ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Horoscope Today December 19th: ಇಂದು ಈ ರಾಶಿಯವರಿಗೆ ಮಾತಿನಿಂದಲೇ ಸಮಸ್ಯೆ

ನಿತ್ಯ ಭವಿಷ್ಯ ಡಿಸೆಂಬರ್ 19, 2025: ವಿಶ್ವವಸುನಾಮ ಸಂವತ್ಸರದ ದಕ್ಷಿಣಾಯನ ಹಿಮದೃತು ಮಾರ್ಗಶಿರಾ ಮಾಸೆ, ಕೃಷ್ಣ ಪಕ್ಷದ, ಅಮಾವಾಸ್ಯ ತಿಥಿ, ಜೇಷ್ಠ ನಕ್ಷತ್ರದ ಡಿಸೆಂಬರ್ 19ನೇ ತಾರೀಖಿನ ಈ ದಿನದ ಭವಿಷ್ಯ ಹೇಗಿದೆ ಎನ್ನುವುದನ್ನು ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಬುಧನ ಪ್ರಭಾವ: ಈ ರಾಶಿಯವರು ಜಾಗೃತರಾಗಿರಿ

ಸಂಗ್ರಹ ಚಿತ್ರ -

Profile
Pushpa Kumari Dec 19, 2025 6:00 AM

ಬೆಂಗಳೂರು: ವಿಶ್ವವಸು ನಾಮ ಸಂವತ್ಸರದ ದಕ್ಷಿಣಾಯನ ಹಿಮದೃತು, ಮಾರ್ಗಶಿರ ಮಾಸೆ ಕೃಷ್ಣ ಪಕ್ಷದ, ಅಮಾವಾಸ್ಯ ತಿಥಿ, ಜೇಷ್ಠ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನರಾಶಿ ಭವಿಷ್ಯದ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಮೇಷ ರಾಶಿ: ಜೇಷ್ಠ ನಕ್ಷತ್ರದ ಅಧಿಪತಿ ಬುಧ. ಬಹುತೇಕ ಎಲ್ಲ ರಾಶಿಯವರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.‌ ಅದರಲ್ಲೂ ಮೇಷ ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ಮನಸ್ಸಿಗೆ ಬಹಳಷ್ಟು ಯೋಚನೆ ಕಾಡಲಿದ್ದು ಪ್ರೀತಿ ಪಾತ್ರರಿಂದ ಯಾವುದೇ ರೀತಿಯ ಸಹಕಾರ ನಿಮಗೆ ಸಿಗುವುದಿಲ್ಲ.

ವೃಷಭ ರಾಶಿ: ಇಂದು ವೃಷಭ ರಾಶಿಯವರಿಗೆ ಅತೀ ಉತ್ತಮ ದಿನವಾಗಲಿದೆ. ಎಲ್ಲ ರೀತಿಯಿಂದಲೂ ನಿಮಗೆ ಸಹಕಾರ ಸಿಗುತ್ತದೆ. ಆದರೆ ಎಲ್ಲರ ಜತೆ ವಿನಯತೆಯಿಂದ ವರ್ತಿಸಬೇಕಾಗುತ್ತದೆ. ಇಲ್ಲದೆ ಇದ್ದಲ್ಲಿ ನಿಮಗೆ ಮುಂದೆ ತೊಂದರೆ ಆಗುವ ಸಾಧ್ಯತೆ ಇರುತ್ತದೆ.

ಮಿಥುನ ರಾಶಿ: ಮಿಥುನ ರಾಶಿಯಲ್ಲಿರುವವರಿಗೆ ಅತೀ ಉತ್ತಮ ದಿನವಾಗಲಿದೆ‌. ಎಲ್ಲ ವಿಚಾರದಲ್ಲಿ ಹಾಗೂ ಮಾತಿನ ಚಾಕಚಾಕ್ಯತೆಯಿಂದ ಜಯ ಸಾಧಿಸುತ್ತೀರಿ. ಕೆಲಸ ಕಾರ್ಯದಲ್ಲೂ ಯಶಸ್ಸು ಸಿಗುತ್ತದೆ.

ಮನೆಯಲ್ಲಿ ಯಾವ ರೀತಿಯ ಲಕ್ಷ್ಮೀ ದೇವಿಯ ಈ ಫೋಟೊ ಇಡಬೇಕು?

ಕಟಕ ರಾಶಿ: ಕಟಕ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಸಂಸಾರ ತಾಪತ್ರಯಗಳು ಹೆಚ್ಚಾಗುತ್ತವೆ. ಮಕ್ಕಳ ವಿಚಾರ, ಆರ್ಥಿಕ ಸುಭದ್ರತೆ ಬಗ್ಗೆ ಬಹಳಷ್ಟು ಯೋಚನೆ ಮಾಡುವ ದಿನವಾಗಲಿದೆ.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಮನೆಯಲ್ಲಿ ಜಗಳ, ವಾಗ್ವಾದ ಉಂಟಾಗುವ ಸಾಧ್ಯತೆ ಹೆಚ್ಚು. ಆದ್ದರಿಂದ ಬಹಳಷ್ಟು ತಾಳ್ಮೆಯಿಂದ ಇರುವುದು ಒಳ್ಳೆಯದು. ಕೋರ್ಟ್, ಕಚೇರಿ ವ್ಯವಹಾರದಲ್ಲೂ ಜಾಗೃತರಾಗಿ ಇರಬೇಕು.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಆತ್ಮವಿಶ್ವಾಸ ತುಂಬಾ ಚೆನ್ನಾಗಿ ಇರಲಿದ್ದು ಸೋಶಿಯಲ್ ಮೀಡಿಯಾ, ಮಾರ್ಕೆಟಿಂಗ್ ವ್ಯವಹಾರದಲ್ಲಿರುವವರಿಗೆ ಉತ್ತಮವಾದ ದಿನವಾಗಲಿದೆ.

ತುಲಾ ರಾಶಿ: ತುಲಾ ರಾಶಿಯವರಿಗೆ ಆಸ್ತಿ ಪಾಸ್ತಿ ವಿಚಾರ, ಮನೆಯ ವಿಚಾರ ಹಾಗೂ ಕುಟುಂಬದ ಬಗ್ಗೆ ಮನಸ್ತಾಪ ಆಗುವ ಸಾಧ್ಯತೆ ಇದೆ.‌ ನಿಮ್ಮ ಮಾತಿನ ಬಗ್ಗೆ ಹೆಚ್ಚು ನೀವು ನಿಗಾ ಇಡಬೇಕಾಗುತ್ತದೆ.

ವೃಶ್ಚಿಕ ರಾಶಿ: ವೃಶ್ಚಿಕ ರಾಶಿಯಲ್ಲೇ ಚಂದ್ರ ‌ಬಂದಿರುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ನಿಮ್ಮ ಮಾತಿನಿಂದಲೇ ನಿಮಗೆ ಲಾಭ ಉಂಟಾಗುವ ಸಾಧ್ಯತೆ ಇದೆ.

ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಕಷ್ಟದ ದಿನವಾಗಲಿದೆ. ನಿಮ್ಮ ಮಾತಿನಿಂದ ನಿಮ್ಮ ಸ್ನೇಹಿತರನ್ನು ಕಳೆದುಕೊಳ್ಳುವಂತಹ ಸಾಧ್ಯತೆ ಹೆಚ್ಚು.

ಮಕರ ರಾಶಿ: ಈ ರಾಶಿಯವರಿಗೆ ಅತೀ ಉತ್ತಮ ದಿನವಾಗಲಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು ಮನಸ್ಸಿಗೆ ನೆಮ್ಮದಿ ಇರುತ್ತದೆ. ಮಿತ್ರರಿಂದ ಧನಾಗಮನ ಕೂಡ ಆಗುತ್ತದೆ.

ಕುಂಭರಾಶಿ: ಇಂದು ಕಾರ್ಯಕ್ಷೇತ್ರದಲ್ಲಿ ಯಶಸ್ಸು ಲಭಿಸುತ್ತದೆ. ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಎಲ್ಲ ಕಡೆಯಿಂದಲೂ ನಿಮಗೆ ಜಯ ಸಿಗುತ್ತದೆ.

ಮೀನ ರಾಶಿ: ಮೀನ ರಾಶಿಯವರಿಗೆ ಅದೃಷ್ಟದ ದಿನವಾಗಿದ್ದು ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಹಿಂದೆ ಇದ್ದ ತೊಂದರೆ ಎಲ್ಲವೂ ಮಾಯವಾಗಲಿದ್ದು ಖುಷಿಯಾದ ದಿನ ನಿಮ್ಮದಾಗಲಿದೆ.