ಬೆಂಗಳೂರು, ಡಿ. 26: ವಿಶ್ವವಸು ನಾಮ ಸಂವತ್ಸರದ ದಕ್ಷಿಣಾಯನ ಹಿಮದೃತು, ಪೌಸ ಮಾಸೆ, ಕೃಷ್ಣ ಪಕ್ಷದ, ಷಷ್ಠಿ ತಿಥಿ ಪೂರ್ವಭಾದ್ರಾ ಪದ ನಕ್ಷತ್ರದ ಈ ದಿನದ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯ ಹೇಗಿದೆ ಎನ್ನುವ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ತಿಳಿಸಿದ್ದಾರೆ.
ಮೇಷ ರಾಶಿ: ಪೂರ್ವ ಭಾದ್ರಾ ಪದ ನಕ್ಷತ್ರದ ಅಧಿಪತಿ ಗುರು ಹಾಗಾಗಿ ಹೆಚ್ಚಿನವರಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮಧ್ಯಾಹ್ನವರೆಗೆ ನಿಮಗೆ ಬಹಳ ಸಂತೋಷದ ದಿನವಾಗಲಿದ್ದು, ಮಧ್ಯಾಹ್ನ ಬಳಿಕ ನಿಮಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಮುಖ್ಯವಾದ ಕೆಲಸ, ಮೀಟಿಂಗ್ ಇತ್ಯಾದಿ ಮಧ್ಯಾಹ್ನ ನಂತರ ಮಾಡಬೇಡಿ.
ವೃಷಭ ರಾಶಿ: ಇಂದು ವೃಷಭ ರಾಶಿಯವರಿಗೆ ಮಧ್ಯಾಹ್ನವರೆಗೂ ಮಿತ್ರರ ಜತೆ ಒಡನಾಟ ಕಡಿಮೆ ಇರುತ್ತದೆ. ಅದೇ ರೀತಿ ಕಾರ್ಯ ಕ್ಷೇತ್ರದ ಜವಾಬ್ದಾರಿ ಹೆಚ್ಚು ಇರುತ್ತದೆ. ಮಧ್ಯಾಹ್ನ ಬಳಿಕ ಮನಸ್ಸಿಗೆ ನೆಮ್ಮದಿ ಸಿಗುತ್ತದೆ.
ಮಿಥುನ ರಾಶಿ: ಮಿಥುನ ರಾಶಿಯಲ್ಲಿರುವವರಿಗೆ ಮಧ್ಯಾಹ್ನವರೆಗೂ ಅದೃಷ್ಟದ ಪರೀಕ್ಷೆ ನಡೆಯುತ್ತದೆ. ಮಧ್ಯಾಹ್ನ ಬಳಿಕ ಕಾರ್ಯಕ್ಷೇತ್ರದಲ್ಲಿ ನೀವು ಯಶಸ್ಸು ಕಾಣಬಹುದು.
ಕಟಕ ರಾಶಿ: ಕಟಕ ರಾಶಿಯವರಿಗೆ ಮಧ್ಯಾಹ್ನವರೆಗೂ ನಾನಾ ರೀತಿಯ ಯೋಚನೆಗಳು ಬರಬಹುದು. ಮಧ್ಯಾಹ್ನ ಬಳಿಕ ಒಂದು ಮುಖ್ಯವಾದ ತಿರುವು ಬಂದು ಮನಸ್ಸಿಗೆ ಸಂತೋಷ ಸಿಗಬಹುದು.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಮಧ್ಯಾಹ್ನವರೆಗೂ ಎಲ್ಲ ರೀತಿಯಿಂದಲೂ ಸಹಕಾರ ಪ್ರಾಪ್ತಿಯಾಗುತ್ತದೆ. ಮಧ್ಯಾಹ್ನ ಬಳಿಕ ಸ್ವಲ್ಪ ಕಷ್ಟಗಳು ಉಂಟಾಗುವ ಸಾಧ್ಯತೆ ಇದೆ. ಪ್ರೀತಿ ಪಾತ್ರರಿಂದ ನಿಮಗೆ ತೊಂದರೆ ಉಂಟಾಗಲಿದೆ.
ಕನ್ಯಾ ರಾಶಿ: ಕನ್ಯಾ ರಾಶಿಯವರು ಮಧ್ಯಾಹ್ನವರೆಗೂ ಕೂಡ ಸಾಮಾಜಿಕ ಚಟುವಟಿಕೆಗಳಲ್ಲಿ ಬ್ಯುಸಿಯಾಗಿ ಇರುತ್ತೀರಿ. ಮಧ್ಯಾಹ್ನ ಬಳಿಕ ನೀವು ಬಹಳ ಉತ್ತಮವಾಗಿ ಸಮಯ ಕಳೆಯುತ್ತೀರಿ.
ನಿಮ್ಮ ಮನೆಯಲ್ಲಿ ಬುದ್ಧನ ಪ್ರತಿಮೆ ಇಡುತ್ತಿದ್ದಿರಾ? ಹಾಗಾದ್ರೆ ಯಾವ ಜಾಗದಲ್ಲಿ ಇಡಬೇಕು?
ತುಲಾ ರಾಶಿ: ತುಲಾ ರಾಶಿಯವರಿಗೆ ಮಧ್ಯಾಹ್ನವರೆಗೂ ಕಷ್ಟದ ದಿನ. ಇಂದು ಮನಸ್ಸಿಗೆ ಬಹಳಷ್ಟು ನೆಮ್ಮದಿ ಇರುವುದಿಲ್ಲ. ಮಧ್ಯಾಹ್ನದ ನಂತರ ಶತ್ರು ನಾಶ ಆಗಲಿದೆ.
ವೃಶ್ಚಿಕ ರಾಶಿ: ವೃಶ್ಚಿಕ ರಾಶಿಯವರಿಗೆ ಮಧ್ಯಾಹ್ನವರೆಗೂ ನಾನಾ ರೀತಿಯ ಯೋಚನೆಗಳು ಕಾಡಬಹುದು. ಕೋರ್ಟ್, ಕಚೇರಿ ವ್ಯವಹಾರದ ಬಗ್ಗೆ ಜವಾಬ್ದಾರಿ ಹೆಚ್ಚಾಗಬಹುದು. ಮಧ್ಯಾಹ್ನ ಬಳಿಕ ನಿಮ್ಮ ಬುದ್ಧಿಶಕ್ತಿಯನ್ನು ಉಪಯೋಗಿಸಕೊಂಡಾಗ ಅವಕಾಶ ಪ್ರಾಪ್ತಿಯಾಗುತ್ತದೆ.
ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಮಧ್ಯಾಹ್ನವರೆಗೂ ಎಲ್ಲವೂ ಚೆನ್ನಾಗಿರುತ್ತದೆ. ಮಧ್ಯಾಹ್ನ ಬಳಿಕ ನಿಮಗೆ ಮನೆಯ ಜವಾಬ್ದಾರಿಗಳು ಹೆಚ್ಚಾಗಬಹುದು. ಕೋರ್ಟ್, ಕಚೇರಿ ವ್ಯವಹಾರದಲ್ಲಿ ಜಾಗರೂಕತೆ ಅವಶ್ಯಕ.
ಮಕರ ರಾಶಿ: ಈ ರಾಶಿಯವರಿಗೆ ಮಧ್ಯಾಹ್ನವರೆಗೂ ಸಂಸಾರದ ತಾಪತ್ರಯಗಳು ಹೆಚ್ಚಾಗಬಹುದು. ಮಧ್ಯಾಹ್ನ ಬಳಿಕ ಬಂಧು ಬಾಂದವರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ.
ಕುಂಭ ರಾಶಿ: ಈ ರಾಶಿಯವರು ನಿಮ್ಮ ಕೆಲಸ ಕಾರ್ಯಗಳನ್ನು ಇಂದು ನಿಧಾನವಾಗಿ ಮಾಡಿಕೊಳ್ಳುತ್ತೀರಿ. ಇಂದು ನಿಮಗೆ ಸುಖ, ಶಾಂತಿ ಪ್ರಾಪ್ತಿಯಾಗುತ್ತದೆ. ಮಧ್ಯಾಹ್ನ ಬಳಿಕ ನಿಮ್ಮ ಕುಟುಂಬದವರಿಗೆ ಸಮಯ ಕೊಟ್ಟೇ ಇಲ್ಲ ಎನ್ನುವ ಮಾತುಗಳು ಬರಬಹುದು. ಹಾಗಾಗಿ ಮನೆಯವರ ಬಗ್ಗೆಯೂ ನೀವು ಯೋಚನೆ ಮಾಡಬೇಕಾಗುತ್ತದೆ.
ಮೀನ ರಾಶಿ: ಮೀನ ರಾಶಿಯವರಿಗೆ ಮಧ್ಯಾಹ್ನವರೆಗೂ ಕಷ್ಟದ ದಿನವಾಗಲಿದೆ. ಮಧ್ಯಾಹ್ನ ಬಳಿಕ ನಿಮಗೆ ಎಲ್ಲರಿಂದಲೂ ಒಳಿತಾಗಲಿದೆ.