Horoscope Today December 25th: ರಾಹುವಿನ ಪ್ರಭಾವದಿಂದ ಇಂದು ಈ ರಾಶಿಯವರ ಕಷ್ಟಗಳೆಲ್ಲ ದೂರ
ನಿತ್ಯ ಭವಿಷ್ಯ ಡಿಸೆಂಬರ್ 25, 2025: ವಿಶ್ವವಸು ನಾಮ ಸಂವತ್ಸರದ ದಕ್ಷಿಣಾಯನ ಹಿಮದೃತು ಪೌಸ ಮಾಸೆ, ಶುಕ್ಷ ಪಕ್ಷದ, ಪಂಚಮಿ ತಿಥಿ, ಶತಾಭಿಷಾ ನಕ್ಷತ್ರದ ಡಿಸೆಂಬರ್ 25ನೇ ತಾರೀಖಿನ ಈ ದಿನದ ಭವಿಷ್ಯ ಹೇಗಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.
ಸಂಗ್ರಹ ಚಿತ್ರ -
ಬೆಂಗಳೂರು, ಡಿ. 25: ವಿಶ್ವವಸು ನಾಮ ಸಂವತ್ಸರದ ದಕ್ಷಿಣಾಯನ ಹಿಮದೃತು, ಪೌಸ ಮಾಸೆ, ಕೃಷ್ಣ ಪಕ್ಷ, ಪಂಚಮಿ ತಿಥಿ ಶತಭಿಷಾ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಗಳ ಭವಿಷ್ಯ ಹೇಗಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.
ಮೇಷ ರಾಶಿ: ಶತಾಭಿಷಾ ನಕ್ಷತ್ರದ ಅಧಿಪತಿ ರಾಹು. ಹಾಗಾಗಿ ಬಹುತೇಕ ಎಲ್ಲ ರಾಶಿಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಿದ್ದು ಗುಂಪು ಕೆಲಸದಿಂದ ಲಾಭದಾಯಕವಾಗಿದೆ. ಧನ ಆಗಮನದ ಸೂಚನೆಗಳು ಕೂಡ ಇದೆ.
ವೃಷಭ ರಾಶಿ: ಇಂದು ವೃಷಭ ರಾಶಿಯವರಿಗೆ ಕಾರ್ಯ ಕ್ಷೇತ್ರದಲ್ಲಿ ಯಶಸ್ಸು ಸಿಗುತ್ತದೆ. ಎಲ್ಲ ಕೆಲಸ ಕಾರ್ಯದಲ್ಲಿ ಜಯ ಗಳಿಸುತ್ತೀರಿ.
ಮಿಥುನ ರಾಶಿ: ಮಿಥುನ ರಾಶಿಯಲ್ಲಿರುವವರಿಗೆ ಅದೃಷ್ಟದ ದಿನವಾಗಲಿದೆ. ಭಗವಂತನ, ಹಿರಿಯರ ಆಶೀರ್ವಾದ ಬಹಳ ಮುಖ್ಯವಾಗುತ್ತದೆ. ಹಾಗಾಗಿ ಪೂಜೆ, ಧ್ಯಾನಾದಿಗಳನ್ನು ಮಾಡಲು ಮರೆಯಬಾರದು.
ಕಟಕ ರಾಶಿ: ಕಟಕ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಮುಖ್ಯವಾದ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯ ಆಗುವುದಿಲ್ಲ. ಇಂದು ನೀವು ತಪ್ಪು ನಿರ್ಧಾರಗಳನ್ನೇ ತೆಗೆದುಕೊಳ್ಳುವ ಸಾಧ್ಯತೆ ಇದೆ.
ಎಷ್ಟೇ ದುಡ್ಡಿದ್ದರೂ ಕೈಯಲ್ಲಿ ಹಣ ನಿಲ್ಲುತ್ತಿಲ್ಲ ಎಂಬ ಚಿಂತೆಯೇ? ಈ ಟಿಪ್ಸ್ ಪಾಲಿಸಿ ನೋಡಿ
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಪ್ರೀತಿ ಪಾತ್ರರಿಂದ ಬಹಳಷ್ಟು ಖುಷಿ ಸಿಗುತ್ತದೆ. ಎಲ್ಲ ಕೆಲಸ ಕಾರ್ಯದಲ್ಲಿ ಕೂಡ ಜಯ ಕಾಣುತ್ತೀರಿ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಸಾಮಾಜಿಕ ಚಟುವಟಿಕೆಯಲ್ಲಿ ಯಶಸ್ಸು ಸಿಗಲಿದ್ದು, ನೆಮ್ಮದಿ ಇರುತ್ತದೆ.
ತುಲಾ ರಾಶಿ: ತುಲಾ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಪ್ರೇಮ, ಪ್ರೀತಿ ಪ್ರಕರಣದಲ್ಲಿ ನೋವು ಹೆಚ್ಚಾಗುತ್ತದೆ. ವ್ಯವಹಾರದಲ್ಲಿ ಕೂಡ ತೊಂದರೆ ಎದುರಾಗುವ ಸಾಧ್ಯತೆ ಇದೆ.
ವೃಶ್ಚಿಕ ರಾಶಿ: ವೃಶ್ಚಿಕ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಆದರೂ ಕೂಡ ಕೋರ್ಟ್, ಕಚೇರಿ ವ್ಯವಹಾರದಲ್ಲಿ ಮನಸ್ಸಿಗೆ ಕ್ಷೇಷ ಕಂಡು ಬರಲಿದೆ.
ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಉತ್ತಮ ದಿನವಾಗಲಿದೆ. ಎಲ್ಲ ಕೆಲಸ ಕಾರ್ಯದಲ್ಲೂ ಜಯ ಪ್ರಾಪ್ತಿಯಾಗುತ್ತದೆ. ಆತ್ಮವಿಶ್ವಾಸ ವೃದ್ಧಿಯಾಗಲಿದೆ. ಮೀಡಿಯಾ, ಮಾರ್ಕೆಟಿಂಗ್ ಕ್ಷೇತ್ರದಲ್ಲಿ ಇರುವವರಿಗೆ ಲಾಭದ ದಿನವಾಗಲಿದೆ.
ಮಕರ ರಾಶಿ: ಈ ರಾಶಿಯವರಿಗೆ ಕುಟುಂಬದ ವಿಚಾರವಾಗಿ ಹೆಚ್ಚು ಜವಾಬ್ದಾರಿ ಇರಲಿದೆ. ಮನಸ್ಸಿಗೆ ಬಹಳಷ್ಟು ನೆಮ್ಮದಿ ಪ್ರಾಪ್ತಿಯಾಗುತ್ತದೆ.
ಕುಂಭರಾಶಿ: ನಿಮ್ಮ ರಾಶಿಗೆ ಚಂದ್ರ ಬಂದಿರುವುದರಿಂದ ಹಿಂದಿನ ಎರಡು ಮೂರು ದಿನಗಳ ನೋವು ,ಕ್ಷೇಷ ಎಲ್ಲವೂ ಮಾಯವಾಗಲಿದೆ. ಮುಂದಿನ ದಿನಗಳಿಗೆ ಉತ್ತಮ ಮಾರ್ಗದರ್ಶನ ಕೂಡ ಸಿಗಲಿದೆ.
ಮೀನ ರಾಶಿ: ಮೀನ ರಾಶಿಯವಿಗೆ ಅತೀ ಉತ್ತಮ ದಿನವಾಗಲಿದೆ. ಆದರೂ ಮುಖ್ಯವಾದ ನಿರ್ಧಾರಗಳು ಇಂದು ಬೇಡ. ಆರೋಗ್ಯ ವಿಚಾರದಲ್ಲಿ ಕೂಡ ಜಾಗೃತರಾಗಿ ಇರಬೇಕಾಗುತ್ತದೆ.