ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Horoscope Today January 20th: ಇಂದು ಶತ್ರುಗಳಿಂದ ದೂರವಿರಿ

ನಿತ್ಯ ಭವಿಷ್ಯ ಜನವರಿ 20, 2026: ವಿಶ್ವವಸು ನಾಮ ಸಂವತ್ಸರದ ಉತ್ತರಾಯನ ಶಿರದೃತು, ಮಘೆ ಮಾಸೆ, ಶುಕ್ಷ ಪಕ್ಷ, ದ್ವೀತಿಯ ತಿಥಿ ಶ್ರವಣ ನಕ್ಷತ್ರದ ಜನವರಿ 20ನೇ ತಾರೀಖಿನ ಮಂಗಳವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ..

ಸಂಗ್ರಹ ಚಿತ್ರ

ಬೆಂಗಳೂರು: ಇಂದು ವಿಶ್ವವಸು ನಾಮ ಸಂವತ್ಸರದ ಉತ್ತರಾಯನ ಶರದೃತು, ಮಘೆ ಮಾಸೆ, ಶುಕ್ಷ ಪಕ್ಷ, ಶ್ರವಣ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯ ಹೇಗಿದೆ ಎನ್ನುವ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ತಿಳಿಸಿದ್ದಾರೆ.

ಮೇಷ ರಾಶಿ: ಇಂದು ಶ್ರವಣ ನಕ್ಷತ್ರ ಇದ್ದು ಇದರ ಅಧಿಪತಿ ಚಂದ್ರ. ಹಾಗಾಗಿ ಹೆಚ್ಚಿನವರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಯವರಿಗೆ ಇಂದು ಅತ್ಯುತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಪ್ರಾಪ್ತಿಯಾಗಲಿದ್ದು, ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗುತ್ತದೆ. ಹಿಂದಿನ ದಿನದಲ್ಲಿ ಇದ್ದಂತಹ ಎಲ್ಲ ತೊಂದರೆಗಳು ಬಗೆಹರಿಯಲಿದೆ.

ವೃಷಭ ರಾಶಿ: ಇಂದು ವೃಷಭ ರಾಶಿಯವರಿಗೆ ಅದೃಷ್ಟದ ದಿನವಾಗಲಿದೆ. ಮನಸ್ಸಿಗೆ ಇಂದು ಸ್ವಲ್ಪ ನೆಮ್ಮದಿ ಪ್ರಾಪ್ತಿಯಾಗುತ್ತದೆ. ನಿಮ್ಮ ಬಗ್ಗೆ ಈ ಹಿಂದೆ ಮಾಡಿದ್ದ ಟೀಕೆಗಳು ಇಂದು ಕಡಿಮೆಯಾಗಬಹುದು.

ಮಿಥುನ ರಾಶಿ: ಮಿಥುನ ರಾಶಿಯಲ್ಲಿರುವವರಿಗೆ ಸ್ವಲ್ಪ ಕಷ್ಟದ ದಿನವಾಗಲಿದೆ. ಮನಸ್ಸಿಗೆ ಇದ್ದಂತಹ ನೋವು ಮುಂದುವರಿಯಲಿದೆ. ಪ್ರೀತಿ ಪಾತ್ರರಿಂದ ಯಾವುದೇ ಸಹಕಾರ ನಿಮಗೆ ಸಿಗುವುದಿಲ್ಲ.

ಕಟಕ ರಾಶಿ: ಕಟಕ ರಾಶಿಯವರಿಗೆ ಅತೀ ಉತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಸಿಗಲಿದ್ದು ಎಲ್ಲ ಕೆಲಸ ಕಾರ್ಯದಲ್ಲಿ ನಿಮಗೆ ಯಶಸ್ಸು ಸಿಗುತ್ತದೆ.

ಹಣ ಬರುತ್ತಿಲ್ಲ, ಬಂದ ಹಣ ಉಳಿಯುತ್ತಿಲ್ಲವೆಂಬ ಚಿಂತೆಯೇ? ಈ ಸಿಂಪಲ್ ಪರಿಹಾರಗಳನ್ನು ಮಾಡಿ

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಮನಸ್ಸಿಗೆ ನೆಮ್ಮದಿ ಸಿಗಲಿದ್ದು, ಶತ್ರುಗಳು ಹಿಮ್ಮೆಟ್ಟಬಹುದು. ಆದರೂ ಕೂಡ ಮನಸ್ಸಿಗೆ ಕಿರಿ ಕಿರಿ ಇರುತ್ತದೆ.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಸ್ವಲ್ಪ ಕಷ್ಟದ ದಿನವಾಗಲಿದೆ. ಮುಖ್ಯವಾದ ಯಾವುದೇ ನಿರ್ಧಾರಗಳು ಇಂದು ಬೇಡ. ಹಣಕಾಸಿನ ವಿಚಾರವಾಗಿ ನೆಮ್ಮದಿ ಇರುವುದಿಲ್ಲ.

ತುಲಾ ರಾಶಿ: ತುಲಾ ರಾಶಿಗೆ ಕಷ್ಟದ ದಿನವಾಗಲಿದೆ.‌ ಯಾವುದೇ ಕೆಲಸ ಕಾರ್ಯದಲ್ಲಿ ಯಶಸ್ಸು ಇಂದು ಸಿಗುವುದಿಲ್ಲ. ರಿಯಲ್ ಎಸ್ಟೇಟ್, ಕೋರ್ಟ್, ವ್ಯವಹಾರ ಮಾಡುವವರಿಗೆ ನಷ್ಟವಾಗುತ್ತದೆ.

ವೃಶ್ಚಿಕ ರಾಶಿ: ವೃಶ್ಚಿಕ ರಾಶಿಯವರಿಗೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗುತ್ತದೆ. ಸೋಶಿಯಲ್ ಮೀಡಿಯಾ, ಮಾಧ್ಯಮ, ಮಾರ್ಕೆಟಿಂಗ್‌ನಲ್ಲಿ ಇರುವವರಿಗೆ ಉತ್ತಮ ದಿನವಾಗಲಿದೆ.

ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಮನೆಯ ವಿಚಾರದಲ್ಲಿ ನೆಮ್ಮದಿ ಇರುತ್ತದೆ. ಇಂದು ಖುಷಿಯಾದ ವಾತಾವರಣದೊಂದಿಗೆ ಸಮಯ ಕಳೆಯಲಿದ್ದೀರಿ.

ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಸಿಗಲಿದ್ದು ಹಿಂದಿನ ಎರಡು ಮೂರು ದಿನಗಳಲ್ಲಿ ಇದ್ದ ನೋವು ಎಲ್ಲವೂ ಮಾಯವಾಗುತ್ತದೆ.

ಕುಂಭರಾಶಿ: ಈ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಮುಖ್ಯವಾದ ಯಾವುದೇ ನಿರ್ಧಾರಗಳು ಬೇಡ. ಧ್ಯಾನಾದಿಗಳನ್ನು ಮಾಡಿ ನೀವು ಸಮಯ ಕಳೆಯ ಬೇಕಾಗುತ್ತದೆ.

ಮೀನ ರಾಶಿ: ಮೀನ ರಾಶಿಯವರಿಗೆ ಅತ್ಯುತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇದ್ದು ಇಷ್ಟಾರ್ಥ ಸಿದ್ದಿಯಾಗಲಿದೆ. ಮಿತ್ರರಿಂದ, ಗುಂಪುಗಳಿಂದ ಯಶಸ್ಸು ಪ್ರಾಪ್ತಿಯಾಗುತ್ತದೆ.