಿತ್ರ ಹಿಂದಿನ ಸಿನಿಮಾಗಳಿಗಿಂತ ಹೆಚ್ಚು ಪ್ರಸಿದ್ಧಿ ತಂದುಕೊಡಲಿದೆ ಎಂದು ನಿರ್ದೇಶಕ ಜಾಕಿ ಹೇಳಿದರು.

ಚನ್ನಪಟ್ಟಣ, ಹೊಂಗನೂರು, ವಿರುಪಾಕ್ಷೀಪುರ, ಶ್ರೀರಂಗಪಟ್ಟಣ, ಮಂಡ್ಯ ,ಮೈಸೂರು, ತುಮಕೂರು, ಮಾಗಡಿ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಜಯಂತ್ ಕಾಯ್ಕಿಣಿ, ನಾಗೇಂದ್ರ ಪ್ರಸಾದ್, ಚೇತನ್ ಕುಮಾರ್ ಹಾಡುಗಳಿಗೆ ಸಾಹಿತ್ಯ ರಚಿಸಿದ್ದು, ಶ್ರೀಧರ್.ವಿ.ಸಂಭ್ರಮ್ ಸಂಗೀತ ಸಂಯೋಜಿಸಿದ್ದಾರೆ.
ಎಸ್.ನವೀನ್ ಕುಮಾರ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಪ್ರಶಾಂತ್ ರಾಜಪ್ಪ ಸಂಭಾಷಣೆ, ಮೋಹನ್ ನೃತ್ಯ ನಿರ್ದೇಶನ, ವಿಕ್ರಮ್ ಮೋರ್
ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.