Sunday, 24th January 2021

ವಿಷಪೂರಿತ ಮದ್ಯ ಸೇವನೆ: ಏಳು ಮಂದಿ ಸಾವು

ಭರತ್​ಪುರ​ : ವಿಷಪೂರಿತ ಮದ್ಯ ಸೇವಿಸಿ 7 ಜನರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಭರತ್​ಪುರ ಜಿಲ್ಲೆಯಲ್ಲಿ ನೆಡದಿದೆ. ಇದಕ್ಕೂ ಮುನ್ನ, ಮಧ್ಯಪ್ರದೇಶದ ಇಂತಹ ಘಟನೆ ಕಾಣಿಸಿಕೊಂಡಿತ್ತು.

ಭರತಪುರ್ ಜಿಲ್ಲೆಯ ರೂಪವಾಸ್ ಪ್ರದೇಶದ ಚಕ್ ಸಮ್ರಿ ಗ್ರಾಮದಲ್ಲಿ ಬೆಳಗ್ಗೆ ದುರಂತ ಸಂಭವಿಸಿದೆ. ಅಸ್ವಸ್ಥರಾದವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಅಕ್ರಮವಾಗಿ ಮದ್ಯ ಮಾರಾಟ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಬಕಾರಿ ಇಲಾಖೆ, ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಹೇಶ್ ಜೋಶಿ ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *