ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Horoscope Today January 11th: ಕುಜನ ಪರಿಣಾಮ; ಈ ರಾಶಿಗೆ ಇಂದು ಹಣಕಾಸಿನ ಜವಾಬ್ದಾರಿಗಳು ಹೆಚ್ಚು!

ನಿತ್ಯ ಭವಿಷ್ಯ ಜನವರಿ 11, 2026: ಇಂದು ವಿಶ್ವವಸು ನಾಮ ಸಂವತ್ಸರದ ದಕ್ಷಿಣಾಯನ ಹಿಮದೃತು ಪೌಸ ಮಾಸೆ, ಕೃಷ್ಣ ಪಕ್ಷದ, ಅಷ್ಟಮಿ ತಿಥಿ ಚಿತ್ತ ನಕ್ಷತ್ರದ ಜನವರಿ 11ನೇ ತಾರೀಖಿನ ಭಾನುವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ

ಸಂಗ್ರಹ ಚಿತ್ರ

ಬೆಂಗಳೂರು: ಇಂದು ವಿಶ್ವವಸು ನಾಮ ಸಂವತ್ಸರದ ದಕ್ಷಿಣಾಯನ ಹಿಮದೃತು, ಪೌಸ ಮಾಸೆ, ಕೃಷ್ಣ ಪಕ್ಷದ, ಅಷ್ಟಮಿ ತಿಥಿ, ಚಿತ್ತ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದಂತೆ ನಿಮ್ಮ ಭವಿಷ್ಯ ಹೇಗಿದೆ ಎಂದು ತಿಳಿಯಿರಿ.

ಮೇಷ ರಾಶಿ: ಇಂದು ಚಿತ್ತ ನಕ್ಷತ್ರ ಇದ್ದು ಇದರ ಅಧಿಪತಿ ಕುಜ ಆಗಿದ್ದಾನೆ. ಹೀಗಾಗಿ ಎಲ್ಲ ರಾಶಿಗೂ ಕೋಪ, ಹತಾಶೆ ಉಂಟಾ ಗುವ ಸಾಧ್ಯತೆ ಇದೆ. ಮೇಷ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಪ್ರಾಪ್ತಿಯಾಗಲಿದ್ದು ಸಾಮಾಜಿಕ ಕೆಲಸ ಕಾರ್ಯದಲ್ಲಿ ಅನೂಕೂಲವಾಗಿದೆ.

ವೃಷಭ ರಾಶಿ: ಇಂದು ವೃಷಭ ರಾಶಿ ಅವರಿಗೆ ಮಧ್ಯಾಹ್ನ ವರೆಗೂ ಮನಸ್ಸಿಗೆ ಕ್ಷೇಷ ಉಂಟಾಗಲಿದೆ. ಮಧ್ಯಾಹ ಬಳಿಕ ನೆಮ್ಮದಿ ಪ್ರಾಪ್ತಿ ಯಾಗಲಿದ್ದು ಸಾಮಾಜಿಕ ಚಟುವಟಿಕೆಗಳಲ್ಲಿ ನಿಮಗೆ ಗೌರವ ಸಿಗುತ್ತದೆ.

ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರಿಗೆ ಮಧ್ಯಾಹ್ನ ವರೆಗೂ ಮನೆಯ ಜವಾಬ್ದಾರಿ ಗಳು,ತಾಯಿಯ ವಿಚಾರ,ಆಸ್ತಿ ಪಾಸ್ತಿ ವಿಚಾರಗಳ ಬಗ್ಗೆ ಕಾಡುತ್ತವೆ. ಮಧ್ಯಾಹ್ನ ಬಳಿಕ ಹಣಕಾಸಿನ ಜವಾಬ್ದಾರಿಗಳು ಜಾಸ್ತಿ ಯಾಗುತ್ತವೆ.

ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ತಿಳಿಸಿದ ದಿನ ಭವಿಷ್ಯ:



ಕಟಕ ರಾಶಿ: ಕಟಕ ರಾಶಿ ಅವರಿಗೆ ಮಧ್ಯಾಹ್ನ ವರೆಗೂ ತುಂಬಾ ಚೆನ್ನಾಗಿದೆ. ಮಧ್ಯಾಹ್ನ ಬಳಿಕ ನಾನಾ ರೀತಿಯ ಯೋಚನೆ ಕಾಡುವುದರಿಂದ ಮುಖ್ಯವಾದ ನಿರ್ಧಾರಗಳು ಬೇಡ.

Vastu Tips: ಮೊಬೈಲ್ ಹಿಂದಿನ ಕವರ್‌ನಲ್ಲಿ ಹಣ ಇಡುತ್ತೀರಾ? ಈ ಬಗ್ಗೆ ವಾಸ್ತು ಹೇಳೋದು ಏನು ಗೊತ್ತಾ?

ಸಿಂಹ ರಾಶಿ: ಸಿಂಹ ರಾಶಿ ಅವರಿಗೆ ಮಧ್ಯಾಹ್ನ ವರೆಗೂ ಮನಸ್ಸಿಗೆ ಕ್ಲೇಷ ಉಂಟಾಗುವ ದಿನವಾಗುತ್ತದೆ. ಮಧ್ಯಾಹ್ನ ಬಳಿಕ ಮನಸ್ಸಿಗೆ ಅತೀ ಹೆಚ್ಚಿನ ನೆಮ್ಮದಿ ಪ್ರಾಪ್ತಿಯಾಗುತ್ತದೆ.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಮಧ್ಯಾಹ್ನ ವರೆಗೂ ಮನಸ್ಸಿಗೆ ನೆಮ್ಮದಿ ಇದೆ. ಮಧ್ಯಾಹ್ನ ಬಳಿಕ ಈ ಸುಖವನ್ನು ಮನೆಯವರ ಜೊತೆಗೂ ಹಂಚಿಕೊಂಡು ಆನಂದವನ್ನು ಪಡೆಯಬಹುದು.

ತುಲಾ ರಾಶಿ: ತುಲಾ ರಾಶಿಗೆ ಮಧ್ಯಾಹ್ನ ವರೆಗೂ ಕಷ್ಟಕರವಾದ ದಿನವಗುತ್ತದೆ. ಮಧ್ಯಾಹ್ನ ಬಳಿಕ ಮನಸ್ಸಿಗೆ ನೆಮ್ಮದಿ ಸಿಗುತ್ತದೆ.

ವೃಶ್ಚಿಕ ರಾಶಿ: ವೃಶ್ಚಿಕ ರಾಶಿ ಅವರಿಗೆ ಮಧ್ಯಾಹ್ನ ವರೆಗೂ ಬಹಳ ಸುಖಕರವಾದ ದಿನವಾಗಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು ಧನ ಆಗಮನವಾಗುತ್ತದೆ. ಮಧ್ಯಾಹ್ನ ಬಳಿಕ ಮನಸ್ಸಿಗೆ ಕ್ಲೇಷ ತರುವ ಸಂದರ್ಭ ಬರಬಹುದು.

ಧನಸ್ಸು ರಾಶಿ: ಧನಸ್ಸು ರಾಶಿ ಅವರಿಗೆ ಮಧ್ಯಾಹ್ನ ವರೆಗೂ ಕಾರ್ಯಕ್ಷೇತ್ರದ ಜವಾಬ್ದಾರಿಗಳಿಂದ ತಲೆಬಿಸಿಯಾಗುತ್ತದೆ. ಮಧ್ಯಾಹ್ನ ಬಳಿಕ ಮಿತ್ರರ ಜೊತೆ ಚೆನ್ನಾಗಿ ಮಾತನಾಡಿಕೊಂಡು ನೆಮ್ಮದಿ ಕಾಣುತ್ತೀರಿ.

ಮಕರ ರಾಶಿ: ಮಕರ ರಾಶಿಯವರಿಗೆ ಮಧ್ಯಾಹ್ನ ವರೆಗೂ ಸ್ವಲ್ಪ ಅಡೆತಡೆಗಳು ಇರಬಹುದು. ಹಾಗಾಗಿ ಭಗವಂತನ ಧ್ಯಾನ ಮಾಡಿ ಸಮಯ ಕಳೆಯಬೇಕಾಗುತ್ತದೆ.ಮಧ್ಯಾಹ್ನ ಬಳಿಕ ಮನಸ್ಸಿಗೆ ನೆಮ್ಮದಿ ಸಿಗಲಿದೆ.

ಕುಂಭರಾಶಿ: ಈ ರಾಶಿಯವರಿಗೆ ಮಧ್ಯಾಹ್ನ ವರೆಗೂ ಮನಸ್ಸಿಗೆ ಕ್ಷೇಷ ಇರುತ್ತದೆ. ಮಧ್ಯಾಹ್ನ ಬಳಿಕ ಬಾಗ್ಯೋದಯವಾದ ದಿನವಾಗುತ್ತದೆ.

ಮೀನ ರಾಶಿ: ಮೀನ ರಾಶಿ ಅವರಿಗೆ ಮಧ್ಯಾಹ್ನ ವರೆಗೆ ತುಂಬಾ ಚೆನ್ನಾಗಿ ಇರುವ ದಿನವಾಗುತ್ತದೆ. ಮಧ್ಯಾಹ್ನ ಬಳಿಕ ಮನಸ್ಸಿಗೆ ಸ್ವಲ್ಪ ಕ್ಲೇಷ ಉಂಟಾಗುವ ದಿನವಾಗುತ್ತದೆ.ಮುಖ್ಯವಾದ ಯಾವುದೇ ನಿರ್ಧಾರ ಕೈಗೊಳ್ಳಬೇಡಿ.