Monday, 15th August 2022

ಎಡೆಬಿಡದೆ ಮಳೆ: ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ

ಶಿವಮೊಗ್ಗ: ಭಾರಿ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಾ ದ್ಯಂತ ಶಾಲೆಗಳಿಗೆ ಗುರುವಾರ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬುಧವಾರ ರಾತ್ರಿಯಿಂದ ತಾಲೂಕಿನಾದ್ಯಂತ ಎಡೆಬಿಡದೆ ಮಳೆ ಸುರಿಯುತ್ತಿದೆ.

ನಿರಂತರ ಮಳೆ ಹಿನ್ನೆಲೆಯಲ್ಲಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾದ್ಯಂತ ಇಂದು‌ ಮತ್ತೆ ನಾಳೆ ಜಿಲ್ಲೆಯಾ ದ್ಯಂತ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಮಂಗಳೂರು ನಗರದ ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆ ನಿರಂತರವಾಗಿ ಸುರಿಯುತ್ತಿದೆ. ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯದಲ್ಲಿ‌ ಭಾರಿ ಮಳೆ ಯಾಗುತ್ತಿದೆ. ದ.ಕ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನಲೆ ಜಿಲ್ಲೆಯ ಎಲ್ಲಾ ಪ್ರಾಥಮಿಕ ಫ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಶಾಲೆಗಳಿಗೆ ರಜೆ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಆದೇಶ ಮಾಡಿದ್ದಾರೆ.