Horoscope Today January 3rd: ರಾಹುವಿನ ಪ್ರಭಾವ: ಈ ರಾಶಿಗೆ ಹಣಕಾಸಿನ ವಿಚಾರದಲ್ಲಿ ಭಾರೀ ಲಾಭ!
ನಿತ್ಯ ಭವಿಷ್ಯ ಜನವರಿ 3, 2026: ಇಂದು ವಿಶ್ವವಸು ನಾಮ ಸಂವತ್ಸರದ ದಕ್ಷಿಣಾಯನ ಹಿಮದೃತು ಪೌಸ ಮಾಸೆ, ಶುಕ್ಷ ಪಕ್ಷದ, ಪೌರ್ಣಮಿ ತಿಥಿ, ಆರಿದ್ರಾ ನಕ್ಷತ್ರದ ಜನವರಿ 3ನೇ ತಾರೀಖಿನ ಶನಿವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ..
ಸಂಗ್ರಹ ಚಿತ್ರ -
ಬೆಂಗಳೂರು: ಇಂದು ವಿಶ್ವವಸು ನಾಮ ಸಂವತ್ಸರದ ದಕ್ಷಿಣಾಯನ ಹಿಮದೃತು, ಪೌಸ ಮಾಸೆ, ಕೃಷ್ಣ ಪಕ್ಷದ, ಪೌರ್ಣಮಿ ತಿಥಿ, ಆರಿದ್ರಾ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದಂತೆ ನಿಮ್ಮ ಭವಿಷ್ಯ ಹೇಗಿದೆ ಎಂದು ತಿಳಿಯಿರಿ.
ಮೇಷ ರಾಶಿ: ಇಂದು ಆರಿದ್ರಾ ನಕ್ಷತ್ರ ಇದ್ದು ಇದರ ಅಧಿಪತಿ ರಾಹು ಆಗಿದ್ದಾನೆ. ಹೀಗಾಗಿ ಎಲ್ಲ ರಾಶಿಗೂ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿ ಯವರಿಗೆ ಇಂದು ಅತ್ಯುತ್ತಮವಾದ ದಿನವಾಗಿದೆ. ಮಾಸ್ ಮೀಡಿಯಾ,ಸೋಷಿಯಲ್ ಮೀಡಿಯಾ, ಮಾರ್ಕೆಟಿಂಗ್ ನಲ್ಲಿ ಇರೋರಿಗೆ ಉತ್ತಮವಾದ ದಿನವಾಗಿದೆ.
ವಿಡಿಯೋ ನೋಡಿ
ವೃಷಭ ರಾಶಿ: ಇಂದು ವೃಷಭ ರಾಶಿ ಅವರಿಗೆ ಸಂಸಾರದಲ್ಲಿ ಅತೀ ಹೆಚ್ಚಿನ ನೆಮ್ಮದಿ ಸಿಗುತ್ತದೆ. ಆದರೆ ಏನೋ ಒಂದು ಬೇಸರ ನಿಮ್ಮನ್ನು ಕಾಡುವ ಸಾಧ್ಯತೆ ಕೂಡ ಇರುತ್ತದೆ.
ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರಿಗೆ ಉತ್ತಮ ವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇದ್ದು ಅತೀ ಹೆಚ್ಚಿನ ಮಹತ್ವಕಾಂಕ್ಷೆ ನಿಮಗೆ ಇರುತ್ತದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಹುರುಪು ನಿಮಗೆ ಸಿಗಬಹುದು.
Vastu Tips: ಮಲಗುವ ಕೋಣೆಯಲ್ಲಿ ನಕಾರಾತ್ಮಕ ಶಕ್ತಿ ಇದ್ದರೆ ತಿಳಿಯುವುದು ಹೇಗೆ?
ಕಟಕ ರಾಶಿ: ಕಟಕ ರಾಶಿ ಅವರಿಗೆ ಕಷ್ಟಕರವಾದ ದಿನವಾಗಿದೆ. ಮುಖ್ಯವಾದ ಯಾವುದೇ ನಿರ್ಧಾರಗಳು ಬೇಡ. ಪ್ರೀತಿ ಪಾತ್ರರಿಂದ ಯಾವುದೇ ಸಹಕಾರ ನಿಮಗೆ ಸಿಗುವುದಿಲ್ಲ.
ಸಿಂಹ ರಾಶಿ: ಸಿಂಹ ರಾಶಿ ಅವರಿಗೆ ಉತ್ತಮವಾದ ದಿನವಾಗಿದ್ದು ಇಷ್ಟಾರ್ಥ ಸಿದ್ದಿಯಾಗಲಿದ್ದು ಗುಂಪು ಕೆಲಸದಿಂದ , ಮಿತ್ರರಿಂದ ಧನ ಆಗಮನವಾಗಲಿದೆ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಕಾರ್ಯ ಕ್ಷೇತ್ರದಲ್ಲಿ ಜವಾಬ್ದಾರಿ ಗಳು ಹೆಚ್ಚು ಆಗಿರುತ್ತವೆ. ಅದೇ ರೀತಿ ಎಲ್ಲದರಲ್ಲೂ ಯಶಸ್ಸು ಕೂಡ ಹೆಚ್ಚಾಗಿಯೇ ಇರುತ್ತದೆ.
ತುಲಾ ರಾಶಿ: ತುಲಾ ರಾಶಿಗೆ ಭಾಗ್ಯೋದಯವಾದ ದಿನವಾಗಿದ್ದು ಹಿಂದಿನ ಎರಡು ಮೂರು ದಿನಗಳ ತೊಂದರೆ ಎಲ್ಲವೂ ಬಗೆಹರಿಯುತ್ತದೆ. ಅತೀ ಖುಷಿಯಾಗಿ ದಿನವನ್ನು ಕಳೆಯಲಿದ್ದೀರಿ.
ವೃಶ್ಚಿಕ ರಾಶಿ: ವೃಶ್ಚಿಕ ರಾಶಿ ಅವರಿಗೆ ಮನಸ್ಸಿಗೆ ನೆಮ್ಮದಿ ಪ್ರಾಪ್ತಿ ಯಾದರೂ ಕೂಡ ಇವತ್ತು ಕ್ಲಿಷ್ಟಕರವಾದ ದಿನವಾಗುತ್ತದೆ. ಮುಖ್ಯವಾದ ಯಾವುದೇ ನಿರ್ಧಾರಗಳನ್ನು ಇಂದು ಕೈಗೊಳ್ಳಲು ಹೋಗಬೇಡಿ.
ಧನಸ್ಸು ರಾಶಿ: ಧನಸ್ಸು ರಾಶಿ ಅವರಿಗೆ ಅತ್ಯುತ್ತಮವಾದ ದಿನವಾಗಿದ್ದು ನೀವು ಎಣಿಸಲಾರದಷ್ಟು ಸಂತೋಷವನ್ನು ಇಂದು ಕಾಣುತ್ತೀರಿ.
ಮಕರ ರಾಶಿ: ಮಕರ ರಾಶಿಯವರಿಗೆ ಅತೀ ಉತ್ತಮವಾದ ದಿನವಾಗಿದ್ದು ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸಿಗುತ್ತದೆ. ಶತ್ರುಗಳು ಕೂಡ ನಿಮ್ಮನ್ನು ಹಿಮ್ಮೆಟ್ಟಬಹುದು.
ಕುಂಭರಾಶಿ: ಈ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಮಕ್ಕಳು ಮತ್ತು ಹಣಕಾಸಿನ ವಿಚಾರವಾಗಿ ನಿಮಗೆ ತೊಂದರೆ ಆಗಬಹುದು.
ಮೀನ ರಾಶಿ: ಮೀನ ರಾಶಿ ಅವರಿಗೆ ಕ್ಲಿಷ್ಟಕರವಾದ ದಿನವಾಗಿದೆ. ಯಾವುದೇ ಮುಖ್ಯ ನಿರ್ಧಾರಗಳು ಬೇಡ. ನಾಳೆ ಎಲ್ಲವೂ ಸರಿಯಾಗಲಿದ್ದು ಮುಂದಿನ ದಿನದಲ್ಲಿ ಯಶಸ್ಸು ಕಾಣುವಿರಿ.