ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ದಿನ ಭವಿಷ್ಯ, ಫೆಬ್ರವರಿ 21, 2026: ಬುಧನ ಪ್ರಭಾವದಿಂದ ಈ ರಾಶಿಗೆ ಇಂದು ಎದುರಾಗಲಿದೆ ಸಂಕಷ್ಟ!

Horoscope Today February 21: ಇಂದು ವಿಶ್ವವಸು ನಾಮ ಸಂವತ್ಸರದ ಉತ್ತರಾಯನ ಶರದೃತು ಪಾಲ್ಗುಣಿ ಮಾಸೆ, ಶುಕ್ಷ ಪಕ್ಷದ, ಚತುರ್ಥಿ ತಿಥಿ, ರೇವತಿ ನಕ್ಷತ್ರದ ಫೆಬ್ರವರಿ 21ನೇ ತಾರೀಖಿನ ಶನಿವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ

ಇಂಟರ್ ನೆಟ್ ಚಿತ್ರ

ಬೆಂಗಳೂರು: ಇಂದು ವಿಶ್ವವಸು ನಾಮ ಸಂವತ್ಸರದ ಉತ್ತರಾಯನ ಶರದೃತು, ಪಾಲ್ಗುಣಿ ಮಾಸೆ, ರೇವತಿ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದಂತೆ ನಿಮ್ಮ ಭವಿಷ್ಯ ಹೇಗಿದೆ ಎಂದು ತಿಳಿಯಿರಿ.

ಮೇಷ ರಾಶಿ: ಇಂದು ರೇವತಿ ನಕ್ಷತ್ರ ಇದ್ದು ಅಧಿಪತಿ ಬುಧ ಆಗಿದ್ದಾನೆ. ಹಾಗಾಗಿ ಹೆಚ್ಚಿನವರಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಮುಖ್ಯವಾದ ನಿರ್ಧಾರಗಳು ಯಾವುದೇ ಬೇಡ. ಅದರ ಜೊತೆ ಮಾತುಗಳನ್ನು ಕಡಿಮೆ ಮಾಡಿದರೆ ಒಳ್ಳೆಯದು.

ವೃಷಭ ರಾಶಿ: ಇಂದು ವೃಷಭ ರಾಶಿ ಅವರಿಗೆ ಅತೀ ಉತ್ತಮ ವಾದ ದಿನವಾಗಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು ಮನಸ್ಸಿಗೆ ನೆಮ್ಮದಿ ಇರುತ್ತದೆ.ಅತೀ ಹೆಚ್ಚಿನ ಲಾಭ ಮಿತ್ರರಿಂದ ಸಿಗುತ್ತದೆ.

ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರಿಗೆ ಕಾರ್ಯಕ್ಷೇತ್ರದಲ್ಲಿ ಅತೀ ಹೆಚ್ಚಿನ ಯಶಸ್ಸು ಸಿಗುತ್ತದೆ. ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಆದರೆ ಯಾರ ಬಳಿಯೂ ಏನನ್ನು ಶೇರ್ ಮಾಡಿಕೊಳ್ಳದೆ ನಿಮ್ಮ ಪಾಡಿಗೆ ನೀವು ಇರುತ್ತೀರಿ.

ಕಟಕ ರಾಶಿ: ಕಟಕ ರಾಶಿ ಅವರಿಗೆ ಭಾಗ್ಯೋದಯವಾದ ದಿನ ಆಗಿದ್ದು ಮುಂದೇನು ಮಾಡಬೇಕು ಅನ್ನುವ ಮಾರ್ಗದರ್ಶನ ನಿಮಗೆ ಸಿಗುತ್ತದೆ.

ಸಿಂಹ ರಾಶಿ: ಸಿಂಹ ರಾಶಿ ಅವರಿಗೆ ಕಷ್ಟಕರವಾದ ದಿನವಾಗಿದೆ. ಆದರೆ ನಿಮ್ಮ ಪಾಡಿಗೆ ನೀವು ಇರಲು ಇಷ್ಟ ಪಡುತ್ತೀರಿ.

Vastu Tips: ಮನೆ ಸಮೀಪ ತಾಳೆ ಮರವಿದ್ದರೆ ಎದುರಾಗುವುದೇ ಸಮಸ್ಯೆ?

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ನಿಮ್ಮ ಪ್ರೀತಿ ಪಾತ್ರರಿಂದ ನಿಮಗೆ ಸಹಕಾರ ‌ಸಿಗುತ್ತದೆ. ಆದ್ದರಿಂದ ನಿಮ್ಮ ಮನಸ್ಸಿಗೆ ಅತೀ ಹೆಚ್ಚಿನ ನೆಮ್ಮದಿ ಸಿಗುತ್ತದೆ.

ತುಲಾ ರಾಶಿ: ತುಲಾ ರಾಶಿಯವರಿಗೆ ನಿಮ್ಮ ಪ್ರೀತಿ ಪಾತ್ರರಿಂದ ಅತೀ ಹೆಚ್ಚಿನ ಸಹಕಾರ ಸಿಗುತ್ತದೆ. ಸಾಮಾಜಿಕ ಚಟುವಟಿಕೆಯಲ್ಲಿ ಜಯ ಪ್ರಾಪ್ತಿಯಾಗುತ್ತದೆ.

ವೃಶ್ಚಿಕ ರಾಶಿ: ವೃಶ್ಚಿಕ ರಾಶಿ ಅವರಿಗೆ ನಿಮ್ಮ ಬುದ್ದಿವಂತಿಕೆಯಿಂದ ಯಶಸ್ಸು ಸಿಗುತ್ತದೆ.‌ ಪ್ರೇಮ,ಪ್ರೀತಿ ದಾಂಪತ್ಯದಲ್ಲಿ ಇದ್ದ ತೊಂದರೆಗಳು ಇಂದು ಬಗೆಹರಿಯುತ್ತದೆ.

ಧನಸ್ಸು ರಾಶಿ: ಧನಸ್ಸು ರಾಶಿ ಅವರಿಗೆ ಸಂಸಾರದ ತಾಪತ್ರಯಗಳು,ಕೋರ್ಟ್, ಕಛೇರಿ ಇತ್ಯಾದಿಗಳ ಬಗ್ಗೆ ಮನಸ್ಸಿಗೆ ಬೇಸರ ಆಗುವ ಸಾಧ್ಯತೆ ಇರುತ್ತದೆ.

ಮಕರ ರಾಶಿ: ಮಕರ ರಾಶಿಯವರಿಗೆ ಅತೀ ಉತ್ತಮವಾದ ದಿನವಾಗಿದೆ.ಮನಸ್ಸಿಗೆ ನೆಮ್ಮದಿ ಸಿಗಲಿದ್ದು ಸಾಮಾಜಿಕವಾಗಿ ಯಶಸ್ಸು ಗಳಿಸುತ್ತೀರಿ. ಮಾಧ್ಯಮದಲ್ಲಿ ಇರೋರಿಗೆ ಅತೀ ಉತ್ತಮವಾದ ದಿನವಾಗಿದೆ.

ಕುಂಭರಾಶಿ: ಈ ರಾಶಿಯವರಿಗೆ ಸಂಸಾರದ ತಾಪತ್ರಯಗಳು ,ಜವಾಬ್ದಾರಿ ಹೆಚ್ಚು ಇರುತ್ತದೆ. ಆದರೆ ಕುಟುಂಬದವರಿಂದಲೇ ನಿಮಗೆ ಸಂತೋಷ ಮತ್ತು ಅನುಕೂಲ ಪ್ರಾಪ್ತಿಯಾಗುತ್ತದೆ.

ಮೀನ ರಾಶಿ: ಮೀನ ರಾಶಿಗೆ ಅತೀ ಉತ್ತಮವಾದ ದಿನವಾಗಿದೆ.. ಮನಸ್ಸಿಗೆ ನೆಮ್ಮದಿ ‌ಇದ್ದು ಹಿಂದಿನ ಎರಡು ಮೂರು ದಿನದಲ್ಲಿ ಇದ್ದ ತೊಂದರೆ ಎಲ್ಲವೂ ಬಗೆಹರಿಯುತ್ತದೆ