Monday, 30th January 2023

ರಜನೀ ರಾಜಕೀಯ ಪ್ರವೇಶ ಇನ್ನೂ ಅನಿರ್ಧರಿತ !

ಚೆನ್ನೈ: ರಾಜಕೀಯ ಪ್ರವೇಶ ಕುರಿತ ನಿರ್ಧಾರವನ್ನು ಶೀಘ್ರವೇ ಪ್ರಕಟಿಸುವೆ ಎಂದು ತಮಿಳು ಸೂಪರ್‌ಸ್ಟಾರ್ ನಟ ರಜನಿಕಾಂತ್ ಸೋಮವಾರ ಹೇಳಿದ್ದಾರೆ.

ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನಟ ರಜನಿಕಾಂತ್, ‘ರಜನಿ ಮಕ್ಕಳ್ ಮಂದಿರಂ’ನ ಜಿಲ್ಲಾ ಕಾರ್ಯದರ್ಶಿಗಳು ಮತ್ತು ಇತರ ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ತಮ್ಮ ಅಭಿಪ್ರಾಯ ತಿಳಿಸಿದರು. ಪದಾಧಿಕಾರಿಗಳೂ ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು.

ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ರಜನಿಕಾಂತ್, ‘ರಜನಿ ಮಕ್ಕಳ್ ಮಂದಿರಂ’ನ ಜಿಲ್ಲಾ ಕಾರ್ಯದರ್ಶಿಗಳನ್ನು ಭೇಟಿಯಾಗಿ ಚರ್ಚಿಸಿದ್ದೇನೆ. ನನ್ನ ನಿರ್ಧಾರ ಏನೇ ಇರಲಿ, ಅವರು ನನ್ನೊಂದಿಗೆ ಇದ್ದಾರೆ. ಶೀಘ್ರದಲ್ಲೇ ಈ ಬಗ್ಗೆ ನನ್ನ ನಿರ್ಧಾರವನ್ನು ಪ್ರಕಟಿಸುವೆ’ ಎಂದು ತಿಳಿಸಿದರು.

ತಮಿಳುನಾಡಿನಲ್ಲಿ 2021ರ ಏಪ್ರಿಲ್-ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿವೆ. ಹಾಗಾಗಿ, ರಜನಿಕಾಂತ್ ರಾಜಕೀಯ ಪ್ರವೇಶ ಕುರಿತು ಚರ್ಚೆಗಳು ಮುನ್ನಲೆಗೆ ಬಂದಿವೆ. 2016ರಲ್ಲಿ ರಜನಿಕಾಂತ್ ಅಮೆರಿಕದಲ್ಲಿ ಮೂತ್ರಪಿಂಡ ಕಸಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ.

 

error: Content is protected !!