Horoscope Today November 8th: ದಿನ ಭವಿಷ್ಯ-ಮೃಗಶಿರಾ ನಕ್ಷತ್ರದ ಅಧಿಪತಿ ಕುಜನಿಂದ ಈ ರಾಶಿಗೆ ಭಾರೀ ಒಳಿತು!
ನಿತ್ಯ ಭವಿಷ್ಯ ನವೆಂಬರ್ 08, 2025: ಇಂದು ವಿಶ್ವವಸು ನಾಮ ಸಂವತ್ಸರದ ದಕ್ಷಿಣಾಯನ ವರ್ಷ ಶರ ದೃತು ಕಾರ್ತಿಕ ಮಾಸೆ ಕೃಷ್ಣೆ ಪಕ್ಷದ, ತೃತೀಯ ತಿಥಿ, ಮೃಗಶಿರಾ ನಕ್ಷತ್ರದ ನವೆಂಬರ್ 8ನೇ ತಾರೀಖಿನ ಶನಿವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೀಗಿದೆ.
ದಿನ ಭವಿಷ್ಯ -
ಇಂದು ವಿಶ್ವವಸು ನಾಮ ಸಂವತ್ಸರದ ದಕ್ಷಿಣಾಯನ ವರ್ಷ ಶರದೃತು ಕೃಷ್ಣೆ ಪಕ್ಷದ ಮೃಗಶಿರಾ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದಂತೆ ನಿಮ್ಮ ಭವಿಷ್ಯ ಹೇಗಿದೆ ಎಂದು ತಿಳಿಯಿರಿ.
ಮೇಷ ರಾಶಿ: ಮೃಗಶಿರಾ ನಕ್ಷತ್ರದ ಅಧಿಪತಿ ಕುಜ ಆಗಿದ್ದಾನೆ. ಆದ್ದರಿಂದ ಹೆಚ್ಚಿನವರಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿ ಅವರಿಗೆ ಇಂದು ಅತ್ಯುತ್ತಮವಾದ ದಿನವಾಗಿದೆ. ನಿಮ್ಮ ಆತ್ಮ ವಿಶ್ವಾಸ ಇಂದು ತುಂಬಾ ಚೆನ್ನಾಗಿ ಇರಲಿದೆ. ನಿಮ್ಮ ಬಂಧು ಬಾಂಧವರಿಂದ ಸಹಕಾರ ಕೂಡ ಸಿಗಲಿದೆ.
ವೃಷಭ ರಾಶಿ: ವೃಷಭ ರಾಶಿ ಅವರಿಗೆ ಸಂಸಾರದ ತಾಪತ್ರಯಗಳು ಇಂದು ಹೆಚ್ಚಾಗಬಹುದು. ನಿಮ್ಮ ಸಂಸಾರದಲ್ಲಿ ಸಮತೋಲನವನ್ನು ಕಾಪಾಡಿಕೊಂಡು ನೀವು ಹೋಗಬೇಕಾಗುತ್ತದೆ.
ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರಿಗೆ ನಿಮ್ಮ ರಾಶಿಯಲ್ಲಿ ಚಂದ್ರ ಇರುವುದರಿಂದ ಅತ್ಯುತ್ತಮವಾದ ದಿನ ವಾಗಿದೆ. ಮನಸ್ಸಿಗೆ ನೆಮ್ಮದಿ ಸಿಗಲಿದ್ದು ಹಿಂದಿನ ಎರಡು ಮೂರು ದಿನಗಳಲ್ಲಿ ಇದ್ದ ಎಲ್ಲ ತೊಂದರೆ ಇಂದು ಮಯವಾಗಲಿದೆ.
ಕಟಕ ರಾಶಿ: ಕಟಕ ರಾಶಿ ಅವರಿಗೆ ಕಷ್ಟಕರವಾದ ದಿನವಾಗಿದೆ. ಮುಖ್ಯವಾದ ಯಾವುದೇ ನಿರ್ಧಾರಗಳು ಇಂದು ಬೇಡ. ಮುಖ್ಯವಾದ ಮಿಂಟಿಂಗ್, ಇಮೇಲ್ ಇತ್ಯಾದಿನ್ನು ಕಳುಹಿಸಲು ಹೋಗಬೇಡಿ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಉತ್ತಮವಾದ ದಿನವಾಗಿದ್ದು ಇಷ್ಟಾರ್ಥ ಸಿದ್ದಿಯಾಗಲಿದೆ. ಮನಸ್ಸಿಗೆ ನೆಮ್ಮದಿ ಇರಲಿದ್ದು ಧನ ಆಗಮನ ಕೂಡ ಆಗಲಿದೆ.
ಕನ್ಯಾ ರಾಶಿ: ಕನ್ಯಾ ರಾಶಿ ಅವರಿಗೆ ಕಾರ್ಯ ಕ್ಷೇತ್ರದ ಜವಾಬ್ದಾರಿ ಗಳು ಹೆಚ್ಚು ಆಗುತ್ತವೆ. ಮನೆ ಹಾಗೂ ಕಾರ್ಯಕ್ಷೇತ್ರದ ಜವಾಬ್ದಾರಿಯನ್ನು ನೀವು ನಿಭಾಯಿಸಬೇಕಾಗುತ್ತದೆ. ಹಾಗೆಯೇ ನಿಗದಿತ ಸಮಯಕ್ಕೆ ಕೆಲಸ ಕಾರ್ಯಗಳನ್ನು ಮುಗಿಸಬೇಕಾಗುತ್ತದೆ.
ಇದನ್ನೂ ಓದಿ:Vastu Tips: ಮನೆಯಲ್ಲಿ ಗೂಬೆ ವಿಗ್ರಹ ಇಡಬಹುದೇ? ಈ ಬಗ್ಗೆ ವಾಸ್ತು ಶಾಸ್ತ್ರ ಏನು ಹೇಳುತ್ತದೆ?
ತುಲಾ ರಾಶಿ: ತುಲಾ ರಾಶಿ ಅವರಿಗೆ ಭಾಗ್ಯೋದಯವಾದ ದಿನವಾಗಿದೆ. ಆದರೂ ಕೂಡ ವಿನಯ ಪೂರ್ವಕ ವಾಗಿ ಎಲ್ಲರ ಜೊತೆ ಬೆರೆಯಬೇಕಾಗುತ್ತದೆ. ಉತ್ತಮವಾದ ದಿನ ನಿಮ್ಮದು ಆಗಲಿದೆ.
ವೃಶ್ಚಿಕ ರಾಶಿ: ವೃಶ್ಚಿಕ ರಾಶಿ ಅವರಿಗೆ ಕ್ಲಿಷ್ಟಕರವಾದ ದಿನವಾಗಿದೆ. ಮನಸ್ಸಿಗೆ ನಾನಾ ರೀತಿಯ ಯೋಚನೆಗಳು ನಿಮಗೆ ಇಂದು ಕಾಡಬಹುದು. ನಿಮ್ಮ ಪ್ರೀತಿ ಪಾತ್ರರಿಂದ ಯಾವುದೇ ಸಹಕಾರ ಸಿಗುವುದಿಲ್ಲ.ಹಾಗಾಗಿ ಆತಂಕ ದುಗುಡ ಹೆಚ್ಚಾಗಬಹುದು.
ಧನಸ್ಸು ರಾಶಿ: ಧನಸ್ಸು ರಾಶಿ ಅವರಿಗೆ ಅತ್ಯುತ್ತಮ ವಾದ ದಿನವಾಗಿದೆ. ಎಲ್ಲ ಕಡೆಯಿಂದಲೂ ನಿಮಗೆ ಸಹಕಾರ ಸಿಗಲಿದೆ. ದಾಂಪತ್ಯ ವಿಚಾರ, ಹಾಗೂ ಸಹೋದ್ಯೋಗಿಗಳಿಂದ ನೆಮ್ಮದಿ ಸಿಗಲಿದೆ.
ಮಕರ ರಾಶಿ: ಮಕರ ರಾಶಿ ಅವರಿಗೆ ಅತೀ ಹೆಚ್ಚು ನೆಮ್ಮದಿ ಸಿಗಲಿದ್ದು ಆರೋಗ್ಯದಲ್ಲಿ ಸುಧಾರಣೆ ಆಗಲಿದೆ. ಎಲ್ಲ ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗಲಿದೆ.
ಕುಂಭರಾಶಿ: ಕು: ವೃಶ್ಚಿಕ ರಾಶಿ ಅವರಿಗೆ ಕ್ಲಿಷ್ಟಕರವಾದ ದಿನವಾಗಿದೆ. ಮನಸ್ಸಿಗೆ ನಾನಾ ರೀತಿಯ ಯೋಚನೆಗಳು ನಿಮಗೆ ಇಂದು ಕಾಡಬಹುದು. ನಿಮ್ಮ ಪ್ರೀತಿ ಪಾತ್ರರಿಂದ ಯಾವುದೇ ಸಹಕಾರ ಸಿಗುವುದಿಲ್ಲ. ಹಾಗಾಗಿ ಆತಂಕ ದುಗುಡ ಹೆಚ್ಚಾಗಬಹುದು.
ಮೀನ ರಾಶಿ: ಮೀನ ರಾಶಿ ಅವರಿಗೆ ಮನೆಯ ಜವಾಬ್ದಾರಿ ಆಸ್ತಿ ಪಾಸ್ತಿ ವಿಚಾರವಾಗಿ ಹೆಚ್ಚಿನ ಗಮನವನ್ನು ನೀಡಬೇಕಾಗುತ್ತದೆ. ರಿಯಲ್ ಎಸ್ಟೇಟ್, ತೋಟಗಾರಿಕೆ ಇತ್ಯಾದಿಯಲ್ಲಿ ಇರುವವರಿಗೆ ಕಷ್ಟಕರವಾದ ದಿನವಾಗಿದೆ.