ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ತಿರುಪತಿಯಲ್ಲಿ ನಕಲಿ ತುಪ್ಪದಿಂದ ತಯಾರಾಗಿತ್ತು 20 ಕೋಟಿ ಲಡ್ಡು

ಕಳೆದ ವರ್ಷದಿಂದ ತಿರುಪತಿಯಲ್ಲಿ ನಕಲಿ ತುಪ್ಪ ಬಳಕೆಯ ವಿಚಾರವಾಗಿ ಸಾಕಷ್ಟು ಚರ್ಚೆಗಳು ನಡೆಯುತ್ತಲೇ ಇದೆ. ಆರೋಪ, ಪ್ರತ್ಯಾರೋಪಗಳು ಕೂಡ ಕೇಳಿ ಬರುತ್ತಿವೆ. ಇದೀಗ ತಿರುಪತಿಯ ಅಧಿಕಾರಿವೊಬ್ಬರು ನೀಡಿರುವ ಹೇಳಿಕೆ ಬಾಲಾಜಿ ಭಕ್ತರಿಗೆ ಆಘಾತ ನೀಡಿದೆ. 2019-24ರ ಅವಧಿಯಲ್ಲಿ ತಿರುಪತಿಯಲ್ಲಿ ನಕಲಿ ತುಪ್ಪದಿಂದ ಸುಮಾರು 20 ಕೋಟಿ ಲಡ್ಡುಗಳನ್ನು ತಯಾರಿಸಿರುವುದಾಗಿ ಅವರು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ

ಆಂಧ್ರಪ್ರದೇಶ: ತಿರುಪತಿ (Tirupati) ವೆಂಕಟೇಶ್ವರ ದೇವಾಲಯದಲ್ಲಿ (Sri Venkateshwara temple) ನಕಲಿ ತುಪ್ಪ ಬಳಕೆಯ ವಿಚಾರ ಕಳೆದ ವರ್ಷದಿಂದ ತೀವ್ರ ಚರ್ಚೆಯಲ್ಲಿದೆ. ಈ ಕುರಿತು ಇದೀಗ ತಿರುಪತಿ ಅಧಿಕಾರಿಯೊಬ್ಬರು ನೀಡಿರುವ ಹೇಳಿಕೆ ಬಾಲಾಜಿ ಭಕ್ತರಿಗೆ ಬಹುದೊಡ್ಡ ಆಘಾತವನ್ನು ನೀಡಿದೆ. ತಿರುಪತಿ ದೇವಸ್ಥಾನದಲ್ಲಿ (Tirupati temple) ಕಲಬೆರಕೆ ತುಪ್ಪವನ್ನು (Spurious Ghee) ಬಳಸಿ ಸುಮಾರು 20 ಕೋಟಿಗೂ ಹೆಚ್ಚು ಲಡ್ಡುಗಳನ್ನು ತಯಾರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಈ ಘಟನೆ 2019-24ರ ಅವಧಿಯಲ್ಲಿ ನಡೆದಿರುವುದಾಗಿ ಕೂಡ ಅವರು ತಿಳಿಸಿದ್ದಾರೆ.

ಕಳೆದ ವರ್ಷ ತಿರುಪತಿ ದೇವಸ್ಥಾನದ ಪ್ರಸಾದದಲ್ಲಿ ನಕಲಿ ತುಪ್ಪ ಬಳಕೆಯ ಬಗ್ಗೆ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಈ ಕುರಿತು ತನಿಖೆ ಕೈಗೊಳ್ಳಲಾಗುತ್ತಿದೆ. ಈ ನಡುವೆ ಇದೀಗ ಶ್ರೀ ವೆಂಕಟೇಶ್ವರ ದೇವಸ್ಥಾನವನ್ನು ನಿರ್ವಹಿಸುವ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಟ್ರಸ್ಟ್ ಮಂಡಳಿಯ ಅಧ್ಯಕ್ಷ ಬಿ.ಆರ್. ನಾಯ್ಡು ಅವರು 2019- 2024ರ ಅವಧಿಯಲ್ಲಿ ಒಟ್ಟು 48.76 ಕೋಟಿ ಲಡ್ಡುಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದ್ದು, ಇದನ್ನು ನಕಲಿ ತುಪ್ಪದಿಂದ ತಯಾರಿಸಲಾಗಿದೆ. ದೇವಾಲಯಕ್ಕೆ ಪ್ರತಿ ನಿತ್ಯ ಬರುವ ಭಕ್ತರು, ಪ್ರಸಾದ ಖರೀದಿ ವಿವರಗಳು ಮತ್ತು ಉತ್ಪಾದನೆ, ಮಾರಾಟದ ಅಂಕಿಅಂಶಗಳನ್ನು ಆಧರಿಸಿ ಈ ಲೆಕ್ಕಾಚಾರ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Sabarimala Temple: ಬಾಗಿಲು ತೆರೆದ ಶಬರಿಮಲೆ ಶ್ರೀ ಅಯ್ಯಪ್ಪ ಗರ್ಭಗುಡಿ, ಮಂಡಲ- ಮಕರವಿಳಕ್ಕು ಉತ್ಸವ ಆರಂಭ

ಕೇಂದ್ರ ತನಿಖಾ ದಳದ ನೇತೃತ್ವದ ವಿಶೇಷ ತನಿಖಾ ತಂಡ (SIT) ಈ ಪ್ರಕರಣದ ತನಿಖೆ ನಡೆಸುತ್ತಿದೆ. ತಿರುಪತಿಯಲ್ಲಿ ಕಳೆದ ವರ್ಷ ಬೆಳಕಿಗೆ ಬಂದಿರುವ ಕಲಬೆರಕೆ ಪ್ರಕರಣ ಪ್ರಸಾದದ ಪಾವಿತ್ರ್ಯವನ್ನು ಗಮನದಲ್ಲಿಟ್ಟುಕೊಂಡು ಖರೀದಿ ಮಾಡುವ ಲಕ್ಷಾಂತರ ಭಕ್ತರ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ. ಸುಮಾರು 250 ಕೋಟಿ ರೂ. ಮೌಲ್ಯದ ಪಾಮ್ ಎಣ್ಣೆ, ಪಾಮ್ ಕರ್ನಲ್ ಎಣ್ಣೆ ಮತ್ತು ಇತರ ವಿಷಕಾರಿ ಪದಾರ್ಥಗಳನ್ನು ಬಳಸಿದ 68 ಲಕ್ಷ ಕೆಜಿ ಕಲಬೆರಕೆ ತುಪ್ಪವನ್ನು ಉತ್ತರಾಖಂಡದ ಭೋಲೆ ಬಾಬಾ ಡೈರಿ ಮತ್ತು ಅದರ ಕೆಲವು ಕಂಪೆನಿಗಳು ಪೂರೈಸಿವೆ ಎಂದು ಎಸ್ ಐಟಿ ಹೇಳಿದೆ.

ಕಳೆದ ಐದು ವರ್ಷಗಳಲ್ಲಿ ಸುಮಾರು 11 ಕೋಟಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಆದರೆ ಯಾರೆಲ್ಲ ಕಲಬೆರಕೆ ತುಪ್ಪದಿಂದ ಮಾಡಿದ ಲಡ್ಡುಗಳನ್ನು ಖರೀದಿ ಮಾಡಿದ್ದಾರೆ ಎಂಬುದಕ್ಕೆ ದಾಖಲೆಗಳು ಇಲ್ಲ. ವಿವಿಐಪಿಗಳಿಗೂ ಕೂಡ ಲಡ್ಡುಗಳನ್ನು ಪ್ರತ್ಯೇಕವಾಗಿ ಮಾಡಲಾಗುವುದಿಲ್ಲ ಎಂದು ಟಿಟಿಡಿ ಹೇಳಿದೆ.

ಇದನ್ನೂ ಓದಿ: Astro Tips: ಕೈಗೊಂಡ ಕೆಲಸ ಸಂಪೂರ್ಣ ಸಕ್ಸಸ್‌ ಆಗಲು ಶನಿವಾರ ಈ ಕೆಲಸ ಮಾಡಿ..!

ಈ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಟಿಟಿಡಿ ಅಧ್ಯಕ್ಷ ಮತ್ತು ವೈಎಸ್‌ಆರ್‌ಸಿಪಿ ಸಂಸದ ವೈವಿ ಸುಬ್ಬಾ ರೆಡ್ಡಿ ಅವರನ್ನು ಎಸ್‌ಐಟಿ ಇತ್ತೀಚಿಗೆ ವಿಚಾರಣೆ ನಡೆಸಿತು ಹಾಗೂ ಅವರ ಮಾಜಿ ಸಹಾಯಕ ಚಿನ್ನ ಅಪ್ಪಣ್ಣ ಅವರನ್ನು ಬಂಧಿಸಲಾಗಿದೆ. ಟಿಟಿಡಿಯ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಎವಿ ಧರ್ಮ ರೆಡ್ಡಿ ಅವರನ್ನೂ ವಿಚಾರಣೆಗೆ ಒಳಪಡಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಡಿಸೆಂಬರ್ 15ರೊಳಗೆ ನೆಲ್ಲೂರಿನ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಕೆಯಾಗುವ ನಿರೀಕ್ಷೆ ಇದೆ.

ವಿದ್ಯಾ ಇರ್ವತ್ತೂರು

View all posts by this author