Thursday, 2nd February 2023

ಗ್ರಾ.ಪಂ. ಎರಡನೇ ಹಂತದ ಚುನಾವಣೆಗೆ ಜಿಲ್ಲಾಡಳಿತ ಅಗತ್ಯ ಸಿದ್ಧತೆ

ರಾಮನಗರ : ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಸಂಬಂಧ ಎರಡನೇ ಹಂತದಲ್ಲಿ ಚನ್ನಪಟ್ಟಣ ತಾಲ್ಲೂಕಿನ 32 ಮತ್ತು ಮಾಗಡಿ ತಾಲ್ಲೂಕಿನ 30 ಒಟ್ಟು 62 ಗ್ರಾ.ಪಂ.ಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ.

ಚುನಾವಣೆ ನಡೆಯುವ ಚನ್ನಪಟ್ಟಣ ತಾಲ್ಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 163259 ಮತದಾರರಿದ್ದು ಅವರಲ್ಲಿ ಗಂಡಸು-79741, ಹೆಂಗಸು-83516 ಹಾಗೂ ಇತರೆ-2 ಮತದಾರರಿರುತ್ತಾರೆ. ಚುನಾವಣೆ ನಡೆಯುವ ಮಾಗಡಿ ತಾಲ್ಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 141877 ಮತದಾರರಿದ್ದು ಅವರಲ್ಲಿ ಗಂಡಸು-71544, ಹೆಂಗಸು-70327, ಹಾಗೂ ಇತರೆ-2 ಮತದಾರ ರಿರುತ್ತಾರೆ.

ಗ್ರಾ.ಪಂ.ಚುನಾವಣೆ ಸಂಬಂಧ ಚನ್ನಪಟ್ಟಣ ತಾಲ್ಲೂಕಿನಲ್ಲಿ 247 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ 26 ಸೂಕ್ಷ್ಮ ಹಾಗೂ 26 ಅತಿ ಸೂಕ್ಷ್ಮ ಮತಗಟ್ಟೆಗಳಾಗಿರುತ್ತದೆ. ಮಾಗಡಿ ತಾಲ್ಲೂಕಿನಲ್ಲಿ 225 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ 26 ಸೂಕ್ಷ್ಮ ಹಾಗೂ 24 ಅತಿ ಸೂಕ್ಷ್ಮ ಮತಗಟ್ಟೆಗಳಾಗಿರುತ್ತದೆ.

ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಮತಗಟ್ಟೆಗಳಿಗೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಡಿಸೆಂಬರ್, 27 ರಂದು ಬೆಳಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಚುನಾವಣೆಗೆ ಸಂಬಂಧಿಸಿದಂತೆ ಮಸ್ಟರಿಂಗ್, ಡಿ-ಮಸ್ಟರಿಂಗ್ ಹಾಗೂ ಮತ ಎಣಿಕೆ ಕೆಲಸಗಳು ಚನ್ನಪಟ್ಟಣ ತಾಲ್ಲೂಕಿಗೆ ಸಂಬಂಧಿಸಿದಂತೆ ಚನ್ನಪಟ್ಟಣ ಟೌನ್‌ನಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಾಗೂ ಮಾಗಡಿ ತಾಲ್ಲೂಕಿಗೆ ಸಂಬಂಧಿಸಿದಂತೆ ಮಾಗಡಿ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.

ಚನ್ನಪಟ್ಟಣ ತಾಲ್ಲೂಕಿಗೆ ಸಂಬಂಧಿಸಿದಂತೆ 1013 ಮತಗಟ್ಟೆ ಸಿಬ್ಬಂದಿ ಹಾಗೂ ಮಾಗಡಿ ತಾಲ್ಲೂಕಿಗೆ ಸಂಬಂಧಿಸಿದಂತೆ 923 ಮತಗಟ್ಟೆ ಸಿಬ್ಬಂದಿಗಳು ಸೇರಿದಂತೆ ಒಟ್ಟಾರೆ 1936 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಚನ್ನಪಟ್ಟಣ ತಾಲ್ಲೂಕಿಗೆ ಸಂಬಂಧಿ ಸಿದಂತೆ 32 ಗ್ರಾಮ ಪಂಚಾಯಿತಿಗಳ ಒಟ್ಟು 482 ಸ್ಥಾನಗಳಲ್ಲಿ 1 ಸ್ಥಾನಕ್ಕೆ ನಾಮಪತ್ರ ಸಲ್ಲಿಕೆಯಾಗದೇ ಖಾಲಿ ಉಳಿದಿರುತ್ತದೆ. 47 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. 434 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, 1156 ಅಭ್ಯರ್ಥಿಗಳು ಅಂತಿಮ ಕಣದಲ್ಲಿರುತ್ತಾರೆ.

ಮಾಗಡಿ ತಾಲ್ಲೂಕಿಗೆ ಸಂಬಂಧಿಸಿದಂತೆ 30 ಗ್ರಾಮ ಪಂಚಾಯಿತಿಗಳ ಒಟ್ಟು 426 ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆಯಾಗಿದ್ದು. 20 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. 405 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, 1123 ಅಭ್ಯರ್ಥಿಗಳು ಅಂತಿಮ ಕಣದಲ್ಲಿರುತ್ತಾರೆ. ಮಾಗಡಿ ತಾಲ್ಲೂಕಿನ ಮಾಡಬಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾನಗಲ್ಲು ಕ್ಷೇತ್ರಕ್ಕೆ ಒಂದು ನಾಮಪತ್ರ ಸ್ವೀಕೃತವಾಗಿದ್ದು, ಸದರಿ ನಾಮಪತ್ರವು ತಿರಸ್ಕೃತಗೂಂಡ ಹಿನ್ನೆಲೆಯಲ್ಲಿ ಮಾನಗಲ್ಲು ಕ್ಷೇತ್ರದ ಸದಸ್ಯ ಸ್ಥಾನ ಖಾಲಿ ಉಳಿದಿರು ತ್ತದೆ.

ಎರಡನೇ ಹಂತದಲ್ಲಿ ಒಟ್ಟಾರೆ 62 ಗ್ರಾಮ ಪಂಚಾಯಿತಿಗಳ ಒಟ್ಟು 908 ಸ್ಥಾನಗಳಲ್ಲಿ 1 ಸ್ಥಾನಕ್ಕೆ ನಾಮಪತ್ರ ಸಲ್ಲಿಕೆಯಾಗದೇ ಖಾಲಿ ಉಳಿದಿರುತ್ತದೆ. 67 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. 839 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, 2279 ಅಭ್ಯರ್ಥಿಗಳು ಅಂತಿಮ ಕಣದಲ್ಲಿರುತ್ತಾರೆ.

error: Content is protected !!