Friday, 3rd February 2023

ರಾಮಮಂದಿರದ ತಾಂತ್ರಿಕ ಉಸ್ತುವಾರಿಯಾಗಿ ಕನ್ನಡಿಗ ಎಂಜಿನಿಯರ್ ನೇಮಕ : ಸಚಿವ ಜಾರಕಿಹೊಳಿ‌ ಹರ್ಷ

ಬೆಂಗಳೂರು: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯ ಶ್ರೀ ರಾಮಚಂದ್ರನ ದೇವಾಲಯದ ತಾಂತ್ರಿಕ ಉಸ್ತುವಾರಿಯಾಗಿ ನೇಮಕವಾಗಿರುವ ದೇಶದ ಹಿರಿಯ ಜಿಯೋ ಟೆಕ್ನಿಕಲ್ ಎಂಜಿನಿಯರ್, ಕನ್ನಡಿಗ ಪ್ರೊ. ಟಿಜಿ ಸೀತಾರಾಮ್ ಅವರಿಗೆ ಹೃತ್ಪೂರ್ವಕ ಶುಭಾಶಯಗಳು.

ಗುವಾಹಟಿ ಐಐಟಿ ನಿರ್ದೇಶಕರಾಗಿರುವ ಚಿತ್ರದುರ್ಗ ಮೂಲದ ಪ್ರೊ. ಟಿಜಿ ಸೀತಾರಾಮ್, ಜಿಯೋ ಟೆಕ್ನಿಕಲ್ ಎಂಜಿನಿಯರಿಂಗ್ ನಲ್ಲಿ ನುರಿತ ತಜ್ಞರಾಗಿದ್ದು, ಇವರ ತಂಡದ ಸಲಹೆಯಂತೆಯೇ ಶ್ರೀ ರಾಮ ಮಂದಿರ ದ ತಳಪಾಯದ ಕೆಲಸ ನಡೆಯುತ್ತದೆ. ಇವರ ಮಾರ್ಗದರ್ಶನದಲ್ಲಿ ಭವ್ಯವಾದ, ಯಾವುದೇ ಕಂಪನಗಳಿಗೆ ಅಲುಗಾಡದ ಹಾಗೆ ಪ್ರಭು ಶ್ರೀ ರಾಮನ ಮಂದಿರ ನಿರ್ಮಾಣವಾಗಲಿ ಎಂಬ ಹಾರೈಕೆಯೊಂದಿಗೆ ಸೀತಾರಾಮ್ ಅವರಿಗೆ ಶುಭಾಶಯಗಳು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

error: Content is protected !!