ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Horoscope Today January 8th: ಇಂದು ಶುಕ್ರನ ಪ್ರಭಾವ; ಈ ರಾಶಿಯವರಿಗೆ ಖರ್ಚು ವೆಚ್ಚಗಳು ಜಾಸ್ತಿ

ನಿತ್ಯ ಭವಿಷ್ಯ ಜನವರಿ 8, 2026: ವಿಶ್ವವಸು ನಾಮ ಸಂವತ್ಸರದ ದಕ್ಷಿಣಾಯನ ಹಿಮದೃತು, ಪೌಸ ಮಾಸೆ, ಕೃಷ್ಣ ಪಕ್ಷ, ಪಂಚಮಿ ತಿಥಿ, ಪೂರ್ವ ಪಾಲ್ಗುಣಿ ನಕ್ಷತ್ರದ ಜನವರಿ 8ನೇ ತಾರೀಖಿನ ಈ ದಿನದ ಭವಿಷ್ಯ ಹೇಗಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಸಂಗ್ರಹ ಚಿತ್ರ

ಬೆಂಗಳೂರು, ಜ. 7: ವಿಶ್ವವಸು ನಾಮ ಸಂವತ್ಸರದ ದಕ್ಷಿಣಾಯನ ಹಿಮದೃತು, ಪೌಸ ಮಾಸೆ, ಕೃಷ್ಣ ಪಕ್ಷ, ಪಂಚಮಿ ತಿಥಿ, ಪೂರ್ವ ಪಾಲ್ಗುಣಿ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಗಳ ಭವಿಷ್ಯ ಹೇಗಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ತಿಳಿಸಿದ್ದಾರೆ.

ಮೇಷ ರಾಶಿ: ಇಂದು ಪೂರ್ವ ಪಾಲ್ಗುಣಿ ನಕ್ಷತ್ರ ಇದ್ದು ಇದರ ಅಧಿಪತಿ ಶುಕ್ರ. ಹೀಗಾಗಿ ಎಲ್ಲ ರಾಶಿಗೂ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಹಣಕಾಸಿನ ವಿಚಾರವಾಗಿ ಹಾಗೂ ಮಕ್ಕಳ ವಿಚಾರದಲ್ಲಿ ಸ್ವಲ್ಪ ಜಾಗೃತೆ ವಹಿಸಬೇಕಾಗುತ್ತದೆ. ಬಿಸಿನೆಸ್ ವ್ಯವಹಾರ ಮಾಡೋರಿಗೆ ಲಾಸ್ ಆಗುವ ಸಾಧ್ಯತೆ ಇದೆ.

ವೃಷಭ ರಾಶಿ: ಇಂದು ವೃಷಭ ರಾಶಿಯವರು ಆಸ್ತಿ ಪಾಸ್ತಿ ವಿಚಾರದತ್ತ ಹೆಚ್ಚಿನ ಗಮನ ನೀಡ ಬೇಕಾಗುತ್ತದೆ. ಮನೆಯ ಜವಾಬ್ದಾರಿ ಹೆಚ್ಚಿರುತ್ತದೆ. ಅದರ ಜತೆ ತಾಯಿಯ ಆರೋಗ್ಯದ ಚಿಂತೆ ಮೂಡುವ ಸಾಧ್ಯತೆ ಇದೆ.

ಮಿಥುನ ರಾಶಿ: ಮಿಥುನ ರಾಶಿಯಲ್ಲಿರುವವರಿಗೆ ಅತೀ ಉತ್ತಮದ ದಿನವಾಗಲಿದೆ. ಸೋಶಿಯಲ್ ಮೀಡಿಯಾ, ಬರವಣಿಗೆ, ಮಾರ್ಕೆಂಟಿಗ್ ವ್ಯವಹಾರ ಮಾಡುವವರಿಗೆ ಉತ್ತಮ ದಿನವಾಗಲಿದೆ. ಕಾರ್ಯಕ್ಷೇತ್ರದಲ್ಲಿ ಹೆಚ್ಚಿನ ಯಶಸ್ಸು ಸಿಗುತ್ತದೆ.

ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ತಿಳಿಸಿದ ದಿನ ಭವಿಷ್ಯ:



ಕಟಕ ರಾಶಿ: ಕಟಕ ರಾಶಿಯವರಿಗೆ ಮನೆಯಲ್ಲಿ ನೆಮ್ಮದಿ ಪ್ರಾಪ್ತಿಯಾಗುತ್ತದೆ. ಕುಟುಂಬದಲ್ಲಿ ಖುಷಿ ಕಾಣುವ ದಿನವಾಗುತ್ತದೆ. ಮನೆಯ ಸಮೃದ್ದಿಗಾಗಿ ಖರ್ಚು ವೆಚ್ಚಗಳು ಜಾಸ್ತಿಯಾಗಬಹುದು.

ತುಳಸಿ ಕಟ್ಟೆಯ ಬಳಿ ಈ ಗಿಡಗಳನ್ನು ನೆಡಿ; ಹಣದ ಸಮಸ್ಯೆ ನಿಮ್ಮ ಬಳಿ ಸುಳಿಯುವುದೂ ಇಲ್ಲ

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಮನಸ್ಸಿಗೆ ನೆಮ್ಮದಿಯ ದಿನವಾಗಿದ್ದು, ಹಿಂದಿನ ಎರಡು ಮೂರು ದಿನಗಳ ತೊಂದರೆ ಇಂದು ಬಗೆಹರಿಯಲಿದೆ.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಮನಸ್ಸಿಗೆ ಕ್ಷೇಷ ಉಂಟಾಗುವ ದಿನವಾಗುತ್ತದೆ. ಇಂದು ಮುಖ್ಯವಾದ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಇಂದು ಕಷ್ಟವಾಗುತ್ತದೆ. ನಿಮ್ಮ ಮಿತೃತ್ವದಲ್ಲಿ ಹಾಗೂ ಪಾರ್ಟನರ್‌ಶಿಪ್ನಲ್ಲಿ ಒಡಕು ಮೂಡಬಹುದು.

ತುಲಾ ರಾಶಿ: ತುಲಾ ರಾಶಿಯವರಿಗೆ ಅತೀ ಉತ್ತಮ ದಿನವಾಗಲಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಎಲ್ಲ ರೀತಿಯಿಂದಲೂ ನಿಮಗೆ ಬೇಕಾದಂತಹ ಫಲಗಳನ್ನು ನೀವು ನೋಡಬಹುದು.

ವೃಶ್ಚಿಕ ರಾಶಿ: ವೃಶ್ಚಿಕ ರಾಶಿಯವರಿಗೆ ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸಿಗಲಿದ್ದು ಜವಾಬ್ದಾರಿಗಳು ಕೂಡ ಹೆಚ್ಚಾಗುತ್ತವೆ. ಆದರೆ ನಿಮ್ಮ ಸಹೋದ್ಯೋಗಿಗಳ ಜತೆ ಕೆಲಸ ಮಾಡುವಾಗ ೆಚ್ಚರಿಕೆಯಿಂದ ಇರಬೇಕಾಗುತ್ತದೆ.

ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಮನಸ್ಸಿಗೆ ನೆಮ್ಮದಿ ದೊರೆಯಲಿದ್ದು, ಅದೃಷ್ಟದ ದಿನವಾಗಲಿದೆ. ಮುಖ್ಯವಾದ ವಿಚಾರವಾಗಿ ಮಾರ್ಗದರ್ಶನ ಪ್ರಾಪ್ತಿಯಾಗುತ್ತದೆ.

ಮಕರ ರಾಶಿ: ಮಕರ ರಾಶಿಯವರಿಗೆ ಸ್ವಲ್ಪ ಕಷ್ಟದ ದಿನವಾಗಲಿದೆ. ಮನಸ್ಸಿಗೆ ಅಷ್ಟೊಂದು ನೆಮ್ಮದಿ ಇರುವುದಿಲ್ಲ. ಹಾಗಾಗಿ ಯಾವುದೇ ಮುಖ್ಯ ನಿರ್ಧಾರ ಕೈಗೊಳ್ಳುವುದು ಬೇಡ. ಆರೋಗ್ಯ ಬಗ್ಗೆ ಹೆಚ್ಚಿನ ಗಮನ ನೀಡಬೇಕಾಗುತ್ತದೆ.

ಕುಂಭರಾಶಿ: ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಸೌಹಾರ್ದ ಪ್ರಾಪ್ತಿಯಾಗಲಿದ್ದು ಎಲ್ಲ ರೀತಿಯಿಂದಲೂ ಒಳಿತಾಗಲಿದೆ.

ಮೀನ ರಾಶಿ: ಮೀನ ರಾಶಿಯವರಿಗೆ ಸಾಮಾಜಿಕ ಚಟುವಟಿಕೆಗಳಲ್ಲಿ ಯಶಸ್ಸು ಸಿಗಲಿದ್ದು ಆರೋಗ್ಯದಲ್ಲಿ ಸುಧಾರಣೆ ಕಂಡು ಬರಲಿದ್ದು, ಶತ್ರುಗಳು ಹಿಮ್ಮೆಟ್ಟಬಹುದು. ಕೆಲಸ ಕಾರ್ಯದಲ್ಲಿ ಯಶಸ್ಸು ಕಾಣುತ್ತೀರಿ.