Horoscope Today December 29th: ಧನು ರಾಶಿಗೆ ಬುಧ ಪ್ರವೇಶ: ಧನ ಲಾಭ, ಕಾರ್ಯ ಸಿದ್ಧಿ
ನಿತ್ಯ ಭವಿಷ್ಯ ಡಿಸೆಂಬರ್ 29, 2025: ವಿಶ್ವವಸು ನಾಮ ಸಂವತ್ಸರದ ದಕ್ಷಿಣಾಯನ ಹಿಮದೃತು, ಪೌಸ ಮಾಸೆ, ಶುಕ್ಷ ಪಕ್ಷ, ದಶಮಿ ತಿಥಿ, ಅಶ್ವಿನಿ ನಕ್ಷತ್ರದ ಡಿಸೆಂಬರ್ 29ನೇ ತಾರೀಖಿನ ಈ ದಿನದ ಭವಿಷ್ಯ ಹೇಗಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.
ಸಂಗ್ರಹ ಚಿತ್ರ -
ಬೆಂಗಳೂರು, ಡಿ. 29: ಇಂದು ವಿಶ್ವವಸು ನಾಮ ಸಂವತ್ಸರದ ದಕ್ಷಿಣಾಯನ ಹಿಮದೃತು, ಪೌಸ ಮಾಸೆ, ಕೃಷ್ಣ ಪಕ್ಷದ, ದಶಮಿ ತಿಥಿ, ಅಶ್ವಿನಿ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಗಳ ಭವಿಷ್ಯ ಹೇಗಿದೆ, ಯಾರೆಲ್ಲ ಎಚ್ಚರಿಕೆ ವಹಿಸಬೇಕು ಎಂಬ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.
ಮೇಷ ರಾಶಿ: ಇಂದು ಬುಧನು ಧನು ರಾಶಿಯನ್ನು ಪ್ರವೇಶ ಮಾಡಲಿದ್ದಾನೆ. ಹಾಗಾಗಿ ಹೆಚ್ಚಿನವರ ಮೇಲೆ ಇದರ ಪರಿಣಾಮ ಗೋಚರವಾಗಲಿದೆ. ಮೇಷ ರಾಶಿಯವರಿಗೆ ಸ್ವಲ್ಪ ಕಷ್ಟದ ದಿನವಾಗಲಿದೆ. ಮುಖ್ಯವಾದ ವ್ಯವಹಾರದಲ್ಲಿ ಬೇರೆಯವರಿಂದ ಸಹಕಾರ ನಿಮಗೆ ಸಿಗದೇ ಇರಬಹುದು. ಹಾಗಾಗಿ ಯಾವುದೇ ಮುಖ್ಯ ನಿರ್ಧಾರ ಕೈಗೊಳ್ಳಲು ಹೋಗಬೇಡಿ.
ವೃಷಭ ರಾಶಿ: ಇಂದು ವೃಷಭ ರಾಶಿಯವರಿಗೆ ಮನಸ್ಸಿಗೆ ನೆಮ್ಮದಿ ಇದ್ದು ಹಿಂದಿನ ಕ್ಷೇಷ ಎಲ್ಲವೂ ಮಾಯವಾಗುತ್ತದೆ. ಹಿಂದಿನ ಕೆಲವು ದಿನದಲ್ಲಿ ನಿಮ್ಮ ಪ್ರೀತಿ ಪಾತ್ರರ ಜತೆ ಮನಸ್ತಾಪವಿತ್ತು. ಅದೆಲ್ಲವೂ ಇಂದು ಬಗೆಹರಿದು ನೆಮ್ಮದಿ ಪ್ರಾಪ್ತಿಯಾಗುತ್ತದೆ.
ಮಿಥುನ ರಾಶಿ: ಮಿಥುನ ರಾಶಿಯಲ್ಲಿರುವವರಿಗೆ ಕಷ್ಟದ ದಿನವಾಗಲಿದೆ. ನಿಮ್ಮ ಪ್ರೀತಿ ಪಾತ್ರರ ಜತೆ ಜಗಳ, ಗೊಂದಲ ಉಂಟಾಗಬಹುದು. ಅದೇ ರೀತಿ ತಪ್ಪು ಯೋಚನೆಗಳು ನಿಮ್ಮನ್ನು ಕಾಡಬಹುದು. ಮುಖ್ಯವಾದ ಮೀಟಿಂಗ್, ಕೆಲಸ ಕಾರ್ಯದಲ್ಲಿ ನಿಮಗೆ ಬೇಕಾದಂತಹ ಸಹಕಾರ ಸಿಗದೆ ಇರಬಹುದು.
ಕಟಕ ರಾಶಿ: ಕಟಕ ರಾಶಿಯವರಿಗೆ ಅನುಕೂಲಕವಾಗಲಿದೆ. ಅದೇ ರೀತಿ ಶತ್ರುಗಳು ಹಿಮ್ಮೆಟ್ಟಬಹುದು. ನಿಮ್ಮ ಮಾತಿನ ಚಾಕಚಕ್ಯತೆಯಿಂದ ಗೆಲುವನ್ನು ಸಾಧಿಸುವ ಸಾಧ್ಯತೆ ಇದೆ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಮುಖ್ಯ ನಿರ್ಧಾರಗಳನ್ನು ಯಾವುದೇ ಕಾರಣಕ್ಕೂ ಕೈಗೊಳ್ಳಲು ಹೋಗಬೇಡಿ. ಬಹಳ ಎಚ್ಚರಿಕೆಯಿಂದ ಕೆಲಸ ಕಾರ್ಯಗಳನ್ನು ಮಾಡಿಕೊಳ್ಳಿ.
ಮನೆಯಲ್ಲಿ ಸುಗಂಧರಾಜ ಗಿಡವನ್ನು ಈ ದಿಕ್ಕಿನಲ್ಲಿ ನೆಟ್ಟರೆ, ಅದೃಷ್ಟ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ!
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಅತ್ಯುತ್ತಮ ದಿನವಾಗಲಿದೆ. ಎಲ್ಲ ಕಡೆಯಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಸಂಸಾರದಲ್ಲೂ ಖುಷಿ ಇರಲಿದೆ. ಆಸ್ತಿ ಪಾಸ್ತಿ ವಿಚಾರದಲ್ಲಿ ತೃಪ್ತಿ ಕಂಡು ಬರಲಿದೆ.
ತುಲಾ ರಾಶಿ: ತುಲಾ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಸಾಮಾಜಿಕ ಕೆಲಸ ಕಾರ್ಯದಲ್ಲಿ ಜಯ ಸಿಗದೇ ಇರಬಹುದು. ನೀವು ಆಡಿದ ಮಾತಿನಿಂದ ತೊಂದರೆ ಆಗುವ ಸಾಧ್ಯತೆ ಇದೆ.
ವೃಶ್ಚಿಕ ರಾಶಿ: ವೃಶ್ಚಿಕ ರಾಶಿಯವರಿಗೆ ಉತ್ತಮವಾದ ದಿನವಾಗಲಿದ್ದು, ಮನಸ್ಸಿಗೆ ನೆಮ್ಮದಿ ಸಿಗಲಿದೆ. ಹಿಂದೆ ಇದ್ದ ಗೊಂದಲಗಳು ಎಲ್ಲವೂ ಮಾಯವಾಗುತ್ತದೆ.
ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಕಷ್ಟ ಗೋಚರವಾಗಲಿದೆ. ನೀವು ಆಡಿದ ಮಾತಿನಿಂದ ಬೇರೆಯವರಿಗೆ ತೊಂದರೆ ಆಗುವ ಸಾಧ್ಯತೆ ಇದೆ. ಹಾಗಾಗಿ ನಿಮ್ಮ ಮಾತಿನಲ್ಲಿ ಬಹಳ ನಿಗಾ ಇರಲಿ.
ಮಕರ ರಾಶಿ: ಈ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಮಿತೃತ್ವದಲ್ಲಿ ಒಡಕು ಕಾಣುವ ಸಾಧ್ಯತೆ ಇದೆ. ಕೆಲವು ದಿನಗಳವರೆಗೆ ನಿಮ್ಮ ಸಮಸ್ಯೆಯನ್ನು ತಾಳ್ಮೆಯಿಂದ ಬಗೆಹರಿಸಬೇಕಾಗುತ್ತದೆ.
ಕುಂಭ ರಾಶಿ: ಈ ರಾಶಿಯವರಿಗೆ ಅತ್ಯುತ್ತಮ ದಿನವಾಗಲಿದೆ. ಮಿತ್ರರಿಂದ ನೆಮ್ಮದಿ ಇರಲಿದ್ದು ಇಷ್ಟಾರ್ಥ ಸಿದ್ಧಿಯಾಗಲಿದೆ. ಧನಾಗಮನ ಕೂಡ ಆಗಲಿದೆ.
ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮ ದಿನವಾಗಲಿದ್ದು, ಮುನ್ನಡೆಯನ್ನು ಸಾಧಿಸುತ್ತೀರಿ. ಹಾಗೆಯೇ ಯಶಸ್ಸಿನ ಗುರಿಯನ್ನು ನೀವು ತಲುಪಲಿದ್ದೀರಿ.