ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಿನ ಭವಿಷ್ಯ, ಮೇ 14, 2026: ಈ ರಾಶಿಯವರಿಗೆ ಇಂದು ಹಣದ ಹರಿವು ಹೆಚ್ಚಾಗಲಿದೆ!

Horoscope Today May 14th: ಇಂದು ಪರಾಭವ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣಪಕ್ಷದ, ತ್ರಯೋದಶೊ ತಿಥಿ, ರೇವತಿ ನಕ್ಷತ್ರದ ಮೇ 14 ನೇ ತಾರೀಖಿನ ಗುರುವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಹೀಗಿದೆ..

ಈ ರಾಶಿಯವರಿಗೆ ಇಂದು ಅದೃಷ್ಟ ಒಲಿಯಲಿದೆ!

ಇಂಟರ್ ನೆಟ್ ಚಿತ್ರ -

Profile
Pushpa Kumari May 14, 2026 6:00 AM

ಬೆಂಗಳೂರು: ಇಂದು ಪರಾಭವ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ತ್ರಯೋದಶಿ ತಿಥಿ, ರೇವತಿ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಇಲ್ಲಿದೆ.

ಮೇಷ ರಾಶಿ: ಇಂದು ವೃಷಭ ರಾಶಿಗೆ ಬುಧ ಪ್ರವೇಶ ಮಾಡುತ್ತಿದ್ದಾನೆ. ಮೇಷ ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇದ್ದು ಹಣದ ಹರಿವು ಹೆಚ್ಚಾಗಲಿದೆ.

ವೃಷಭ ರಾಶಿ: ಈ ರಾಶಿಗೆ ಇಂದು ಭಾಗ್ಯೋದಯವಾದ ದಿನವಾಗಿದೆ. ಮನೆಯಲ್ಲಿ ನೆಮ್ಮದಿ ಇದ್ದು ಧನ ಲಾಭದ ಸೂಚನೆಗಳು ಇರುತ್ತವೆ. ಕೆಲಸ ಕಾರ್ಯದಲ್ಲೂ ಯಶಸ್ಸು ಕಾಣುತ್ತೀರಿ.

ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರಿಗೆ ಉತ್ತಮ ವಾದ ದಿನವಾಗಿದೆ. ಶತ್ರುಗಳನ್ನು ಹಿಮ್ಮೆಟ್ಟಬಹುದು. ಅನೇಕ ರೀತಿಯಲ್ಲಿ ಎಲ್ಲದರಲ್ಲೂ ಜಯವನ್ನು ಕಾಣುತ್ತೀರಿ.

ಕಟಕ ರಾಶಿ: ಕಟಕ ರಾಶಿ ಅವರಿಗೆ ಇಂದು ಕಷ್ಟಕರವಾದ ದಿನವಾಗಿದೆ. ಮಿತ್ರತ್ವದಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಹಣಕಾಸಿನ ವಿಚಾರದಲ್ಲಿ ಕೂಡ ತೊಂದರೆ ಆಗಬಹುದು.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಇಷ್ಟಾರ್ಥ ಸಿದ್ದಿಯಾಗಲಿದ್ದು ಧನ ಆಗಮನದ ಸೂಚನೆಗಳು ಇವೆ. ಎಲ್ಲ ಕೆಲಸ ಕಾರ್ಯದಲ್ಲಿ ಜಯ ಕಾಣುತ್ತೀರಿ.

Vastu Tips: Vastu Tips: ಈ ವಾಸ್ತು ನಿಯಮಗಳನ್ನು ಪಾಲಿಸಿದ್ರೆ ಮನೆಯಲ್ಲಿ ಅತ್ತೆ-ಸೊಸೆ ಜಗಳವೇ ಇರೊಲ್ಲ!

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಇಂದು ಕಷ್ಟಕರವಾದ ದಿನವಾಗಿದೆ. ಎಲ್ಲ ಕೆಲಸ ಕಾರ್ಯದಲ್ಲಿ ತೊಂದರೆ ಆಗಬಹುದು.‌ ಹೆಂಗಸರ ಜೊತೆ ಜಾಗೃತಿ ವಹಿಸಿ.

ತುಲಾ ರಾಶಿ: ತುಲಾ ಅವರಿಗೆ ಉತ್ತಮವಾದ ದಿನವಾಗಿದೆ. ‌ಶತ್ರುಗಳನ್ನು ನೀವಿಂದು ಹಿಮ್ಮೆಟ್ಟಬಹುದು. ಆದರೆ ವ್ಯಕ್ತಿತ್ವದಲ್ಲಿ ಟೀಕೆಗಳು ಕೇಳಿ ಬರಬಹುದು.

ವೃಶ್ಚಿಕ ರಾಶಿ: ಈ ರಾಶಿಗೆ ಉತ್ತಮವಾದ ದಿನವಾಗಿದೆ. ಹಿಂದಿನ‌ ದಿನದಲ್ಲಿ ಇದ್ದ ಸಮಸ್ಯೆ ನಿವಾರಣೆಯಾಗುತ್ತದೆ. ಕೆಲಸ ಕಾರ್ಯದಲ್ಲಿ ಕೂಡ ಯಶಸ್ಸು ಸಿಗುತ್ತದೆ.

ಧನಸ್ಸು ರಾಶಿ: ಧನಸ್ಸು ರಾಶಿಗೆ ಇಂದು ಕಷ್ಟಕರವಾದ ದಿನ ವಾಗಿದೆ. ಯಾವುದೇ ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗುವುದಿಲ್ಲ. ಬಿಸೆನೆಸ್ ವ್ಯವಹಾರದಲ್ಲಿ ತೊಂದರೆ ಉಂಟಾಗಬಹುದು.

ಮಕರ ರಾಶಿ: ಮಕರ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಮನೆಯಲ್ಲಿ ನೆಮ್ಮದಿ ಇಲ್ಲದೆ ಇರಬಹುದು. ಹೆಂಗಸರಿಂದ ತೊಂದರೆ ಎದುರಾಗಬಹುದು.

ಕುಂಭರಾಶಿ: ಈ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಿದೆ.‌ ಧನ ಆಗಮನದ ಸೂಚನೆಗಳು ಇದ್ದು ಮಕ್ಕಳಿಂದ ಒಳಿತು ಆಗುತ್ತದೆ.

ಮೀನ ರಾಶಿ: ಮೀನ ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಹಿಂದಿನ ಎರಡು ಮೂರು ದಿನದಲ್ಲಿ ಇದ್ದ ತೊಂದರೆ ಮಯವಾಗುತ್ತದೆ. ಕೋರ್ಟ್ ಕಛೇರಿ ವ್ಯವಹಾರದಲ್ಲಿ ಯಶಸ್ಸು ಸಿಗುತ್ತದೆ.