Sunday, 15th December 2024

ರಾಜತಂತ್ರ ಟೀಸರ್‌ ಮೆಚ್ಚಿದ ಪುನೀತ್‌

ರಾಜ್ಯ ಪ್ರಶಸ್ತಿ ವಿಜೇತ ರಾಘವೇಂದ್ರ ರಾಜಕುಮಾರ್ ನಟಿಸಿರುವ ‘ರಾಜತಂತ್ರ’ ಚಿತ್ರದ ಟೀಸರ್ ರಿಲೀಸ್ ಆಗಿದ್ದು, ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಟೀಸರ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಚಿತ್ರಕ್ಕೆ ಪ್ರಹ್ಲಾದ್ ಕಥೆ, ಚಿತ್ರಕಥೆ ಬರೆದಿದ್ದಾರೆ. ಟೆಂಟ್‌ನಲ್ಲಿ ಅಣ್ಣಾವ್ರ ಸಿನಿಮಾಗಳನ್ನು ನೋಡುತ್ತಿದ್ದ. ಸಾಮಾಜಿಕ ಸಂದೇಶವೇ ಅವರ ಸಿನಿಮಾದ ಹೈಲೈಟ್ ಆಗಿತ್ತು. ಹೀಗಿರುವಾಗ ಅಣ್ಣಾವ್ರಿಗೆ ಸಿನಿಮಾ ಮಾಡುವ ಅವಕಾಶ ಸಿಗಲಿಲ್ಲ. ಆ ಕನಸನ್ನು ರಾಘಣ್ಣನ ‘ರಾಜತಂತ್ರ’ ಸಿನಿಮಾ ಮೂಲಕ ಈಡೇರಿಸಿಕೊಂಡಿದ್ದೇನೆ ಎಂದರು ಜೆ.ಎಂ ಪ್ರಹ್ಲಾದ್. ಅಮ್ಮನ ಮನೆ ಸಿನಿಮಾದಲ್ಲಿ ರಾಘಣ್ಣ ಜತೆ ಕೆಲಸ ಮಾಡಿದ್ದೆ. ಈ ಚಿತ್ರದಲ್ಲಿ ನಿವೃತ್ತ ಸೇನಾ ಅಧಿಕಾರಿಯಾಗಿ ಕ್ಯಾಪ್ಟನ್ ರಾಜಾರಾಮ್ ಆಗಿ ರಾಘಣ್ಣ ಕಾಣಿಸಿಕೊಂಡಿದ್ದಾರೆ. ಸಮಾಜದೊಳಗಿನ ಲೋಪಗಳನ್ನು ತಮ್ಮದೇ ಶೈಲಿಯಲ್ಲಿ ಸರಿಪಡಿಸುತ್ತಾರೆ. ಅದು ಹೇಗೆ ಎಂಬುದನ್ನು ಸಿನಿಮಾದಲ್ಲಿಯೇ ನೋಡಿ. ಅಷ್ಟೇ ಅಲ್ಲ ಈ ಸಿನಿಮಾದಲ್ಲಿ ರಾಘಣ್ಣ ಅವರ ಕಡೆಯಿಂದ ಫೈಟ್ ಸಹ ಮಾಡಿಸಿದ್ದೇವೆ.

ಎಂದು ಚಿತ್ರದ ಬಗ್ಗೆ ಕುತೂಹಲ ಕೆರಳಿಸಿದರು ನಿರ್ದೇಶಕ ಪಿವಿಆರ್ ಸ್ವಾಮಿ. ವಿಶ್ವಂ ಡಿಜಿಟಲ್ ಮೀಡಿಯಾ ಲಾಂಛನದಲ್ಲಿ ಜೆ.ಎಂ.ಪ್ರಹ್ಲಾದ್, ವಿಜಯ್ ಭಾಸ್ಕರ್ ಹರಪನಹಳ್ಳಿ ಹಾಗೂ ಪಿ.ಆರ್ ಶ್ರೀಧರ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಸುರೇಶ್ ಸಂಗೀತ ನಿರ್ದೇಶನ, ಪಿ.ವಿ.ಆರ್ ಸ್ವಾಮಿ ಛಾಯಾಗ್ರಹಣ, ನಾಗೇಶ್ ಸಂಕಲನ, ಚಂದನ್ ಕಲಾ ನಿರ್ದೇಶನ ಹಾಗೂ ವೈಲೆಂಟ್ ವೇಲು, ರಾಮ್ ದೇವ್, ಅಲ್ಟಿಮೆಟ್ ಶಿವು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ದೊಡ್ಡಣ್ಣ, ಶ್ರೀನಿವಾಸ ಮೂರ್ತಿ, ಭವ್ಯಾ, ಶಂಕರ್ ಅಶ್ವಥ್, ನೀನಾಸಂ ಅಶ್ವಥ್, ಮುನಿರಾಜು, ವಿಜಯಭಾಸ್ಕರ್, ಅಗರ, ಶಿವಾ ನಂದ, ಪ್ರಕಾಶ್, ವೆಂಕಟೇಶ್ ಪ್ರಸಾದ್, ಸ್ವಾತಿ ಅಂಬರೀಶ್, ವಲ್ಲಭ್, ಮುಂತಾದವರು ‘ರಾಜತಂತ್ರದ’ ತಾರಾಬಳಗದಲ್ಲಿದ್ದಾರೆ.