ಎಚ್‌ಡಿಕೆ ವಿರುದ್ಧ ಬಲವಂತದ ಕ್ರಮ: ಮುಚ್ಚಳಿಕೆ ವಾಪಸ್ ಪಡೆದ ರಾಜ್ಯ ಸರ್ಕಾರ
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಬಿಡದಿ ಸಮೀಪದ ಕೇತಗಾನಹಳ್ಳಿಯಲ್ಲಿ 6 ಎಕರೆ ಸರ್ಕಾರಿ ಭೂಮಿ ಒತ್ತುವರಿ ಮಾಡಿದ್ದನ್ನು ಕಂದಾಯ ಇಲಾಖೆಯಿಂದ ಸರ್ವೆ ಮಾಡಿ ತೆರವುಗೊಳಿಸಿ, ನೋಟಿಸ್ ನೀಡಲಾಗಿತ್ತು. ಈ ನೋಟಿಸ್ ಪ್ರಶ್ನಿಸಿ ಎಚ್‌ಡಿಕೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ವೇಳೆ ಸರ್ಕಾರ, ಅವರ ವಿರುದ್ಧ ಯಾವುದೇ ಬಲವಂತದ ಕ್ರಮವಿಲ್ಲ ಎಂಬುದಾಗಿ ನ್ಯಾಯಾಲಯಕ್ಕೆ ಮುಚ್ಚಳಿಕೆ ಸಲ್ಲಿಸಿತ್ತು.