ಬೆಂಗಳೂರು, ಡಿ. 31: ವಿಶ್ವವಸು ನಾಮ ಸಂವತ್ಸರದ ದಕ್ಷಿಣಾಯನ ಹಿಮದೃತು, ಪೌಸ ಮಾಸೆ, ಕೃಷ್ಣ ಪಕ್ಷದ, ದ್ವಾದಶಿ ತಿಥಿ, ಕೃತಿಕಾ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯ ಹೇಗಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ತಿಳಿಸಿದ್ದಾರೆ.
ಮೇಷ ರಾಶಿ: ಇಂದು ಕೃತಿಕಾ ನಕ್ಷತ್ರ ಇದ್ದು, ಇದರ ಅಧಿಪತಿ ರವಿ. ಹೀಗಾಗಿ ಎಲ್ಲ ರಾಶಿಗೂ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಯವರಿಗೆ ಕುಟುಂಬದಲ್ಲಿ ತೊಂದರೆ ಆಗುವ ಸಾಧ್ಯತೆ ಇದ್ದು ಇದನ್ನು ಪರಿಹರಿಸಿಕೊಳ್ಳಲು ಹೆಚ್ಚಿನ ಶ್ರಮ ಪಡಬೇಕಾಗುತ್ತದೆ.
ವೃಷಭ ರಾಶಿ: ಇಂದು ವೃಷಭ ರಾಶಿಯವರಿಗೆ ಉತ್ತಮ ದಿನವಾಗಲಿದೆ. ನಾನು ಹೇಳಿದ್ದೆ ಸರಿ ಎನ್ನುವ ಮನೋಭಾವ ನಿಮ್ಮಲ್ಲಿ ಬಂದರೂ ತಾಳ್ಮೆಯಿಂದ ಮಾತನಾಡಿಸುವ ಗುಣ ಇರಬೇಕು.
ಮಿಥುನ ರಾಶಿ: ಮಿಥುನ ರಾಶಿಯಲ್ಲಿರುವವರಿಗೆ ಕಷ್ಟದ ದಿನವಾಗಲಿದೆ. ಪ್ರೀತಿ ಪಾತ್ರರಿಂದ ನೆಮ್ಮದಿ ಇರುವುದಿಲ್ಲ. ಮುಖ್ಯವಾದ ಕೆಲಸ ಕಾರ್ಯದಲ್ಲಿ ನಿಮಗೆ ತೊಂದರೆ, ಒಡಕು ಕಾಣುವ ಸಾಧ್ಯತೆ ಇದೆ.
ಕಟಕ ರಾಶಿ: ಕಟಕ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು, ಧನಾಗಮನ ಕೂಡ ಆಗಲಿದೆ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಕಾರ್ಯಕ್ಷೇತ್ರದ ಜವಾಬ್ದಾರಿಗಳು ಹೆಚ್ಚಾಗುತ್ತವೆ. ಆದರೆ ಇದರ ಜತೆ ಹೆಚ್ಚಿನ ಯಶಸ್ಸು ಕೂಡ ಸಿಗುತ್ತದೆ.
ಕುಬೇರ ದಿಕ್ಕು ಅಥವಾ ಅಗ್ನಿ ಮೂಲೆ- ಅಡುಗೆ ಮನೆ ಎಲ್ಲಿದ್ದರೆ ಒಳ್ಳೆಯದು?
ಕನ್ಯಾ ರಾಶಿ: ತುಲಾ ರಾಶಿಯವರಿಗೆ ಅದೃಷ್ಟದ ದಿನವಾಗಿದ್ದು ಹಿಂದಿನ ಎರಡು ಮೂರು ದಿನದ ಮನಸ್ಸಿನ ಕ್ಷೇಷ ಎಲ್ಲವೂ ಮಾಯವಾಗುತ್ತದೆ. ಆದರೂ ಕೂಡ ಧ್ಯಾನ ಇತ್ಯಾದಿ ಬಗ್ಗೆ ಹೆಚ್ಚಿನ ಗಮನ ನೀಡಬೇಕಾಗುತ್ತದೆ.
ತುಲಾ ರಾಶಿ: ತುಲಾ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಯಾವುದೇ ರೀತಿಯ ಮುಖ್ಯ ನಿರ್ಧಾರಗಳನ್ನು ಇಂದು ಮಾಡಲು ಹೋಗಬೇಡಿ. ಇಮೇಲ್, ಮೀಟಿಂಗ್ ಇತ್ಯಾದಿಯನ್ನು ಯಾವುದೇ ಮಾಡುವುದು ಇಂದು ಒಳಿತಲ್ಲ.
ವೃಶ್ಚಿಕ ರಾಶಿ: ವೃಶ್ಚಿಕ ರಾಶಿಯವರಿಗೆ ಉತ್ತಮ ದಿನವಾಗಿದ್ದು ಎಲ್ಲರಿಂದಲೂ ಸಹಕಾರ ನಿಮಗೆ ಸಿಗುತ್ತದೆ. ದಾಂಪತ್ಯದಲ್ಲಿ ನೆಮ್ಮದಿಯ ಜತೆಗೆ ಖುಷಿಯಾದ ದಿನವನ್ನು ಕೂಡ ಕಳೆಯಲಿದ್ದೀರಿ.
ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಅತ್ಯುತ್ತಮ ದಿನವಾಗಲಿದ್ದು, ಸಾಮಾಜಿಕ ಚಟುವಟಿಕೆಗಳಲ್ಲಿ ಯಶಸ್ಸು ಕಾಣುತ್ತೀರಿ. ಕಾರ್ಯಕ್ಷೇತ್ರದಲ್ಲಿ ಕೂಡ ಲಾಭ ಗಳಿಸುತ್ತೀರಿ.
ಮಕರ ರಾಶಿ: ಈ ರಾಶಿಯವರಿಗೆ ಸ್ವಲ್ಪ ಕಷ್ಟದ ದಿನವಾಗಲಿದೆ. ಬಿಸಿನೆಸ್, ವ್ಯವಹಾರದಲ್ಲಿರುವವರಿಗೆ ಸ್ವಲ್ಪ ಕಷ್ಟದ ದಿನವಾಗಲಿದೆ. ಆದ್ದರಿಂದ ಸ್ವಲ್ಪ ಜಾಗರೂಕತೆಯಿಂದ ನೀವು ವ್ಯವಹಾರ ಮಾಡಬೇಕಾಗುತ್ತದೆ.
ಕುಂಭ ರಾಶಿ: ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇದ್ದು ಕುಟುಂಬದ ಬಗ್ಗೆ ನೀವು ಹೆಚ್ಚಿನ ಜವಾಬ್ದಾರಿ ವಹಿಸಿಕೊಳ್ಳಬೇಕಾಗುತ್ತದೆ.
ಮೀನ ರಾಶಿ: ಮೀನ ರಾಶಿಯವರಿಗೆ ಸೋಶಿಯಲ್ ಮೀಡಿಯಾ, ಪತ್ರಿಕೋದ್ಯಮದಲ್ಲಿ ಇರುವವರಿಗೆ ಉತ್ತಮ ದಿನವಾಗಲಿದೆ. ನಿಮ್ಮ ಕಾರ್ಯ ಕ್ಷೇತ್ರದಲ್ಲಿ ಹೆಚ್ಚಿನ ಪ್ರಗತಿಯನ್ನು ಕಾಣಬಹುದು. ಆತ್ಮವಿಶ್ವಾಸ ಕೂಡ ಹೆಚ್ಚಾಗಲಿದೆ.