Friday, 24th September 2021

43,654 ಕರೋನಾ ಸೋಂಕಿನ ಪ್ರಕರಣಗಳು ಪತ್ತೆ

ನವದೆಹಲಿ : ದೇಶದಾದ್ಯಂತ ಕರೋನಾ ವೈರಸ್ ಸೋಂಕಿನಲ್ಲಿ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 43,654 ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ.

ಕಳೆದ 24 ಗಂಟೆಗಳಲ್ಲಿ 640 ಮಂದಿ ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 4,22,022 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ತಿಳಿಸಿದೆ.

41,678 ಸೋಂಕಿತರು ಗುಣಮುಖರಾಗಿದ್ದು, ಈ ಮೂಲಕ ಈವರೆಗೆ 3,06,63,147 ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ದೇಶದಲ್ಲಿ 3,99,436 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *