Sunday, 14th August 2022

ಬೆಂಗಳೂರಿಗೆ ಸೂಪರ್ ಸ್ಟಾರ್ ನಟ ರಜನಿಕಾಂತ್ ದಿಢೀರ್‌ ಭೇಟಿ

ಬೆಂಗಳೂರು: ದಕ್ಷಿಣ ಭಾರತದ ಸೂಪರ್ ಸ್ಟಾರ್ ನಟ ರಜನಿಕಾಂತ್ ದಿಢೀರನೆ ಬೆಂಗಳೂರಿಗೆ ಆಗಮಿಸಿದ್ದರು.

ಬೆಂಗಳೂರಿನಲ್ಲಿರುವ ಹಿರಿಯ ಸಹೋದರ ಸತ್ಯನಾರಾಯಣ ಅವರ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದರು. ಈ ವೇಳೆ ರಜನಿಕಾಂತ್ ಮತ್ತು ಸತ್ಯನಾರಾಯಣ ಅವರು ಉಭಯ ಕುಶಲೋಪರಿ ವಿಚಾರಿಸಿದರು.

ಟ್ವೀಟ್ ಮೂಲಕ ತಮ್ಮ ನಿರ್ಧಾರ ಪ್ರಕಟಿಸಿದ್ದ ರಜನಿಕಾಂತ್, ‘ಈಗ ಬದಲಾವಣೆ, ರೂಪಾಂತರ ತಾರದಿದ್ದರೆ ಮತ್ತೆ ಯಾವಾ ಗಲೂ ಸಾಧ್ಯವಿಲ್ಲ ಎಂದಿದ್ದಾರೆ. ಜನವರಿಯಲ್ಲಿ ಪಕ್ಷ ಆರಂಭವಾಗುತ್ತದೆ, ಈ ಸಂಬಂಧ ಡಿಸೆಂಬರ್ 31ರಂದು ಘೋಷಣೆ ಮಾಡ ಲಾಗುವುದು. ಮುಂದಿನ ವರ್ಷದ ವಿಧಾನಸಭೆ ಚುನಾವಣೆಯಲ್ಲಿ ಜನರ ಬೆಂಬಲದೊಂದಿಗೆ ಧಾರ್ಮಿಕ ರಾಜಕೀಯ ತಮಿಳು ನಾಡಿನಲ್ಲಿ ಆರಂಭವಾಗಲಿದೆ ಎಂದು ತಿಳಿಸಿದ್ದರು.