ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದಿನ ಭವಿಷ್ಯ, ಜೂನ್ 4, 2026: ಇಂದು ಹಣಕಾಸಿನ ಖರ್ಚು-ವೆಚ್ಚ ಜಾಸ್ತಿಯಾಗಲಿದೆ

Horoscope Today June 4th: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ, ಚತುರ್ಥಿ ತಿಥಿ, ಉತ್ತರಾಷಾಡ ನಕ್ಷತ್ರದ ಜೂನ್ 4ನೇ ತಾರೀಕಿನ ಈ ದಿನದ ಭವಿಷ್ಯದ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಇಂಟರ್‌ನೆಟ್ ಚಿತ್ರ

ಬೆಂಗಳೂರು: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ, ಚತುರ್ಥಿ ತಿಥಿ, ಉತ್ತರಾಷಾಡ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿಗಳ ಭವಿಷ್ಯ ಹೇಗಿರಲಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಮೇಷ ರಾಶಿ: ಉತ್ತರಾಷಾಢ ನಕ್ಷತ್ರದ ಅಧಿಪತಿ ರವಿ. ಹೀಗಾಗಿ ಹೆಚ್ಚಿನವರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಕಾರ್ಯಕ್ಷೇತ್ರದಲ್ಲಿ ಅತೀ ಹೆಚ್ಚಿನ ಯಶಸ್ಸು ನಿಮಗೆ ಸಿಗುತ್ತದೆ. ಎಲ್ಲ ಕೆಲಸ ಕಾರ್ಯದಲ್ಲೂ ಅತೀ ಹೆಚ್ಚಿನ ನೆಮ್ಮದಿ ನಿಮ್ಮದಾಗಲಿದೆ.

ವೃಷಭ ರಾಶಿ: ಈ ರಾಶಿಯವರ ವಿನಯತೆಯೇ ಕೈ ಹಿಡಿಯಲಿದೆ. ಹಿರಿಯರ ಜತೆ ಇಂದು ನೀವು ವಿನಯಪೂರ್ವಕವಾಗಿ ನಡೆದುಕೊಳ್ಳುತ್ತೀರಿ‌.

ಮಿಥುನ ರಾಶಿ: ಈ ರಾಶಿಯವರಿಗೆ ಇಂದು ಸ್ವಲ್ಪ ಕಷ್ಟದ ದಿನವಾಗಲಿದೆ. ಮುಖ್ಯವಾದ ನಿರ್ಧಾರ ಬೇಡ. ಯಾರ ಸಹಕಾರ ಕೂಡ ನಿಮಗೆ ಪ್ರಾಪ್ತಿಯಾಗುವುದಿಲ್ಲ. ಹೀಗಾಗಿ ಮನಸ್ಸಿಗೆ ಬಹಳನೇ ಬೇಸರವಾಗುವ ದಿನ ನಿಮ್ಮದಾಗುತ್ತದೆ.

ಕಟಕ ರಾಶಿ: ಕಟಕ ರಾಶಿಯವರಿಗೆ ಈ ದಿನ ಉತ್ತಮವಾಗಲಿದೆ. ಎಲ್ಲ ರೀತಿಯಿಂದಲೂ ನೀವು ಸಹಕಾರವನ್ನು ಪಡೆಯಬಹುದು‌. ಇಂದು ಅಂದುಕೊಂಡದ್ದೆಲ್ಲವೂ ನೆರವೇರಬಹುದು. ದಾಂಪತ್ಯದಲ್ಲಿ ನೆಮ್ಮದಿ ಹಾಗೂ ವ್ಯವಹಾರಲ್ಲಿ ಯಶಸ್ಸು ಸಿಗಲಿದೆ.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ನೆಮ್ಮದಿ ತರುವ ದಿನವಾಗಲಿದೆ. ಸಾಮಾಜಿಕ ಚಟುವಟಿಕೆಯಲ್ಲಿ ಜಯ ಸಿಗಲಿದ್ದು, ಶತ್ರುಗಳು ಹಿಮ್ಮೆಟ್ಟಬಹುದು. ಅದೇ ರೀತಿ ಆರೋಗ್ಯದಲ್ಲೂ ಸುಧಾರಣೆ ಕಂಡು ಬರಲಿದೆ.

ದಿಂಬಿಗೆ ತಲೆ ಇಟ್ಟ ತಕ್ಷಣ ಸುಖ ನಿದ್ರೆ ನಿಮ್ಮದಾಗಬೇಕೇ? ಈ ಸಿಂಪಲ್ ಟಿಪ್ಸ್ ಅನುಸರಿಸಿ

ಕನ್ಯಾ ರಾಶಿ: ಕನ್ಯಾ ರಾಶಿಯವರು ವ್ಯವಹಾರದ ಕಡೆ ಹೆಚ್ಚಿನ ಗಮನವನ್ನು ನೀಡಬೇಕಾಗುತ್ತದೆ. ಹಣ ಕೈ ತಪ್ಪಿ ಹೋಗುವ ಸಾಧ್ಯತೆ ಹೆಚ್ಚು.

ತುಲಾ ರಾಶಿ: ತುಲಾ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಆಸ್ತಿ-ಪಾಸ್ತಿ ವಿಚಾರದಲ್ಲಿ ನಿಮಗೆ ತೊಂದರೆಯಾಗುವ ಸಾಧ್ಯತೆ ಇದೆ. ತಾಯಿಯ ಆರೋಗ್ಯ ಬಗ್ಗೆ ಗಮನ ನೀಡಬೇಕಾಗುತ್ತದೆ.

ವೃಶ್ಚಿಕ ರಾಶಿ: ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇದ್ದು ಎಲ್ಲ ಕೆಲಸದಲ್ಲೂ ಜಯ ಸಿಗಲಿದೆ. ಮಾಧ್ಯಮ, ಸೋಷಿಯಲ್ ಮೀಡಿಯಾದಲ್ಲಿಇರೋರಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ.

ಧನಸ್ಸು ರಾಶಿ: ಧನಸ್ಸು ರಾಶಿಯವಿಗೆ ಕುಟುಂಬದ ಜವಾಬ್ದಾರಿ ಜಾಸ್ತಿ ಇರುತ್ತವೆ. ಮನೆಯವರ ಜತೆ ಹೆಚ್ಚಿನ ಸಮಯವನ್ನು ನೀವು ಕಳೆಯಬೇಕಾಗುತ್ತದೆ.

ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಸಿಗಲಿದ್ದು, ಹಿಂದಿನ ಎರಡು ಮೂರು ದಿನದಲ್ಲಿ ಇದ್ದ ಬೇಸರ ಎಲ್ಲವೂ ಮಾಯವಾಗಲಿದೆ.

ಕುಂಭ ರಾಶಿ: ಈ ರಾಶಿಯವರಿಗೆ ಸ್ವಲ್ಪ ಕಷ್ಟದ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ನಿಮ್ಮ ಅಭಿಮಾನಕ್ಕೆ ಧಕ್ಕೆ ತರುವ ದಿನವಾಗಲಿದೆ.

ಮೀನ ರಾಶಿ: ಮೀನ ರಾಶಿಯವರಿಗೆ ಮಧ್ಯಾಹ್ನವರೆಗೂ ಕಾರ್ಯ ಕ್ಷೇತ್ರದಲ್ಲಿ ಯಶಸ್ಸು ದೊರೆಯಲಿದೆ. ಇಷ್ಟಾರ್ಥ ಸಿದ್ಧಿಯಾಗಲಿದ್ದು, ಮನಸ್ಸಿಗೆ ನೆಮ್ಮದಿ, ಖುಷಿ ಸಿಗಲಿದೆ.