ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಿನ ಭವಿಷ್ಯ, ಅಕ್ಟೋಬರ್ 8, 2026: ಇಂದು ಈ ರಾಶಿಯವರ ಗೌರವ-ಪ್ರತಿಷ್ಠೆ ಹೆಚ್ಚಾಗುವ ದಿನ

Horoscope Today October 8th: ಪರಾಭವ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷದ, ಚತುರ್ದಶಿ ತಿಥಿ, ಉತ್ತರ ಪಾಲ್ಗುಣ ನಕ್ಷತ್ರದ ಅಕ್ಟೋಬರ್‌ 8ನೇ ತಾರೀಕಿನ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಇಂದು ಕೆಲವೊಂದು ವಿಚಾರದಲ್ಲಿ ಟೀಕೆ ಎದುರಿಸಬೇಕಾಗುತ್ತದೆ

ಸಾಂದರ್ಭಿಕ ಚಿತ್ರ -

Profile
Pushpa Kumari Oct 8, 2026 6:00 AM

ಬೆಂಗಳೂರು: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷದ, ಉತ್ತರ ಪಾಲ್ಗುಣ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿಯವರ ಭವಿಷ್ಯ ಹೇಗಿರಲಿದೆ ಎನ್ನುವ ಬಗ್ಗೆ ಮಾಹಿತಿ ಇಲ್ಲಿದೆ.

ಮೇಷ ರಾಶಿ: ಈ ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದ್ದು, ಸ್ನೇಹ- ಸಂಬಂಧದಲ್ಲಿ ಒಡಕು ಕಾಣಬಹುದು. ಬಾಸ್‌ಗಳಿಂದ ಕಿರಿಕಿರಿ ಉಂಟಾಗಬಹುದು. ಹಾಗಾಗಿ ತಾಳ್ಮೆಯಿಂದ ಆತ್ಮವಿಶ್ವಾಸದಿಂದ ಕೆಲಸ ಮಾಡಬೇಕಾಗುತ್ತದೆ.

ವೃಷಭ ರಾಶಿ: ಈ ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ವೈಯಕ್ತಿಕವಾಗಿ ಕೆಲವೊಂದು ಟೀಕೆಯನ್ನು ಕೇಳಬೇಕಾಗಿ ಬರಬಹುದು. ಹಾಗಾಗಿ ಸಂಯಮದಿಂದ ವರ್ತಿಸಬೇಕಾಗುತ್ತದೆ‌.

ಮಿಥುನ ರಾಶಿ: ಇಂದು ಉತ್ತಮ ದಿನವಾಗಲಿದೆ. ಸಾಮಾಜಿಕ ಚಟುವಟಿಕೆಯಲ್ಲಿ ಯಶಸ್ಸು ಸಿಗುತ್ತದೆ. ಗೌರವ ಪ್ರತಿಷ್ಠೆ ಹೆಚ್ಚಾಗುತ್ತದೆ. ಆದರೆ ಸ್ನೇಹ- ಸಂಬಂಧ ಬೆಳೆಸಿಕೊಳ್ಳುವ ಮುನ್ನ ಯೋಚಿಸಿ.

ಕಟಕ ರಾಶಿ: ಇಂದು ಕಷ್ಟದ ದಿನವಾಗಲಿದೆ. ಕುಟುಂಬದಲ್ಲಿ ಒಡಕು ಕಾಣಬಹುದು. ಸಿಟ್ಟು, ಕೋಪವನ್ನು ಇಂದು ಹತೋಟಿಯಲ್ಲಿ ಇಟ್ಟುಕೊಳ್ಳಬೇಕಾಗುತ್ತದೆ.

ಯಾವ ದಿಕ್ಕು ಯಾವ ಅನಾರೋಗ್ಯ ಸಮಸ್ಯೆಗೆ ಕಾರಣ?

‌ಸಿಂಹ ರಾಶಿ: ಇಂದು ಉತ್ತಮ ದಿನವಾಗಲಿದೆ. ಎರಡು ಮೂರು ದಿನದಲ್ಲಿ ಇದ್ದ ತೊಂದರೆ ಎಲ್ಲವೂ ಮಾಯವಾಗುತ್ತದೆ. ಆದರೆ ಸ್ನೇಹ ಸಂಬಂಧದಲ್ಲಿ ಒಡಕು ಕಾಣಬಹುದು.

ಕನ್ಯಾ ರಾಶಿ: ಇಂದು ಕಷ್ಟದ ದಿನವಾಗಲಿದ್ದು ಮನಸ್ಸಿಗೆ ನೆಮ್ಮದಿ ಇರುವುದಿಲ್ಲ‌. ನಿಮ್ಮ ಅಭಿಮಾನಕ್ಕೆ ದಕ್ಕೆ ತರಬಹುದು. ಕೆಲಸ ಕಾರ್ಯದಲ್ಲಿ ಅಡಚಣೆ ಉಂಟಾಗುವ ಸಾಧ್ಯತೆ ಇರುತ್ತದೆ.

ತುಲಾ ರಾಶಿ: ಇಂದು ಉತ್ತಮ ದಿನವಾಗಲಿದೆ. ಕೆಲಸ ಕಾರ್ಯದಲ್ಲಿ ಯಶಸ್ಸು ಉಂಟಾಗಬಹುದು. ಆದರೆ ವೈಯಕ್ತಿಕವಾಗಿ ಜಾಗರೂಕತೆಯಿಂದ ಇರಬೇಕಾಗುತ್ತದೆ.

ವೃಶ್ಚಿಕ ರಾಶಿ: ಇಂದು ಉತ್ತಮ ದಿನವಾಗಲಿದೆ. ಸಾಮಾಜಿಕ ಚಟುವಟಿಕೆಯಲ್ಲಿ ಯಶಸ್ಸು. ಗೌರವ ಹೆಚ್ಚಾಗಬಹುದು.

ಧನು ರಾಶಿ: ಇಂದು ಉತ್ತಮ ದಿನವಾಗಲಿದೆ. ಆದರೆ ಸ್ನೇಹ ಸಂಬಂಧದಲ್ಲಿ ಎಚ್ಚರ ವಹಿಸಿ. ನಿಮ್ಮ ಅಭಿಮಾನಕ್ಕೆ ಅಡಚಣೆ ಬರದಂತೆ ನೋಡಿಕೊಳ್ಳಿ.

ಮಕರ ರಾಶಿ: ಇಂದು ಕಷ್ಟದ ದಿನವಾಗಲಿದೆ. ಕೆಲಸ ಕಾರ್ಯದಲ್ಲಿ ತೊಂದರೆ ಉಂಟಾಗಬಹುದು. ಟೀಕೆಗಳನ್ನು ಇಂದು ಕೇಳಬೇಕಾಗಿ ಬರಬಹುದು‌.

ಕುಂಭ ರಾಶಿ: ಇಂದು ಉತ್ತಮ ದಿನವಾಗಲಿದೆ. ಸಂಸಾರದಲ್ಲಿ ನೆಮ್ಮದಿ ಹೆಚ್ಚಾಗುತ್ತದೆ. ಕೆಲಸ ಕಾರ್ಯದಲ್ಲಿ ಹಾಗೂ ಪ್ರೀತಿ ಪಾತ್ರರಿಂದ ನೆಮ್ಮದಿ.

ಮೀನ ರಾಶಿ: ಇಂದು ಉತ್ತಮ ದಿನವಾಗಲಿದೆ. ಸಾಮಾಜಿಕ ಚಟುವಟಿಕೆಯಲ್ಲಿ ಯಶಸ್ಸು, ಶತ್ರು ನಾಶವಾಗಲಿದೆ.