ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದಿನ ಭವಿಷ್ಯ, ಸೆಪ್ಟೆಂಬರ್ 2, 2026: ಈ ರಾಶಿಗೆ ಇಂದು ವೃತ್ತಿಯಲ್ಲಿ ಪ್ರಗತಿ!

Horoscope Today September 2nd:ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ, ಪೌರ್ಣಮಿ ತಿಥಿ, ಶತಭಿಷಾ ನಕ್ಷತ್ರದ, ಸೆಪ್ಟೆಂಬರ್‌ 2ನೇ ತಾರೀಖಿನ ಬುಧವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ

ಇಂಟರ್ ನೆಟ್ ಚಿತ್ರ

ಬೆಂಗಳೂರು: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ, ಶತಭಿಷಾ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಮಾಹಿತಿ ಇಲ್ಲಿದೆ.

ಮೇಷ ರಾಶಿ: ಈ ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಖುಷಿಯಿಂದ ಇಂದು ಸಮಯ ಕಳೆಯುತ್ತೀರಿ. ಮೋಜು, ಮಸ್ತಿ ಮಾಡುವ ದಿನ ನಿಮ್ಮದಾಗುತ್ತದೆ. ಆರ್ಥಿಕವಾಗಿಯೂ ಇಂದು ಅಭಿವೃದ್ಧಿ ಕಾಣಬಹುದು.

ವೃಷಭ ರಾಶಿ: ಈ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಿದೆ. ಕೆಲಸ ಕಾರ್ಯದಲ್ಲಿ ಯಶಸ್ಸು ಹಾಗೂ ಇಷ್ಟಾರ್ಥ ಸಿದ್ದಿಯಾಗುತ್ತದೆ. ಅಣ್ಣ ತಮ್ಮಂದಿರು ಹಾಗೂ ಅಕ್ಕ ತಮ್ಮಂದಿರ ಜೊತೆ ಇಂದು ಬಹಳ ಖುಷಿಯಿಂದ ಇರುತ್ತೀರಿ.

ಮಿಥುನ ರಾಶಿ: ಇಂದು ಈ ರಾಶಿಗೆ ಉತ್ತಮವಾದ ದಿನವಾಗಿದೆ. ಅದೃಷ್ಟ ಪರೀಕ್ಷೆ ಇಂದು ನಡೆಯಲಿದ್ದು ಭಾಗ್ಯೋದಯವಾದ ದಿನ ನಿಮ್ಮದಾಗುತ್ತದೆ. ಹಿರಿಯರ ಹಾಗೂ ಭಗವಂತನ ಆಶೀರ್ವಾದ ಇಂದು ಪ್ರಮುಖವಾಗುತ್ತದೆ.

ಕಟಕ ರಾಶಿ: ಕಟಕ ರಾಶಿ ಅವರಿಗೆ ಇಂದು ಕಷ್ಟಕರವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಅಷ್ಟಮ ಭಾವದಲ್ಲೂ ಚಂದ್ರ ಇರುವುದರಿಂದ ಬಹಳಷ್ಟು ಭಾವುಕತೆ ಉಂಟಾಗಬಹುದು.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಪಾರ್ಟ್ನರ್‌ಶಿಪ್‌ ವ್ಯವಹಾರ ಹಾಗೂ ದಾಂಪತ್ಯದಲ್ಲಿ ನೆಮ್ಮದಿಯನ್ನು ಕಾಣುತ್ತೀರಿ. ಕೆಲಸ ಕಾರ್ಯದಲ್ಲೂ ಹೆಚ್ಚಿನ ಯಶಸ್ಸು ನೀವು ಕಾಣುತ್ತೀರಿ.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಶತ್ರುಗಳು ಹಿಮ್ಮೆಟ್ಟಬಹುದು. ಬಿಸೆನೆಸ್ ವ್ಯವಹಾರದಲ್ಲೂ ಇಂದು ಲಾಭದಾಯಕವಾದ ದಿನ ನಿಮ್ಮದಾಗುತ್ತದೆ.

ತುಲಾ ರಾಶಿ: ತುಲಾ ರಾಶಿ ಅವರಿಗೆ ಇಂದು ಉತ್ತಮವಾದ ದಿನವಾಗಿದೆ. ಆದರೆ ಹಣಕಾಸಿನ ವಿಚಾರದಲ್ಲೂ ತೊಂದರೆಯನ್ನು ಎದುರಿಸಬೇಕಾಗಿ ಬರಬಹುದು. ಯಾರ ಜೊತೆಗೂ ವ್ಯವಹಾರವನ್ನು ಇಂದು ಮಾಡಲು ಹೋಗಬೇಡಿ.

Vastu Tips: ಮನೆಯಲ್ಲಿ ಮೆಣಸಿನ ಗಿಡ ನೆಡಬಹುದೇ? ವಾಸ್ತು ಶಾಸ್ತ್ರ ಏನು ಹೇಳುತ್ತದೆ ಮೊದಲು ತಿಳಿಯಿರಿ!

ವೃಶ್ಚಿಕ ರಾಶಿ: ಈ ರಾಶಿಗೆ ಕೆಲಸ ಕಾರ್ಯದಲ್ಲಿ ಇಂದು ತೊಂದರೆಗಳು ಎದುರಾಗುವ ದಿನವಾಗಿದೆ. ಕೋರ್ಟ್ ,ಕಚೇರಿ ವ್ಯವಹಾರದಲ್ಲೂ ತೊಂದರೆಯನ್ನು ಎದುರಿಸಬೇಕಾಗಿ ಬರಬಹುದು.

ಧನಸ್ಸು ರಾಶಿ: ಧನಸ್ಸು ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಮಾಧ್ಯಮ ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಇರೋರಿಗೆ ಲಾಭದಾಯಕವಾಗಿದೆ.

ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಸಂಸಾರದ ಬಗ್ಗೆ ಹೆಚ್ಚಿನ ಗಮನವನ್ನು ನೀಡಬೇಕಾಗುತ್ತದೆ. ಆರೋಗ್ಯ, ಹಾಗೂ ಹಣಕಾಸಿನ ವಿಚಾರದ ಬಗ್ಗೆ ಗಮನ ನೀಡಬೇಕಾಗುತ್ತದೆ.

ಕುಂಭ ರಾಶಿ: ಈ ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ನಿಮ್ಮ ರಾಶಿಗೆ ಚಂದ್ರ ಬಂದಿರುವುದರಿಂದ ನಾಲ್ಕೈದು ದಿನಗಳಿಂದ ಇದ್ದ ತೊಂದರೆ ನಿವಾರಣೆಯಾಗಬಹುದು.

ಮೀನ ರಾಶಿ: ಮೀನ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ‌. ಆದರೆ ಮುಖ್ಯ ನಿರ್ಧಾರವನ್ನು ಇಂದು ಮಾಡಲು ಹೋಗಬೇಡಿ. ಕೆಲಸ ಕಾರ್ಯದಲ್ಲಿ ಹೆಚ್ಚಿನ ತೊಂದರೆ ಎದುರಿಸಬೇಕಾಗಿ ಬರಬಹುದು.