ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಿನ ಭವಿಷ್ಯ, ಸೆಪ್ಟೆಂಬರ್ 16, 2026: ಬಹಳ ದಿನದಿಂದ ಅಂದುಕೊಂಡಿದ್ದ ಕೆಲಸ ಇಂದು ನೆರವೇರುತ್ತೆ; ಷೇರಿನಲ್ಲಿ ಲಾಭ

Horoscope Today September 16th 2026: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಕೃಷ್ಣೆಪಕ್ಷದ, ಷಷ್ಠಿ ತಿಥಿಯ, ಅನುರಾಧಾ ನಕ್ಷತ್ರದ ಸೆಪ್ಟೆಂಬರ್‌ 16ನೇ ತಾರೀಕಿನ ಈ ದಿನದ ಭವಿಷ್ಯದ ಮಾಹಿತಿ ಇಲ್ಲಿದೆ.

ಇಂದು ನಿಮ್ಮ ಕನಸು ನನಸಾಗುವ ದಿನ

ಇಂಟರ್‌ನೆಟ್ ಚಿತ್ರ -

Profile
Pushpa Kumari Sep 16, 2026 6:00 AM

ಬೆಂಗಳೂರು: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ, ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿಗಳ ಭವಿಷ್ಯದ ಬಗ್ಗೆ ಮಾಹಿತಿ ಇಲ್ಲಿದೆ.

ಮೇಷ ರಾಶಿ: ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಕೆಲಸದಲ್ಲಿ ಹೊಸ ಅವಕಾಶಗಳು ಒದಗಿಬರಬಹುದು. ಆದರೆ ಆತುರದಿಂದ ಯಾವುದೇ ನಿರ್ಧಾರ ಕೈಗೊಳ್ಳಲು ಹೋಗಬೇಡಿ.

ವೃಷಭ ರಾಶಿ: ಈ ರಾಶಿಯವರಿಗೆ ಕುಟುಂಬದಲ್ಲಿ ಸಂತಸದ ವಾತಾವರಣ ಇರುತ್ತದೆ. ಉದ್ಯೋಗದಲ್ಲಿ ಬಾಸ್‌ಗಳಿಂದ ಪ್ರಶಂಸೆ ಸಿಗಬಹುದು.

ಮಿಥುನ ರಾಶಿ: ಹೊಸ ಸಂಪರ್ಕಗಳು ಲಾಭ ತರಬಹುದು. ಬುದ್ದಿವಂತಿಕೆ ಉಪಯೋಗಿಸಿ ಮಾಡುವ ಕೆಲಸದಲ್ಲಿ ಯಶಸ್ಸು ಪ್ರಾಪ್ತಿಯಾಗುತ್ತದೆ. ಬರವಣಿಗೆ ಹಾಗೂ ಮಾತುಗಾರಿಕೆಯಲ್ಲಿ ಯಶಸ್ಸು ಸಿಗಲಿದೆ.

ಕಟಕ ರಾಶಿ: ಈ ರಾಶಿಯವರ ಮನಸ್ಸಿಗೆ ಬಹಳಷ್ಟು ನೆಮ್ಮದಿ ದೊರೆಯಲಿದೆ. ಕೆಲಸದಲ್ಲಿ ಬದಲಾವಣೆ ಅಥವಾ ಜವಾಬ್ದಾರಿಗಳು ಹೆಚ್ಚಾಗಬಹುದು.

ಶೌಚಾಲಯ ಮನೆಯ ಯಾವ ದಿಕ್ಕಿನಲ್ಲಿ ಇರಬೇಕು?

ಸಿಂಹ ರಾಶಿ: ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಕಚೇರಿಯಲ್ಲಿ ಉತ್ತಮ ಜವಾಬ್ದಾರಿ ನಿಮಗೆ ಸಿಗಬಹುದು‌. ಅದೇ ರೀತಿ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳಬಹುದು.

ಕನ್ಯಾ ರಾಶಿ: ಅಂದುಕೊಂಡ ಕೆಲಸ ಕಾರ್ಯಗಳಲ್ಲಿ ಯಶಸ್ಸು. ಆದರೆ ಇಂದು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡುವುದು ಸರಿಯಲ್ಲ.

ತುಲಾ ರಾಶಿ: ಪ್ರೀತಿಯಲ್ಲಿ ಶುಭ ಸುದ್ದಿ ಕೇಳುತ್ತೀರಿ. ವ್ಯಾಪರ ಹಾಗೂ ವೃತ್ತಿಯಲ್ಲಿ ಉತ್ತಮ ಬೆಳವಣಿಗೆ ಕಂಡು ಬರಲಿದೆ.

ವೃಶ್ಚಿಕ ರಾಶಿ: ಈ ರಾಶಿಯವರು ಯಾವುದೇ ಸವಾಲುಗಳನ್ನು ಧೈರ್ಯದಿಂದ ಎದುರಿಸುವಿರಿ. ಉದ್ಯೋಗದಲ್ಲಿ ಹೊಸ ಅವಕಾಶಗಳು ಸಿಗಬಹುದು.

ಧನು ರಾಶಿ: ಲಾಟರಿ, ಷೇರುಗಳಲ್ಲಿ ಹಣ ಸಿಗುವ ಸಾಧ್ಯತೆ ಇದೆ. ಹೊಸ ಯೋಜನೆಗಳಿಗೆ ಚಾಲನೆ ನೀಡಲು ಉತ್ತಮ ದಿನ.

ಮಕರ ರಾಶಿ: ಈ ರಾಶಿಯವರಿಗೆ ಇಂದು ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಹಿರಿಯರಿಂದ ಬೆಂಬಲ ದೊರೆಯಬಹುದು. ಕುಟುಂಬದಲ್ಲಿ ಸಂತೋಷ ಇರಲಿದೆ.

ಕುಂಭ ರಾಶಿ: ಹೊಸ ಆಲೋಚನೆಗಳು ಯಶಸ್ಸಿಗೆ ದಾರಿ ಮಾಡಿಕೊಡಬಹುದು. ಆರ್ಥಿಕವಾಗಿ ಹೆಚ್ಚು ಅಭಿವೃದ್ಧಿ ಕಾಣುತ್ತೀರಿ.

ಮೀನ ರಾಶಿ: ದೇವರ ಆಶೀರ್ವಾದದಿಂದ ಇಂದು ಮನಸ್ಸಿನ ಗೊಂದಲಗಳು ದೂರವಾಗಬಹುದು. ಇಂದು ತಾಳ್ಮೆಯಿಂದ ನಿರ್ಧಾರ ಕೈಗೊಳ್ಳಿ.