ಬೆಂಗಳೂರು: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ, ಅಶ್ವಿನಿ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಮಾಹಿತಿ ಇಲ್ಲಿದೆ.
ಮೇಷ ರಾಶಿ: ಈ ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಹಿಂದಿನ ಎರಡು ಮೂರು ದಿನದಲ್ಲಿ ಇದ್ದ ತೊಂದರೆ ಎಲ್ಲವೂ ಮಾಯವಾಗುತ್ತದೆ. ಕೆಲಸ ಕಾರ್ಯದಲ್ಲಿ ಅತೀ ಹೆಚ್ಚಿನ ಯಶಸ್ಸು ನೀವು ಕಂಡುಕೊಳ್ಳುತ್ತೀರಿ.
ವೃಷಭ ರಾಶಿ: ಈ ರಾಶಿಯವರಿಗೆ ಇಂದು ಕಷ್ಟಕರವಾದ ದಿನವಾಗಿದೆ. ಮುಖ್ಯವಾದ ನಿರ್ಧಾರವನ್ನು ಇಂದು ಕೈಗೊಳ್ಳಲು ಹೋಗಬೇಡಿ. ಧನ ವ್ಯಯ ಆಗುಗ ಸಾಧ್ಯತೆ ಇರುತ್ತದೆ. ಅದೇ ರೀತಿ ಆರೋಗ್ಯ ಸಮಸ್ಯೆಯ ಬಗ್ಗೆ ಗಮನ ನೀಡಬೇಕಾಗುತ್ತದೆ.
ಮಿಥುನ ರಾಶಿ: ಇಂದು ಈ ರಾಶಿಗೆ ಉತ್ತಮವಾದ ದಿನವಾಗಿದೆ. ಕಾರ್ಯಕ್ಷೇತ್ರದಲ್ಲಿ ಹೆಚ್ಚಿನ ಯಶಸ್ಸು ನಿಮ್ಮದಾಗುತ್ತದೆ. ಮಿತ್ರರಿಂದ ಧನ ಲಾಭ ಸಿಗುತ್ತದೆ. ಗುಂಪು ಕೆಲಸದಿಂದಲೂ ಯಶಸ್ಸು ನಿಮ್ಮದಾಗುತ್ತದೆ.
ಕಟಕ ರಾಶಿ: ಕಟಕ ರಾಶಿ ಅವರಿಗೆ ಇಂದು ಉತ್ತಮವಾದ ದಿನವಾಗಿದೆ. ಕಾರ್ಯಕ್ಷೇತ್ರದಲ್ಲಿ ದೊಡ್ಡದಾದ ಯಶಸ್ಸು ನೀವು ಕಂಡುಕೊಳ್ಳಬಹುದು. ನೀವು ಮಾಡಿದ ಎಲ್ಲ ಕೆಲಸಗಳಿಗೂ ಉತ್ತಮ ಪ್ರತಿಫಲಗಳು ಸಿಗುತ್ತವೆ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಭಾಗ್ಯೋದಯವಾದ ದಿನ ಆಗಿ ಇರುತ್ತದೆ. ಹಿಂದಿನ ಎರಡು ಮೂರು ದಿನದಲ್ಲಿ ಇದ್ದ ಕಷ್ಟ ಎಲ್ಲವೂ ಮಾಯವಾಗುತ್ತದೆ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಮಿತ್ರರು ಹಾಗೂ ಪ್ರೀತಿ ಪಾತ್ರರು ನಿಮಗೆ ಬೇಕಾದ ಸಹಕಾರ ನೀಡದೆ ಇರಬಹುದು. ಇದರಿಂದ ನಿಮಗೆ ಬೇಸರ ಮೂಡಬಹುದು.
ತುಲಾ ರಾಶಿ: ತುಲಾ ರಾಶಿ ಅವರಿಗೆ ಇಂದು ಉತ್ತಮವಾದ ದಿನವಾಗಿದೆ. ಸಾಮಾಜಿಕವಾಗಿ ಅತೀ ಹೆಚ್ಚಿನ ಯಶಸ್ಸು ನೀವು ಕಾಣಬಹುದು. ಎಲ್ಲ ರೀತಿಯಿಂದಲೂ ಸಹಕಾರ ಪ್ರಾಪ್ತಿಯಾಗಬಹುದು.
Vastu Tips: ಮಲಗುವ ಕೋಣೆಯಲ್ಲಿ ಡ್ರೆಸ್ಸಿಂಗ್ ಟೇಬಲ್ ಎಲ್ಲಿರಬೇಕು? ದಾಂಪತ್ಯ ಸುಖಕ್ಕೆ ವಾಸ್ತು ಹೇಳುವ ನಿಯಮ ಇದು!
ವೃಶ್ಚಿಕ ರಾಶಿ: ಈ ರಾಶಿಗೆ ಉತ್ತಮ ಫಲ ಕೊಡುವ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಸಿಗಲಿದ್ದು ಸೋಷಿಯಲ್ ಮೀಡಿಯಾದಲ್ಲಿ ಹಾಗೂ ಸಾಮಾಜಿಕ ಚಟುವಟಿಕೆಯಲ್ಲಿ ಲಾಭದಾಯಕವಾಗಿದೆ.
ಧನಸ್ಸು ರಾಶಿ: ಧನಸ್ಸು ರಾಶಿಗೆ ಇಂದು ಉತ್ತಮ ದಿನವಾಗಿದೆ. ಮಾನಸಿಕವಾಗಿ ನೆಮ್ಮದಿ ಇದ್ದು ಹಣದ ವ್ಯವಹಾರದಲ್ಲಿ ಯಶಸ್ಸು ಕಾಣುತ್ತೀರಿ. ಪೋಷಕರು ಮಕ್ಕಳ ಬಗ್ಗೆ ಗಮನ ನೀಡಬೇಕು.
ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ದೊಡ್ಡದಾದ ಯಶಸ್ಸು ನೀವು ಕಾಣಬಹುದು. ಬಿಸೆನೆಸ್ ವ್ಯವಹಾರದಲ್ಲೂ ಲಾಭ.
ಕುಂಭ ರಾಶಿ: ಈ ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಮಾದ್ಯಮ, ಸೋಷಿಯಲ್ ಮೀಡಿಯಾದಲ್ಲಿ ಇರೋರಿಗೆ ಉತ್ತಮವಾಗಿದೆ.
ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಕೆಲಸ ಕಾರ್ಯದಲ್ಲಿ ಹೆಚ್ಚು ಯಶಸ್ಸು, ಅಭಿವೃದ್ಧಿ ನೀವು ಕಾಣಬಹುದು. ಆದರೆ ಮನೆಯ ವಿಚಾರವಾಗಿ ಹೆಚ್ಚಿನ ಗಮನ ನೀಡಬೇಕಾಗುತ್ತದೆ.