Sunday, 27th November 2022

ಇಂದು ಸುಪ್ರೀಂನಲ್ಲಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರಾಗಿಣಿ ಜಾಮೀನು ಅರ್ಜಿಯ ವಿಚಾರಣೆ ಶುಕ್ರವಾರ ಸುಪ್ರೀಂಕೋರ್ಟ್ ನಲ್ಲಿ ನಡೆಯಲಿದೆ.

ಹೈಕೋರ್ಟ್ ನಟಿ ರಾಗಿಣಿ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದನ್ನು ಪ್ರಶ್ನಿಸಿ ರಾಗಿಣಿ ಪರ ವಕೀಲರಾದ ಶಾಹಿಲ್ ಭಾಲೈಕ್, ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಸಿಸಿಬಿ ಪರ ಸುಪ್ರೀಂಕೋರ್ಟ್ ತುಷಾರ್ ಮಹೆತಾ ವಾದ ಮಂಡಿಸಿದ್ದು, ರಾಗಿಣಿ ವಿರುದ್ಧ ಎನ್ ಡಿಪಿಎಸ್ ಆಕ್ಟ್ 27 ಎಅಡಿ ಪ್ರಕರಣ ದಾಖಲಾಗಿದ್ದು, ಯಾವುದೇ ಕಾರಣ ಜಾಮೀನು ನೀಡಬಾರದು ಎಂದು ಸರ್ಕಾರಿ ವಕೀಲರು ವಾದ ಮಂಡಿಸಿದ್ದರು.