ಬಿಗ್​ಬಾಸ್ ಬಿಹಾರ ರಿಸಲ್ಟ್​ ಫೋಟೋ ಗ್ಯಾಲರಿ ಫ್ಯಾಷನ್​ ವಿಶ್ವವಾಣಿ ಪ್ರಾಪರ್ಟಿ ವಿದೇಶ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Horoscope Today November 15th: ಇಂದು ಈ ರಾಶಿಗೆ ಆರ್ಥಿಕ ವ್ಯವಹಾರದಲ್ಲಿ ಯಶಸ್ಸು- ಮಾನಸಿಕವಾಗಿಯೂ ನೆಮ್ಮದಿ!.

ನಿತ್ಯ ಭವಿಷ್ಯ ನವೆಂಬರ್‌ 15, 2025: ಇಂದು ವಿಶ್ವವಸು ನಾಮ ಸಂವತ್ಸರದ ದಕ್ಷಿಣಾಯನ ವರ್ಷ ಶರದೃತು ಕಾರ್ತಿಕ ಮಾಸೆ ಕೃಷ್ಣ ಪಕ್ಷ, ಏಕಾದಶಿ ತಿಥಿ, ಉತ್ತರ ಪಾಲ್ಗುಣಿ ನಕ್ಷತ್ರದ ನವೆಂಬರ್ 15 ನೇ ತಾರೀ ಖಿನ ಶನಿವಾರದ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೀಗಿದೆ.

ಇಂದು ಈ ರಾಶಿಗೆ ಆರ್ಥಿಕವಾಗಿ ಲಾಭ: ಮನಸ್ಸಿಗೂ ನೆಮ್ಮದಿ!

ದಿನ ಭವಿಷ್ಯ -

Profile
Pushpa Kumari Nov 15, 2025 6:00 AM

ಬೆಂಗಳೂರು: ಇಂದು ವಿಶ್ವವಸುನಾಮ ಸಂವತ್ಸರದ ದಕ್ಷಿಣಾಯನ ಶರದೃತು ಕಾರ್ತಿಕ ಮಾಸೆ, ಕೃಷ್ಣ ಪಕ್ಷದ ಏಕಾದಶಿ ತಿಥಿ, ಉತ್ತರ ಪಾಲ್ಗುಣಿ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದಂತೆ ನಿಮ್ಮ ಭವಿಷ್ಯ ಹೇಗಿದೆ ಎಂದು ತಿಳಿಯಿರಿ.

ಮೇಷ ರಾಶಿ: ಉತ್ತರ ಪಾಲ್ಗುಣಿ ನಕ್ಷತ್ರದ ಅಧಿಪತಿ ರವಿ ಆಗಿದ್ದಾನೆ.‌ ಇದರಿಂದ ಎಲ್ಲ ರಾಶಿಗೂ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಯವರಿಗೆ ಇಂದು ಮಧ್ಯಾಹ್ನವರೆಗೆ ಕ್ಲಿಷ್ಟಕರವಾದ ದಿನವಾಗಿದೆ. ಆದರೆ ಮಧ್ಯಾಹ್ನ ಬಳಿಕ ಎಲ್ಲ ಸಮಸ್ಯೆ ಬಗೆಹರಿಯಲಿದೆ.‌ ಇದರಿಂದ ಅತೀ ಹೆಚ್ಚಿನ ನೆಮ್ಮದಿಯನ್ನು ನೀವು ಕಾಣುತ್ತೀರಿ.

ವೃಷಭ ರಾಶಿ: ವೃಷಭ ರಾಶಿ ಅವರಿಗೆ ಮಧ್ಯಾಹ್ನವರೆಗೂ ಕೂಡ ಸಂಸಾರದ ತಾಪತ್ರಯಗಳು ಹೆಚ್ಚಾಗಬಹುದು.‌ ಆದರೆ ಬಿಸೆನೆಸ್ ವ್ಯವಹಾರದಲ್ಲಿ ಲಾಸ್ ಆಗುವ ಸಾಧ್ಯತೆ ಇರುತ್ತದೆ. ಮಧ್ಯಾಹ್ನ ಬಳಿಕ ಕೆಲವೊಂದು ಸಮಸ್ಯೆ ಬಗೆಹರಿಯಬಹುದು.

ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರಿಗೆ ಮಧ್ಯಾಹ್ನವರೆಗೂ ಅತೀ ಅನುಕೂಲಕರ ವಾದ ದಿನವಾಗಿದೆ. ಮಧ್ಯಾಹ್ನ ಬಳಿಕ ಸಂಸಾರದ ತಾಪತ್ರಯಗಳು ಬರಬಹುದು.‌ ಹಾಗಾಗಿ ಈ ಬಗ್ಗೆ ಗಮನವನ್ನು ನೀಡಲೇ ಬೇಕಾಗುತ್ತದೆ.

ಕಟಕ ರಾಶಿ: ಕಟಕ ರಾಶಿ ಅವರಿಗೆ ಮಧ್ಯಾಹ್ನ ವರೆಗೂ ಸಂಸಾರದ ವಿಚಾರದಲ್ಲಿ ನೆಮ್ಮದಿ ಸಿಗುತ್ತದೆ.‌ ಮಧ್ಯಾಹ್ನ ಬಳಿಕ ನಿಮ್ಮ ಬಂಧು- ಬಾಂಧವರಿಂದ ಕೂಡ ಖುಷಿಯನ್ನು ಕಾಣುತ್ತೀರಿ.‌

ಸಿಂಹ ರಾಶಿ: ಸಿಂಹ ರಾಶಿ ಅವರಿಗೆ ಮಧ್ಯಾಹ್ನವರೆಗೂ ಕೆಲಸ ಕಾರ್ಯದ ಬಗ್ಗೆ ಆಸಕ್ತಿ ಹೆಚ್ಚು ಇರುತ್ತದೆ. ಮಧ್ಯಾಹ್ನ ಬಳಿಕ ಕುಟುಂಬದ ಬಗ್ಗೆ ನೀವು ಒಲವು ಮೂಡಿಸಬೇಕಾಗುತ್ತದೆ. ಇದರಿಂದ ಮನೆಯವರಿಗೂ ಕೂಡ ಖುಷಿ ಸಿಗುತ್ತದೆ.

ಕನ್ಯಾ ರಾಶಿ: ಕನ್ಯಾ ರಾಶಿ ಅವರಿಗೆ ಮಧ್ಯಾಹ್ನ ವರೆಗೂ ಮನಸ್ಸಿಗೆ ನಾನಾ ರೀತಿಯ ಕ್ಷೇಷ ಇರುತ್ತದೆ. ಮಧ್ಯಾಹ್ನ ಬಳಿಕ ಎಲ್ಲವೂ ಬಗೆಹರಿದು ಮಾರ್ಗದರ್ಶನ ಪ್ರಾಪ್ತಿಯಾಗುತ್ತದೆ. ಮನಸ್ಸಿಗೆ ಅತೀ ಖುಷಿ ಸಿಗಲಿದೆ

ಇದನ್ನೂ ಓದಿ: Vastu Tips: ಪರ್ಸ್ ನಲ್ಲಿಟ್ಟುಕೊಳ್ಳುವ ಈ ವಸ್ತುಗಳು ಅದೃಷ್ಟವನ್ನು ಆಕರ್ಷಿಸುತ್ತದೆ..! ಆ ವಸ್ತುಗಳು ಯಾವುವು ನೋಡಿ

ತುಲಾ ರಾಶಿ: ತುಲಾ ರಾಶಿ ಅವರಿಗೆ ಮಧ್ಯಾಹ್ನ ವರೆಗೂ ನೀವು ಹೇಳಿದೆಲ್ಲವೂ ನಡೆಯುತ್ತದೆ. ಆದರೆ ಮಧ್ಯಾಹ್ನ ಬಳಿಕ ನಿಮಗೆ ಬೇಕಾದವರೇ ಬೇಸರ ಮಾಡಬಹುದು.‌ ಯಾವುದೇ ಮುಖ್ಯವಾದ ನಿರ್ಧಾರಗಳನ್ನು ಮಾಡಲು ಹೋಗಬೇಡಿ.

ವೃಶ್ಚಿಕ ರಾಶಿ: ವೃಶ್ಚಿಕ ರಾಶಿ ಅವರಿಗೆ ಮಧ್ಯಾಹ್ನವರೆಗೂ ಕಾರ್ಯಕ್ಷೇತ್ರದಲ್ಲಿ ಜವಾಬ್ದಾರಿಗಳು ಹೆಚ್ಚಾಗುತ್ತವೆ. ಮಧ್ಯಾಹ್ನ ಬಳಿಕ ನಿಮ್ಮ ಮಿತ್ರರಿಂದ ಸಂತೋಷವನ್ನು ಗಳಿಸಬಹುದು.

ಧನಸ್ಸು ರಾಶಿ: ಧನಸ್ಸು ರಾಶಿ ಅವರಿಗೆ ಮಧ್ಯಾಹ್ನ ವರೆಗೂ ನಾನಾ ಸಮಸ್ಯೆಗಳು ಬರ ಬಹುದು.‌ ಮಧ್ಯಾಹ್ನ ಬಳಿಕ ಕಾರ್ಯ ಕ್ಷೇತ್ರದ ಜವಾಬ್ದಾರಿಗಳು ಹೆಚ್ಚಾಗಿ ಯಶಸ್ಸು, ಕೀರ್ತಿ ಪ್ರಾಪ್ತಿ ಯಾಗುತ್ತದೆ.

ಮಕರ ರಾಶಿ: ಮಕರ ರಾಶಿ ಅವರಿಗೆ ಮಧ್ಯಾಹ್ನವರೆಗೂ ನಾನಾ ರೀತಿಯ ಕ್ಷೇಷಗಳು ಬರಬಹುದು. ಮಧ್ಯಾಹ್ನ ಬಳಿಕ ಭಾಗ್ಯೋದಯವಾದ ದಿನವಾಗಿದ್ದು, ಮನಸ್ಸಿನ ನೋವೆಲ್ಲ ಮಯವಾಗಲಿದೆ

ಕುಂಭರಾಶಿ: ಕುಂಭ ರಾಶಿ ಅವರಿಗೆ ಮಧ್ಯಾಹ್ನವರೆಗೂ ಎಲ್ಲವೂ ಅನುಕೂಲವಾಗಿ ನಡೆಯುತ್ತಿರುತ್ತದೆ. ಮಧ್ಯಾಹ್ನ ಬಳಿಕ ತಿರುವು ಬಂದು ಮನಸ್ಸಿಗೆ ಬಹಳಷ್ಟು ನೋವು ಆಗಬಹುದು. ಮಿತ್ರರಿಂದ, ಪ್ರೀತಿ ಪಾತ್ರರಿಂದ ಯಾವುದೇ ಸಹಕಾರ ಸಿಗುವುದಿಲ್ಲ.

ಮೀನ ರಾಶಿ: ಮೀನ ರಾಶಿ ಅವರು ಮಧ್ಯಾಹ್ನವರೆಗೂ ಸಾಮಾಜಿಕ ಚಟುವಟಿಕೆಯಲ್ಲಿ ಬಹಳ ಬ್ಯುಸಿಯಾಗಿ ಇರುತ್ತೀರಿ. ಮಧ್ಯಾಹ್ನ ಬಳಿಕ ಕುಟುಂಬದ ಜೊತೆ ಉತ್ತಮ ಸಮಯ ಕಳೆಯುತ್ತೀರಿ. ಮಿತೃತ್ವದಲ್ಲಿ, ದಾಂಪತ್ಯದಲ್ಲಿ ನೆಮ್ಮದಿ ಸಿಗುತ್ತದೆ.