ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದಿನ ಭವಿಷ್ಯ, ಜೂನ್ 1, 2026: ಇಂದು ಧನಾಗಮನದ ಜತೆ ನನಸಾಗಲಿದೆ ಬಹು ದಿನಗಳ ಕನಸು

Horoscope Today June 1st: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷ, ಪ್ರತಿಭಾ ತಿಥಿ, ಜೇಷ್ಠ ನಕ್ಷತ್ರ, ಜೂನ್ 1ನೇ ತಾರೀಕಿನ ಈ ದಿನದ ಭವಿಷ್ಯ ಹೇಗಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಇಂಟರ್‌ನೆಟ್‌ ಚಿತ್ರ

ಬೆಂಗಳೂರು, ಜೂ. 1: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷ, ಪ್ರತಿಭಾ ತಿಥಿ, ಜೇಷ್ಠ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿಗಳ ಭವಿಷ್ಯ ಹೇಗಿರಲಿದೆ ಎನ್ನುವ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಮೇಷ ರಾಶಿ: ಜೇಷ್ಠ ನಕ್ಷತ್ರದ ಅಧಿಪತಿ ಬುಧ ಆಗಿರುವುದರಿಂದ ಹೆಚ್ಚಿನವರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ಮುಖ್ಯವಾದ ಯಾವುದೇ ನಿರ್ಧಾರಗಳನ್ನು ಇಂದು ತೆಗೆದುಕೊಳ್ಳಲು ಹೋಗಬೇಡಿ. ಪ್ರೀತಿ ಪಾತ್ರರು ಹಾಗೂ ಸಹೋದ್ಯೋಗಿಗಳಿಂದ ಯಾವುದೇ ರೀತಿಯ ಸಹಕಾರ ಪ್ರಾಪ್ತಿಯಾಗುವುದಿಲ್ಲ.

ವೃಷಭ ರಾಶಿ: ಈ ರಾಶಿಯವರಿಗೆ ಇಂದು ಅತ್ಯುತ್ತಮ ದಿನವಾಗಲಿದೆ. ಕಾರ್ಯಕ್ಷೇತ್ರದಲ್ಲಿ ದೊಡ್ಡದಾದ ಯಶಸ್ಸು ಪ್ರಾಪ್ತಿಯಾಗುತ್ತದೆ. ಅದೇ ರೀತಿ ಎಲ್ಲದರಲ್ಲೂ ಇಂದು ಜಯವನ್ನು ಸಾಧಿಸುತ್ತೀರಿ‌. ಬೇರೆಯವರ ಸಹಕಾರ ಕೂಡ ದೊರೆಯುತ್ತದೆ.

ಮಿಥುನ ರಾಶಿ: ಈ ರಾಶಿಯವರ ಶತ್ರು ನಾಶ ಹಾಗೂ ಶತ್ರು ಧ್ವಂಸವಾಗಲಿದ್ದು, ಆರೋಗ್ಯದಲ್ಲಿ ಸುಧಾರಣೆ ಕಂಡು ಬರುತ್ತದೆ. ಸಾಮಾಜಿಕ ಜೀವನದಲ್ಲಿ ಇಂದು ಯಶಸ್ಸು ಕಾಣುತ್ತೀರಿ.

ಕಟಕ ರಾಶಿ: ಕಟಕ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ವ್ಯವಹಾರದಲ್ಲಿ ನಷ್ಟ ಉಂಟಾಗುವ ಸಾಧ್ಯತೆ ಇದೆ. ಮಕ್ಕಳ ವಿಚಾರದಲ್ಲಿ ಪೋಷಕರು ಎಚ್ಚರ ವಹಿಸಬೇಕಾಗುತ್ತದೆ.

ಸಿಂಹ ರಾಶಿ: ಸಿಂಹ ರಾಶಿಯವರು ತಾಯಿಯ ಆರೋಗ್ಯ ಬಗ್ಗೆ ಎಚ್ಚರಿಕೆ ವಹಿಸಬೇಕಾಗುತ್ತದೆ. ಅದೇ ರೀತಿ ಸಂಸಾರದ ಜವಾಬ್ದಾರಿಗಳು ಕೂಡ ಜಾಸ್ತಿಯಾಗಬಹುದು. ಕೋರ್ಟ್, ಕಚೇರಿ ವ್ಯವಹಾರದಲ್ಲಿ ಜಾಗೃತೆ ವಹಿಸಿ.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಇಂದು ಅತ್ಯುತ್ತಮ ದಿನವಾಗಲಿದೆ. ಸೋಷಿಯಲ್ ಮೀಡಿಯಾ ಹಾಗೂ ಮಾಧ್ಯಮದಲ್ಲಿ ಕೆಲಸ ಮಾಡೋರಿಗೆ ಲಾಭದಾಯಕವಾಗಿದೆ. ಅದೃಷ್ಟ ಹೆಚ್ಚಾಗಿ ಅವಕಾಶ ಒಲಿದು ಬರುತ್ತದೆ.

ರಾತ್ರಿ ಈ ತಪ್ಪುಗಳನ್ನು ಮಾಡ್ತೀರಾ? ಲಕ್ಷ್ಮೀ ದೇವಿ ಮನೆ ಬಿಟ್ಟು ಹೋಗಬಹುದು ಎಚ್ಚರ!

ತುಲಾ ರಾಶಿ: ತುಲಾ ರಾಶಿಯವರಿಗೆ ಸ್ವಲ್ಪ ಕಷ್ಟದ ದಿನವಾಗಲಿದೆ. ಮನೆಯವರ ಹಾಗೂ ಸಂಸಾರದ ಬಗ್ಗೆ ಹೆಚ್ಚು ಗಮನ ನೀಡಬೇಕಾಗುತ್ತದೆ. ತಂದೆ- ತಾಯಿ ಹಾಗೂ ಕುಟುಂಬದ ಜತೆ ಇಂದು ಉತ್ತಮ ಸಮಯ ಕಳೆಯಲಿದ್ದೀರಿ.

ವೃಶ್ಚಿಕ ರಾಶಿ: ಈ ರಾಶಿಯವರ ರಾಶಿಗೆ ಚಂದ್ರ ಬಂದಿರುವುದರಿಂದ ಉತ್ತಮ ದಿನವಾಗಲಿದೆ. ಒಂದು ತಿಂಗಳ ಹಿಂದೆ ಅಂದುಕೊಂಡ ಕೆಲಸ ಕಾರ್ಯಗಳೆಲ್ಲವೂ ಇಂದು ನೆರವೇರುತ್ತವೆ.

ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಮುಖ್ಯವಾದ ಯಾವುದೇ ನಿರ್ಧಾರ ಬೇಡ. ಯಾವುದೇ ವ್ಯವಹಾರಕ್ಕೆ ಇಂದು ಕೈ ಹಾಕುವುದು ಒಳಿತಲ್ಲ.

ಮಕರ ರಾಶಿ: ಮಕರ ರಾಶಿಯವರಿಗೆ ಅತ್ಯುತ್ತಮ ದಿನವಾಗಲಿದೆ. ‌ಇಷ್ಟಾರ್ಥ ಸಿದ್ದಿಯಾಗಲಿದ್ದು ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಮಿತ್ರರಿಂದ ಧನಾಗಮನ ಕೂಡ ಇಂದು ಆಗುತ್ತದೆ.

ಕುಂಭ ರಾಶಿ: ಈ ರಾಶಿಯವರಿಗೆ ಅತೀ ಲಾಭದಾಯಕ ದಿನವಾಗಲಿದೆ. ಕಾರ್ಯಕ್ಷೇತ್ರದಲ್ಲಿ ಅತೀ ಹೆಚ್ಚು ಲಾಭ ಸಿಗುವಂತಾಗುತ್ತದೆ. ಹಿಂದಿನ ದಿನದಲ್ಲಿ ಇದ್ದ ನೋವು ಪರಿಹಾರವಾಗಲಿದೆ.

ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಹಿಂದಿನ ದಿನದಲ್ಲಿ ಇದ್ದ ನೋವೆಲ್ಲ ಮಾಯವಾಗುತ್ತದೆ.‌ ಹಿರಿಯರ ಹಾಗೂ ದೇವರ ಆಶೀರ್ವಾದದಿಂದ ಇಂದು ಅಂದುಕೊಂಡ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿದೆ.