ಬೆಂಗಳೂರು: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ, ಸ್ವಾತಿ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಮಾಹಿತಿ ಇಲ್ಲಿದೆ.
ಮೇಷ ರಾಶಿ:ಈ ರಾಶಿಗೆ ಇಂದು ಉತ್ತಮವಾದ ದಿನವಾಗಿದ್ದು ಮನಸ್ಸಿಗೆ ನೆಮ್ಮದಿ ಇರುತ್ತದೆ. ಪ್ರೀತಿ - ಪಾತ್ರರಿಂದ ಅತೀಯಾದ ಖುಷಿಯ ಕ್ಷಣ ಕಳೆಯಬಹುದು. ಆದರೆ ಎಲ್ಲರ ಜೊತೆ ಸಂಯಮದಿಂದ ನಡೆದುಕೊಳ್ಳುವುದು ಉತ್ತಮ.
ವೃಷಭ ರಾಶಿ: ಈ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಿದೆ. ಸಾಮಾಜಿಕ ಚಟುವಟಿಕೆ ಯಲ್ಲಿ ಅತೀ ದೊಡ್ಡದಾದ ಬದಲಾವಣೆಯನ್ನು ಇಂದು ಕಾಣುತ್ತೀರಿ.ಕೆಲಸ ಕಾರ್ಯದಲ್ಲೂ ಹೆಚ್ಚಿನ ಯಶಸ್ಸು ನಿಮಗೆ ಪ್ರಾಪ್ತಿಯಾಗುತ್ತದೆ.
ಮಿಥುನ ರಾಶಿ: ಇಂದು ಈ ರಾಶಿಗೆ ಉತ್ತಮವಾದ ದಿನವಾಗಿದ್ದೂ ಮನಸ್ಸಿಗೆ ಕ್ಲೇಷ ಹೆಚ್ಚು ಇರುತ್ತದೆ. ನಿಮ್ಮ ಬುದ್ದಿವಂತಿಕೆ ಉಪಯೋಗಿಸಿ ಮಾಡುವ ಕೆಲಸದಲ್ಲಿ ಮಾತ್ರ ಯಶಸ್ಸು ಪ್ರಾಪ್ತಿಯಾಗುತ್ತದೆ. ಹಣಕಾಸಿನ ವಿಚಾರವಾಗಿ ಹಿನ್ನಡೆ ಎದುರಾಗಬಹುದು.
ಕಟಕ ರಾಶಿ: ಕಟಕ ರಾಶಿ ಅವರಿಗೆ ಕಷ್ಟಕರವಾದ ದಿನವಾಗಿದೆ. ಆಸ್ತಿ- ಪಾಸ್ತಿ ವಿಚಾರದಲ್ಲಿ ಕ್ಲಿಷ್ಟಕರವಾದ ವಾತಾವರಣ ಇರುತ್ತದೆ.ಯಾವುದೇ ಮುಖ್ಯ ನಿರ್ಧಾರ ಇಂದು ಕೈಗೊಳ್ಳುವುದು ಒಳಿತಲ್ಲ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಮನಸ್ಸಿಗೆ ನೆಮ್ಮದಿ ಕೊಡುವ ದಿನವಾಗಿದೆ. ಬಂಧು ಭಾಂದವರು ಹಾಗೂ ಮಿತ್ರರಿಂದ ಒಳಿತಾಗುತ್ತದೆ. ಮಾಧ್ಯಮ ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಕೆಲಸ ಮಾಡೋರಿಗೆ ಲಾಭದಾಯಕವಾಗಿದೆ. ಆತ್ಮವಿಶ್ವಾಸ ಕೂಡ ಇಂದು ಹೆಚ್ಚಿದೆ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಇಂದು ಬ್ಯಾಂಕ್, ಹಣಕಾಸಿನ ವಿಚಾರದಲ್ಲಿ ಅತ್ಯುತ್ತಮವಾದ ದಿನವಾಗಿದೆ. ಕಾರ್ಯಕ್ಷೇತ್ರದಲ್ಲಿ ಹೆಚ್ಚಿನ ಯಶಸ್ಸು ಸಿಗುತ್ತದೆ. ಮನೆಯಲ್ಲೂ ಕೂಡ ನೆಮ್ಮದಿ ಪ್ರಾಪ್ತಿ ಯಾಗುತ್ತದೆ.
ತುಲಾ ರಾಶಿ: ತುಲಾ ರಾಶಿ ಅವರಿಗೆ ಹಿಂದಿನ ಎರಡು ಮೂರು ದಿನದಲ್ಲಿ ಇದ್ದ ತೊಂದರೆಗೆ ಪರಿಹಾರ ಸಿಗುತ್ತದೆ. ಮನಸ್ಸಿಗೆ ನೆಮ್ಮದಿ ಇದ್ದು ಮುಂದೆ ಏನು ಮಾಡಬೇಕು ಎನ್ನುವ ಮಾರ್ಗದರ್ಶನ ನಿಮಗೆ ಸಿಗುತ್ತದೆ.
Vastu Tips: ವಾಸ್ತು ಪ್ರಕಾರ ಈ ಗಿಡಗಳನ್ನು ಗಿಫ್ಟ್ ಮಾಡಬೇಡಿ! ಅದೃಷ್ಟಕ್ಕಿಂತ ದುಷ್ಪರಿಣಾಮವೇ ಹೆಚ್ಚು?
ವೃಶ್ಚಿಕ ರಾಶಿ: ಈ ರಾಶಿಗೆ ಉತ್ತಮವಾದ ದಿನವಾಗಿದ್ದು ಮನಸ್ಸಿಗೆ ನೆಮ್ಮದಿ ಇರುತ್ತದೆ. ಆದರೆ ಮಧ್ಯಾಹ್ನ ಬಳಿಕ ಮನಸ್ಸಿಗೆ ಹೆಚ್ಚಿನ ಕ್ಲೇಷ ಉಂಟಾಗುವ ಸಾಧ್ಯತೆ ಇದೆ. ಸ್ನೇಹಿತರಿಂದ ಬೇಸರ ಉಂಟಾಗುವ ಸಾಧ್ಯತೆ ಕೂಡ ಇದೆ.
ಧನಸ್ಸು ರಾಶಿ: ಧನಸ್ಸು ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಕಾರ್ಯಕ್ಷೇತ್ರದಲ್ಲಿ ಯಶಸ್ಸು ಹಾಗೂ ಧನಲಾಭದ ಸೂಚನೆಗಳು ಕೂಡ ಇವೆ. ಆದರೆ ಸಂಸಾರದಲ್ಲಿ ಒಡಕು ಕಾಣುವ ಸಾಧ್ಯತೆ ಇದೆ.
ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮವಾದ ದಿನವಾಗಿದ್ದು ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸಿಗುತ್ತದೆ. ಹಾಗೂ ಹೆಚ್ಚಿನ ಪ್ರಗತಿಯನ್ನು ನೀವು ಕಾಣುತ್ತೀರಿ.
ಕುಂಭ ರಾಶಿ: ಈ ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಇಂದು ಎಲ್ಲ ತೊಂದರೆಗಳನ್ನು ಮೆಟ್ಟಿ ನಿಲ್ಲಬೇಕಾದ ಸಂದರ್ಭ ಬರಬಹುದು.
ಮೀನ ರಾಶಿ: ಮೀನ ರಾಶಿಯವರಿಗೆ ಆಧ್ಯಾತ್ಮಿಕವಾಗಿ ಹೆಚ್ಚಿನ ಪ್ರಗತಿಯನ್ನು ಕಾಣುತ್ತೀರಿ. ಅದೇ ರೀತಿ ಭಗವಂತನ ಆಶೀರ್ವಾದದಿಂದ ಯಶಸ್ಸು ತರುತ್ತದೆ. ಆದರೆ ಆರೋಗ್ಯದ ಬಗ್ಗೆ ಜಾಗೃತರಾಗಿರಿ.