ಬೆಂಗಳೂರು: ವಿಶ್ವವಸುನಾಮ ಸಂವತ್ಸರದ ದಕ್ಷಿಣಾಯನ ಹಿಮದೃತು, ಮಾರ್ಗಶಿರಾ ಮಾಸೆ ಕೃಷ್ಣ ಪಕ್ಷದ, ಚತುರ್ದಶಿ ತಿಥಿ, ಅನುರಾಧ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯ ಭವಿಷ್ಯ ಹೇಗಿದೆ ಎನ್ನುವುದರ ಕುರಿತು ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.
ಮೇಷ ರಾಶಿ: ಅನುರಾಧ ನಕ್ಷತ್ರದ ಅಧಿಪತಿ ಶನಿ. ಹೀಗಾಗಿ ಈ ರಾಶಿಯವರ ಮೇಲೆ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ಬೇರೆಯವರಿಂದ ನಿಮಗೆ ಸಹಕಾರ ಸಿಗುವುದಿಲ್ಲ. ಹಾಗಾಗಿ ನೀವು ಧ್ಯಾನಾಧಿಗಳನ್ನು ಮಾಡಿ ಸಮಯ ಕಳೆಯಬೇಕಾಗುತ್ತದೆ.
ವೃಷಭ ರಾಶಿ: ಇಂದು ವೃಷಭ ರಾಶಿಯವರಿಗೆ ಅತೀ ಉತ್ತಮ ದಿನ. ಎಲ್ಲ ರೀತಿಯಿಂದಲೂ ನಿಮಗೆ ಸಹಕಾರ ಸಿಗುತ್ತದೆ. ಕೆಲಸ ಕಾರ್ಯದಲ್ಲೂ ಯಶಸ್ಸು ಲಭಿಸುತ್ತದೆ.
ಮಿಥುನ ರಾಶಿ: ಮಿಥುನ ರಾಶಿಯವರು ಎಲ್ಲದರಲ್ಲೂ ಮುನ್ನಡೆಯನ್ನು ಸಾಧಿಸುತ್ತಾರೆ. ಎಲ್ಲದರಲ್ಲೂ ಜಯ ಪ್ರಾಪ್ತಿಯಾಗುತ್ತದೆ. ಸಾಮಾಜಿಕ ಚಟುವಟಿಕೆಯಲ್ಲಿ ಆತ್ಮವಿಶ್ವಾಸ ತುಂಬಾ ಚೆನ್ನಾಗಿ ಇರಲಿದೆ. ಆರೋಗ್ಯದಲ್ಲೂ ಸುಧಾರಣೆ ಕಂಡು ಬರುತ್ತದೆ.
ಕಟಕ ರಾಶಿ: ಕಟಕ ರಾಶಿಯವರಿಗೆ ಪ್ರೇಮ, ಪ್ರೀತಿ ವಿಚಾರದಲ್ಲಿ ಬೇಸರ ಆಗಬಹುದು. ಅದೇ ರೀತಿ ಮಕ್ಕಳ ವಿಚಾರದಲ್ಲೂ ಮನಸ್ಸಿಗೆ ಕಿರಿ ಕಿರಿ ಆಗಬಹುದು. ನಿಮಗೆ ತಾಳ್ಮೆ ಬಹಳ ಮುಖ್ಯವಾಗಲಿದ್ದು ವಿನಯದಿಂದ ವರ್ತಿಸಬೇಕಾಗುತ್ತದೆ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಆಸ್ತಿ ಪಾಸ್ತಿ ವಿಚಾರ ಹಾಗೂ ನೀವು ವಾಸ ಮಾಡುವ ಮನೆಯ ವಿಚಾರದಲ್ಲೂ ಕಿರಿ ಕಿರಿ ಆಗಬಹುದು.ಕೋರ್ಟ್, ಕಚೇರಿ ವ್ಯವಹಾರದಲ್ಲಿ ಸ್ವಲ್ಪ ತೊಂದರೆ ಉಂಟಾಗುವ ಸಾಧ್ಯತೆ ಇದೆ.
ಮನೆಯಲ್ಲಿ ಯಾವ ರೀತಿಯ ಲಕ್ಷ್ಮೀ ದೇವಿಯ ಈ ಫೋಟೊ ಇಡಬೇಕು?
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಅತೀ ಉತ್ತಮ ದಿನ. ಸಾಮಾಜಿಕ ಚಟುವಟಿಕೆಗಳಲ್ಲಿ ಅತೀ ಹೆಚ್ಚಿನ ಯಶಸ್ಸು ನೆಮ್ಮದಿ ಸಿಗುತ್ತದೆ. ಎಲ್ಲ ರೀತಿಯಿಂದಲೂ ನಿಮಗೆ ಜಯ ಪ್ರಾಪ್ತಿಯಾಗುತ್ತದೆ.
ತುಲಾ ರಾಶಿ: ತುಲಾ ರಾಶಿಯವರಿಗೆ ಸಂಸಾರಿಕ ವಿಚಾರದಲ್ಲಿ ನೆಮ್ಮದಿ ಪ್ರಾಪ್ತಿಯಾಗುತ್ತದೆ. ಕೆಲಸ ಕಾರ್ಯದಲ್ಲಿ ಯಶಸ್ಸು ಸಿಕ್ಕಿ ಖುಷಿಯಾಗಿ ದಿನ ಕಳೆಯುತ್ತೀರಿ.
ವೃಶ್ಚಿಕ ರಾಶಿ: ವೃಶ್ಚಿಕ ರಾಶಿಯವರಿಗೆ ನಿಮ್ಮ ರಾಶಿಯಲ್ಲೇ ಚಂದ್ರ ಬಂದಿರುವುದರಿಂದ ಹಿಂದಿನ ಎರಡು ಮೂರು ದಿನಗಳ ಮನಸ್ಸಿನ ನೋವು ಎಲ್ಲವೂ ಮಾಯವಾಗುತ್ತದೆ. ಆರೋಗ್ಯದಲ್ಲೂ ಸುಧಾರಣೆ ಕಂಡು ಬರಲಿದೆ.
ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಮುಖ್ಯವಾದ ಯಾವುದೇ ನಿರ್ಧಾರಗಳು ಇಂದು ಬೇಡ.
ಮಕರ ರಾಶಿ: ಈ ರಾಶಿಯವರಿಗೆ ಅತೀ ಉತ್ತಮ ದಿನವಾಗಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು ಮನಸ್ಸಿಗೆ ನೆಮ್ಮದಿ ಇರುತ್ತದೆ. ಸಂತೋಷದ ದಿನವನ್ನು ಇಂದು ಕಳೆಯಲಿದ್ದೀರಿ.
ಕುಂಭರಾಶಿ: ಇಂದು ಕಾರ್ಯಕ್ಷೇತ್ರದಲ್ಲಿ ಹೆಚ್ಚಿನ ಜವಾಬ್ದಾರಿ ಇರುತ್ತದೆ. ಯಶಸ್ಸು ಕೂಡ ಸಿಗುತ್ತದೆ. ಇಂದು ನೀವು ಆರೋಗ್ಯ ಕಡೆಗೆ ಹೆಚ್ಚು ಗಮನವನ್ನು ನೀಡಬೇಕಾಗುತ್ತದೆ.
ಮೀನ ರಾಶಿ: ಮೀನ ರಾಶಿಯವರಿಗೆ ಅದೃಷ್ಟದ ದಿನವಾಗಿದ್ದು ಮುಖ್ಯವಾದ ವಿಚಾರದಲ್ಲಿ ಯಶಸ್ಸು ಕಾಣುತ್ತೀರಿ. ಕೆಲಸ ಕಾರ್ಯದಲ್ಲೂ ನೀವು ಅಂದುಕೊಂಡಂತೆ ನಡೆಯಲಿದೆ.