ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಡಿಜೆ ಸದ್ದಿಗೆ ಯುವಕ ಸಾವು
Raichur: ಮೊನ್ನೆ (ಆಗಸ್ಟ್ 31) ರಾತ್ರಿಯಿಡೀ ಡ್ಯಾನ್ಸ್ ಮಾಡಿದ್ದ ಅಭಿಷೇಕ್ ನಿನ್ನೆ (ಸೆ. 1) ಬೆಳಗಿನ ಜಾವ ಗಣೇಶ ವಿಸರ್ಜನೆ ಮಾರ್ಗ ಮಧ್ಯೆ ರಾಯಚೂರು ನಗರದ ತೀನ್ ಖಂದಿಲ್ ಸರ್ಕಲ್ ಬಳಿ ಕುಸಿದು ಬಿದ್ದಿದ್ದು, ಕೂಡಲೇ ಅಭಿಷೇಕ್‌ನನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಯುವಕ ಅಭಿಷೇಕ್ ಕೊನೆಯುಸಿರೆಳೆದಿದ್ದಾನೆ.