ದಿನ ಭವಿಷ್ಯ, ಮಾರ್ಚ್ 4, 2026: ರವಿಯ ಪ್ರಭಾವದಿಂದ ಇಂದು ಧನಾಗಮನ
Horoscope Today March 4: ವಿಶ್ವಾವಸು ನಾಮ ಸಂವತ್ಸರದ, ಉತ್ತರಾಯಣ, ಶರದೃತು ಫಾಲ್ಗುಣ ಮಾಸೆ, ಕೃಷ್ಣೆ ಪಕ್ಷದ, ದ್ವೀತಿಯ ತಿಥಿ, ಉತ್ತರ ಫಾಲ್ಗುಣ ನಕ್ಷತ್ರದ ಮಾರ್ಚ್ 4ನೇ ತಾರೀಖಿನ ಈ ದಿನದ ಭವಿಷ್ಯದ ಹೇಗಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.
ಇಂಟರ್‌ನೆಟ್ ಚಿತ್ರ -
ಬೆಂಗಳೂರು, ಮಾ. 4: ಇಂದು ವಿಶ್ವಾವಸು ನಾಮ ಸಂವತ್ಸರದ, ಉತ್ತರಾಯಣ ಶರದೃತು, ಫಾಲ್ಗುಣ ಮಾಸೆ, ಉತ್ತರ ಫಾಲ್ಗುಣ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಗಳ ಭವಿಷ್ಯ ಹೇಗಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ತಿಳಿಸಿದ್ದಾರೆ.
ಮೇಷ ರಾಶಿ: ಇಂದು ಉತ್ತರ ಫಾಲ್ಗುಣ ನಕ್ಷತ್ರ ಇದ್ದು ಇದರ ಅಧಿಪತಿ ರವಿ. ಹೀಗಾಗಿ ಹೆಚ್ಚಿನವರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಆದರೆ ಹಣಕಾಸಿನ ಬಗ್ಗೆ ಅಡೆತಡೆಗಳು ಬರಬಹುದು.
ವೃಷಭ ರಾಶಿ: ಇಂದು ವೃಷಭ ರಾಶಿಯವರಿಗೆ ಮಧ್ಯಾಹ್ನವರೆಗೂ ಮನೆಯ ತೊಂದರೆ ಜಾಸ್ತಿಯಾಗಬಹುದು. ಮಧ್ಯಾಹ್ನ ಬಳಿಕ ಕಾರ್ಯಕ್ಷೇತ್ರದಲ್ಲಿ ನೀವು ಬುದ್ದಿವಂತಿಕೆಯನ್ನು ಬಳಸಿ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಬೇಕಾಗುತ್ತದೆ.
ಮಿಥುನ ರಾಶಿ: ಮಿಥುನ ರಾಶಿಯಲ್ಲಿರುವವರಿಗೆ ಮಧ್ಯಾಹ್ನವರೆಗೂ ಉತ್ತಮ ಲಕ್ಷಣ ಗೋಚರವಾಗುತ್ತದೆ. ಮಧ್ಯಾಹ್ನ ಬಳಿಕ ನಿಮ್ಮ ಪ್ರೀತಿ ಪಾತ್ರರಿಂದ ಸಹಕಾರ ಸಿಗುವುದಿಲ್ಲ.
ಕಟಕ ರಾಶಿ: ಕಟಕ ರಾಶಿಯವರು ಮಧ್ಯಾಹ್ನವರೆಗೂ ಸಂಸಾರದ ತಾಪತ್ರಯ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಮಧ್ಯಾಹ್ನ ಬಳಿಕ ನಿಮ್ಮ ಬಂಧು- ಬಳಗದ ಜೊತೆ ಖುಷಿಯಿಂದ ಸಮಯ ಕಳೆಯಬಹುದು.
ದೇವರ ಕೋಣೆಯಲ್ಲಿ ಪೂಜಾ ತಟ್ಟೆ ಹೀಗೆ ಇಡಿ; ವಾಸ್ತು ಸೂಚಿಸುವ ನಿಯಮಗಳು ಇವು
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಅತ್ಯುತ್ತಮ ದಿನವಾಗಲಿದೆ. ಮಧ್ಯಾಹ್ನ ಬಳಿಕ ನಿಮ್ಮ ಕುಟುಂಬದ ಜತೆ ಸಮಯ ಕಳೆಯುತ್ತೀರಿ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಮಧ್ಯಾಹ್ನವರೆಗೂ ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಆದರೆ ಮಧ್ಯಾಹ್ನ ಬಳಿಕ ನಿಮ್ಮ ಮುಂದಿನ ಕೆಲಸ ಕಾರ್ಯಗಳಿಗೆ ಉತ್ತಮ ಮಾರ್ಗದರ್ಶನ ಸಿಗಬಹುದು.
ತುಲಾ ರಾಶಿ: ತುಲಾ ರಾಶಿಯವರಿಗೆ ಮಧ್ಯಾಹ್ನವರೆಗೆ ಇಷ್ಟಾರ್ಥ ಸಿದ್ಧಿಯಾಗಲಿದೆ. ಆದರೆ ಮಧ್ಯಾಹ್ನ ಬಳಿಕ ಸ್ನೇಹಿತರ ಜತೆ ಕಲಹ ಉಂಟಾಗುವ ಸಾಧ್ಯತೆ ಇದೆ.
ವೃಶ್ಚಿಕ ರಾಶಿ: ವೃಶ್ಚಿಕ ರಾಶಿಯವರಿಗೆ ಮಧ್ಯಾಹ್ನವರೆಗೂ ಕಾರ್ಯಕ್ಷೇತ್ರದಲ್ಲಿ ಜವಾಬ್ದಾರಿ ಜಾಸ್ತಿಯಾಗಬಹುದು. ಮಧ್ಯಾಹ್ನ ಬಳಿಕ ಮನಸ್ಸಿಗೆ ನೆಮ್ಮದಿ ಇದ್ದು ಇಷ್ಟಾರ್ಥ ಸಿದ್ದಿಯಾಗಲಿದೆ.
ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಮಧ್ಯಾಹ್ನವರೆಗೂ ನಾನಾ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಮಧ್ಯಾಹ್ನ ಬಳಿಕ ಕಾರ್ಯ ಕ್ಷೇತ್ರದಲ್ಲಿ ಜಯ ಕಾಣುತ್ತೀರಿ.
ಮಕರ ರಾಶಿ: ಮಕರ ರಾಶಿಯವರಿಗೆ ಮಧ್ಯಾಹ್ನವರೆಗೂ ನಾನಾ ಕಷ್ಟ- ತೊಂದರೆಗಳು ಕಾಡಬಹುದು. ಮಧ್ಯಾಹ್ನ ಬಳಿಕ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಕುಂಭರಾಶಿ: ಈ ರಾಶಿಯವರಿಗೆ ಮಧ್ಯಾಹ್ನವರೆಗೆ ಅತ್ಯುತ್ತಮ ದಿನವಾಗಲಿದೆ. ಮಧ್ಯಾಹ್ನ ಬಳಿಕ ಮುಖ್ಯ ಸಂಬಂಧದಲ್ಲಿ ಒಡಕು ಮೂಡಬಹುದು.
ಮೀನ ರಾಶಿ: ಈ ರಾಶಿಯವರಿಗೆ ಮಧ್ಯಾಹ್ನವರೆಗೆ ಉತ್ತಮ ದಿನವಾಗಿದ್ದು, ಸಾಮಾಜಿಕ ಚಟುವಟಿಕೆಯಲ್ಲಿ ಬ್ಯುಸಿ ಇರುತ್ತೀರಿ. ಮಧ್ಯಾಹ್ನ ಬಳಿಕ ಮನೆಯವರ ಜತೆ ಸಮಯ ಕಳೆಯುತ್ತೀರಿ.