ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯೋತ್ಸವ ಮೆರವಣಿಗೆ
Bengaluru Karaga 2025: ಅರ್ಚಕರಾದ ಎ.ಜ್ಞಾನೇಂದ್ರ ಅವರು 15ನೇ ಬಾರಿಗೆ ಕರಗವನ್ನು ಹೊತ್ತು ಹೆಜ್ಜೆ ಹಾಕಿದ್ದು, ಮಧ್ಯರಾತ್ರಿ ಸುಮಾರು 12.30 ರಿಂದ 1ರ ಸುಮಾರಿಗೆ ಕರಗ ಮೆರವಣಿಗೆ ಹೊರಟಿತು. ಉತ್ಸವದ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೇ ಧರ್ಮರಾಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ, ಅಭಿಷೇಕ, ಮಹಾಮಂಗಳಾರತಿ ನಡೆಯಿತು.