ಬೆಂಗಳೂರು: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಅಶ್ವಯುಜ ಮಾಸ, ಶುಕ್ಲ ಪಕ್ಷದ, ಉತ್ತರ ಭದ್ರಾಪದ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ಭವಿಷ್ಯದ ಬಗ್ಗೆ ಮಾಹಿತಿ ಇಲ್ಲಿದೆ.
ಮೇಷ ರಾಶಿ: ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗುವ ದಿನ ನಿಮ್ಮದಾಗುತ್ತದೆ. ಆದರೆ ಮಧ್ಯಾಹ್ನ ಬಳಿಕ ಯಾವುದೇ ಮುಖ್ಯ ನಿರ್ಧಾರ ಬೇಡ.
ವೃಷಭ ರಾಶಿ: ಈ ರಾಶಿಯವರಿಗೆ ಯಶಸ್ಸು ಸಿಗುವ ದಿನವಾಗಲಿದೆ. ಇಷ್ಟಾರ್ಥ ಸಿದ್ಧಿಯಾಗಲಿದ್ದು ಅತೀ ಹೆಚ್ಚಿನ ನೆಮ್ಮದಿ, ಖುಷಿ ಸಿಗುತ್ತದೆ. ಮುಂದಿನ ಕೆಲಸಕ್ಕೂ ಮಾರ್ಗದರ್ಶನ ದೊರೆಯಲಿದೆ.
ಮಿಥುನ ರಾಶಿ: ಇಂದು ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮಧ್ಯಾಹ್ನ ಬಳಿಕ ಕಾರ್ಯಕ್ಷೇತ್ರದಲ್ಲಿ ಮುಖ್ಯ ತಿರುವು ಪ್ರಾಪ್ತಿಯಾಗುತ್ತದೆ.
ಕಟಕ ರಾಶಿ: ಇಂದು ಮಧ್ಯಾಹ್ನವರೆಗೆ ನಾನಾ ರೀತಿಯ ಯೋಚನೆ ಹಾಗೂ ಕ್ಷೇಷ ಉಂಟಾಗಬಹುದು. ಆದರೆ ಮಧ್ಯಾಹ್ನ ಬಳಿಕ ಆತಂಕ, ಒತ್ತಡಗಳು ದೂರವಾಗಬಹುದು.
ಸಿಂಹ ರಾಶಿ: ಇಂದು ಉತ್ತಮ ದಿನವಾಗಲಿದೆ. ಪಾರ್ಟ್ನರ್ ಶಿಪ್ ವ್ಯವಹಾರದಲ್ಲಿ ಯಶಸ್ಸು ಸಿಗಬಹುದು. ಆದರೆ ಮಧ್ಯಾಹ್ನ ಬಳಿಕ ಸ್ನೇಹದಲ್ಲಿ ಒಡಕು ಉಂಟಾಗಿ ಏಕಾಂಗಿ ಎನ್ನುವ ಭಾವನೆ ಮೂಡಬಹುದು.
ಕನ್ಯಾ ರಾಶಿ: ಉತ್ತಮ ದಿನವಾಗಲಿದೆ. ಅಂದುಕೊಂಡ ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ದಾಂಪತ್ಯ ಹಾಗೂ ಪಾರ್ಟ್ನರ್ ಶಿಪ್ ವ್ಯವಹಾರದಲ್ಲೂ ನೆಮ್ಮದಿ. ವೈಯಕ್ತಿಕ ವಿಚಾರದ ಸಮಸ್ಯೆಯೂ ನಿವಾರಣೆ.
ವೈವಾಹಿಕ ಜೀವನದಲ್ಲಿ ನೆಮ್ಮದಿ ಬೇಕಾ? ಬೆಡ್ರೂಂನಲ್ಲಿ ಹೀಗಿರಲಿ ವಾಸ್ತು
ತುಲಾ ರಾಶಿ: ಇಂದು ಹಣಕಾಸಿನ ವಿಚಾರದಲ್ಲಿ ತೊಂದರೆ ಉಂಟಾಗಬಹುದು. ಆದರೆ ಮಧ್ಯಾಹ್ನ ಬಳಿಕ ಶತ್ರುಗಳನ್ನು ಹಿಮ್ಮೆಟ್ಟಿಸಿ ಯಶಸ್ಸು ಕಾಣಬಹುದು.
ವೃಶ್ಚಿಕ ರಾಶಿ: ಇಂದು ಉತ್ತಮ ದಿನವಾಗಲಿದೆ. ಆದರೆ ಇಂದು ಕೋರ್ಟ್, ಕಚೇರಿ ವ್ಯವಹಾರ ಹಾಗೂ ಕುಟುಂಬದ ಬಗ್ಗೆ ಹೆಚ್ಚು ಯೋಚನೆ ಮಾಡಬೇಕಾಗುತ್ತದೆ.
ಧನು ರಾಶಿ: ಇಂದು ಉತ್ತಮ ದಿನವಾಗಲಿದೆ. ಇಷ್ಟಾರ್ಥ ಸಿದ್ಧಿಯಾಗಲಿದ್ದು ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸಿಗುತ್ತದೆ. ಆರ್ಥಿಕವಾಗಿಯೂ ಪ್ರಗತಿ ಕಾಣುತ್ತೀರಿ.
ಮಕರ ರಾಶಿ: ಇಂದು ಉತ್ತಮ ದಿನವಾಗಲಿದೆ. ಕುಟುಂಬದ ಪ್ರೀತಿ ಗಳಿಸುತ್ತೀರಿ. ಅಂದುಕೊಂಡ ಕೆಲಸ ಕಾರ್ಯದಲ್ಲಿ ಜಯ ನಿಮ್ಮದಾಗುತ್ತದೆ.
ಕುಂಭ ರಾಶಿ: ಇಂದು ಕಷ್ಟದ ದಿನವಾಗಲಿದೆ. ಕೆಲಸ ಕಾರ್ಯದಲ್ಲಿ ತೊಂದರೆ ಉಂಟಾಗುವ ಸಾಧ್ಯತೆ. ಯಾವುದೆ ಮುಖ್ಯ ನಿರ್ಧಾರಗಳು ಇಂದು ಬೇಡ.
ಮೀನ ರಾಶಿ: ಇಂದು ಕಷ್ಟಕದ ದಿನವಾಗಲಿದೆ. ಪ್ರೀತಿ, ಪ್ರೇಮ ವಿಚಾರದಲ್ಲಿ ಬೇಸರ ಉಂಟಾಗಬಹುದು. ಮಧ್ಯಾಹ್ನ ಬಳಿಕ ಕೆಲವೊಂದು ಸಮಸ್ಯೆಗೆ ಪರಿಹಾರ ಸಿಗಬಹುದು.