Horoscope Today January 18th: ಶುಕ್ರನಿಂದ ಈ ರಾಶಿಗೆ ಇಂದು ಯಶಸ್ಸಿನ ಅಬ್ಬರ!
ನಿತ್ಯ ಭವಿಷ್ಯ ಜನವರಿ 18, 2026: ಇಂದು ವಿಶ್ವವಸು ನಾಮ ಸಂವತ್ಸರದ ಉತ್ತರಾಯನ ಹಿಮದೃತು ಪೌಸ ಮಾಸೆ, ಕೃಷ್ಣ ಪಕ್ಷದ, ಅಮಾವಾಸ್ಯ ತಿಥಿ ಪೂರ್ವಾಷಡ ನಕ್ಷತ್ರದ ಜನವರಿ 18ನೇ ತಾರೀಖಿನ ಭಾನುವಾರದ ಈ ದಿನ ಬುಧ ಮಕರ ರಾಶಿಯನ್ನು ಪ್ರವೇಶ ಮಾಡಿದ್ದಾನೆ. ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ..
ಸಂಗ್ರಹ ಚಿತ್ರ -
ಬೆಂಗಳೂರು: ಇಂದು ವಿಶ್ವವಸು ನಾಮ ಸಂವತ್ಸರದ ಉತ್ತರಾಯನ ಹಿಮದೃತು, ಪೌಸ ಮಾಸೆ, ಕೃಷ್ಣ ಪಕ್ಷದ, ಪೂರ್ವಾಷಡ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದಂತೆ ನಿಮ್ಮ ಭವಿಷ್ಯ ಹೇಗಿದೆ ಎಂದು ತಿಳಿಯಿರಿ.
ಮೇಷ ರಾಶಿ: ಇಂದು ಪೂರ್ವಾಷಡ ನಕ್ಷತ್ರ ಇದ್ದು ಇದರ ಅಧಿಪತಿ ಶುಕ್ರ. ಹಾಗಾಗಿ ಹೆಚ್ಚಿನವರಿಗೆ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಮೇಷ ರಾಶಿಯವರಿಗೆ ಇಂದು ಕಷ್ಟಕರವಾದ ದಿನವಾಗಿದೆ. ಅದೇ ರೀತಿ ಹೆಂಗಸರಿಂದ ಮನಸ್ಸಿಗೆ ಕ್ಲೇಷ ಉಂಟಾಗುವ ಸಾಧ್ಯತೆ ಇರುತ್ತದೆ.
ವೃಷಭ ರಾಶಿ: ಇಂದು ವೃಷಭ ರಾಶಿ ಅವರಿಗೆ ಉತ್ತಮವಾದ ದಿನವಾಗಿದ್ದು ಇಷ್ಟಾರ್ಥ ಸಿದ್ದಿ ಯಾಗಲಿದೆ. ಇಂದು ನಿಮಗೆ ಭಾಗ್ಯೋದಯವಾದ ದಿನವಾಗಲಿದೆ
ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರಿಗೆ ಸ್ವಲ್ಪ ಕಷ್ಟಕರವಾದ ದಿನವಾಗುತ್ತದೆ. ಮಾತುಕತೆಗಳಲ್ಲಿ ಮನಸ್ಸಿಗೆ ತೊಂದರೆ ಯಾಗುವ ಸಾಧ್ಯತೆ ಇರುತ್ತದೆ. ಅದೇ ರೀತಿ ಹೆಚ್ಚಿನ ಕ್ಲೇಷ ಉಂಟಾಗುವ ಸಾಧ್ಯತೆ ಇರುತ್ತದೆ.
ಕಟಕ ರಾಶಿ: ಕಟಕ ರಾಶಿ ಅವರಿಗೆ ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಸಿಗಲಿದ್ದು ಇಷ್ಟಾರ್ಥ ಸಿದ್ದಿಯಾಗಲಿದೆ
Vastu Tips: ಈ ವಸ್ತುಗಳನ್ನು ಉತ್ತರ ದಿಕ್ಕಿನಲ್ಲಿ ಇಟ್ಟುಕೊಂಡ್ರೆ ದುಡ್ಡಿನ ಹೊಳೆ ಹರಿಯೋದು ಪಕ್ಕಾ!
ಸಿಂಹ ರಾಶಿ: ಸಿಂಹ ರಾಶಿ ಅವರಿಗೆ ಉತ್ತಮವಾದ ದಿನವಾಗಿದ್ದು ಸಾಮಾಜಿಕ ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗುತ್ತದೆ.ಇಂದು ಉತ್ತಮವಾದ ಲಾಭ ದಾಯಕ ದಿನ ನಿಮ್ಮದು ಆಗುತ್ತದೆ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಸ್ವಲ್ಪ ಕಷ್ಟಕರವಾದ ದಿನ ವಾಗಿದೆ. ಹಣಕಾಸಿನ ವಿಚಾರ ಹಾಗೂ ಮಕ್ಕಳ ವಿಚಾರದಲ್ಲಿ ಸ್ವಲ್ಪ ಕ್ಲೇಷ ಉಂಟಾಗುವ ದಿನ ಆಗುತ್ತದೆ.
ತುಲಾ ರಾಶಿ: ತುಲಾ ರಾಶಿಗೆ ಮನಸ್ಸಿಗೆ ನೆಮ್ಮದಿ ತರುವ ದಿನವಾಗಿದೆ. ನಿಮ್ಮ ಮಾತುಕತೆಯಲ್ಲಿ ಸಮಾಧಾನ ತರುವ ದಿನವಾಗುತ್ತದೆ. ಸುಖಕರವಾಗಿ ನೀವು ದಿನವನ್ನು ಕಳೆಯಲಿದ್ದೀರಿ.
ವೃಶ್ಚಿಕ ರಾಶಿ: ವೃಶ್ಚಿಕ ರಾಶಿ ಅವರಿಗೆ ಸ್ವಲ್ಪ ಕಷ್ಟಕರವಾದ ದಿನವಾಗಿದೆ. ಆದರೂ ಕೂಡ ಅಣ್ಣ ತಮ್ಮಂದಿರು,ಅಕ್ಕ ತಮ್ಮಂದಿರ ಸಹಾಯದಿಂದ ಗೆಲುವನ್ನು ಸಾಧಿಸಬಹುದು.ಮಾಸ್ ಮೀಡಿಯಾ, ಪತ್ರಿಕೋದ್ಯಮದಲ್ಲಿ ಇರೋರಿಗೆ ಲಾಭ ದಾಯಕವಾಗಿದೆ
ಧನಸ್ಸು ರಾಶಿ: ಧನಸ್ಸು ರಾಶಿ ಅವರಿಗೆ ಮನೆಯ ವಿಚಾರವಾಗಿ ಸ್ವಲ್ಪ ಕಷ್ಟಕರವಾದ ದಿನವಾಗಿದೆ. ಆದರೂ ಕೂಡ ಸಂಸಾರದಲ್ಲಿ ನಿಮ್ಮ ಸಾಮರಸ್ಯವನ್ನು ಕಾಪಾಡುವ ಗುಣ ಮುಖ್ಯವಾಗುತ್ತದೆ.
ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮವಾದ ದಿನ ವಾಗಿದೆ.ಹಿಂದಿನ ಮೂರು ನಾಲ್ಕು ದಿನದಲ್ಲಿ ಇದ್ದ ನೋವು ಮಾಯವಾಗಿ ನೆಮ್ಮದಿ ತರುವ ದಿನವಾಗಿದೆ.
ಕುಂಭರಾಶಿ: ಈ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಮುಖ್ಯವಾದ ಯಾವುದೇ ನಿರ್ಧಾರಗಳು ಯಾವುದೇ ಬೇಡ. ಮನಸ್ಸಿಗೆ ಜಾಸ್ತಿ ಕ್ಲೇಷ ಜಾಸ್ತಿಯೇ ಆಗಬಹುದು.
ಮೀನ ರಾಶಿ: ಮೀನ ರಾಶಿ ಅವರಿಗೆ ಅತ್ಯುತ್ತಮವಾದ ದಿನ ವಾಗಿದೆ. ಮನಸ್ಸಿಗೆ ನೆಮ್ಮದಿ ಇದ್ದು ಇಷ್ಟಾರ್ಥ ಸಿದ್ದಿಯಾಗಲಿದೆ. ಮಿತ್ರರಿಂದ, ಗುಂಪುಗಳಿಂದ ಯಶಸ್ಸು ಸಿಗುತ್ತದೆ.