ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದಿನ ಭವಿಷ್ಯ, ಮಾರ್ಚ್ 24, 2026: ಚಂದ್ರನ ಪ್ರಭಾವದಿಂದ ಇಂದು ಮುಟ್ಟಿದ್ದೆಲ್ಲ ಚಿನ್ನ!

Horoscope Today March 24: ಪರಾಭವ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷದ, ಷಷ್ಠಿ ತಿಥಿ, ರೋಹಿಣಿ ನಕ್ಷತ್ರದ ಮಾರ್ಚ್ 24ನೇ ತಾರೀಖಿನ ಈ ದಿನದ ಭವಿಷ್ಯ ಹೇಗಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಈ  ರಾಶಿಯವರಿಗೆ ಆರ್ಥಿಕವಾಗಿ ಇಂದು ಯಶಸ್ಸು

ಇಂಟರ್‌ನೆಟ್ ಚಿತ್ರ -

Profile
Pushpa Kumari Mar 24, 2026 6:00 AM

ಬೆಂಗಳೂರು, ಮಾ. 24: ಪರಾಭವ ನಾಮ ಸಂವತ್ಸರದ ಉತ್ತರಾಯಣ, ವಸಂತ ಋತು ಚೈತ್ರ ಮಾಸ, ರೋಹಿಣಿ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ತಿಳಿಸಿದಂತೆ ನಿಮ್ಮ ಭವಿಷ್ಯ ಹೇಗಿದೆ ಎಂಬುದನ್ನು ವಿವರಿಸಿದ್ದಾರೆ.

ಮೇಷ ರಾಶಿ: ರೋಹಿಣಿ ನಕ್ಷತ್ರದ ಅಧಿಪತಿ ಚಂದ್ರ. ಹಾಗಾಗಿ ಹೆಚ್ಚಿನ ಜನರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಯವರಿಗೆ ಸಂಸಾರದ ವಿಚಾರದಲ್ಲಿ ಸಂತೋಷ ಪ್ರಾಪ್ತಿಯಾಗುತ್ತದೆ. ಧನ ಆಗಮನವಾಗಲಿದ್ದು, ಆರ್ಥಿಕವಾಗಿ ಅಭಿವೃದ್ಧಿ ಕಾಣುತ್ತೀರಿ.

ವೃಷಭ ರಾಶಿ: ಇಂದು ವೃಷಭ ರಾಶಿಯವರಿಗೂ ನಿಮ್ಮ ರಾಶಿಯಲ್ಲಿ ಚಂದ್ರ ಇರುವುದರಿಂದ ಹೆಚ್ಚಿನ ನೆಮ್ಮದಿ ಇರುತ್ತದೆ. ಶತ್ರುಗಳನ್ನು ಕೂಡ ಹಿಮ್ಮೆಟ್ಟಿಸಬಹುದು.

ಮಿಥುನ ರಾಶಿ: ಮಿಥುನ ರಾಶಿಯಲ್ಲಿರುವವರಿಗೆ ಅತೀ ಭಾವುಕತೆಯಿಂದ ಇರುವ ದಿನವಾಗಲಿದೆ. ನಿಮ್ಮ ಪ್ರೀತಿ ಪಾತ್ರರ ಜತೆ ಮನಸ್ತಾಪ ಇಂದು ಕಾಡಬಹುದು. ಎರಡು ದಿನಗಳ ನಂತರ ಎಲ್ಲವೂ ಸರಿಯಾಗುತ್ತದೆ.

ಕಟಕ ರಾಶಿ: ಕಟಕ ರಾಶಿ ಅವರಿಗೆ ಅದೃಷ್ಟದ ದಿನವಾಗಲಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು ಕೆಲಸ ಕಾರ್ಯದಲ್ಲಿ ಜಯವನ್ನು ಕಾಣುತ್ತೀರಿ.

ಈ ವಾಸ್ತು ನಿಯಮಗಳನ್ನು ಪಾಲಿಸಿದ್ರೆ ಮನೆಯಲ್ಲಿ ಅತ್ತೆ-ಸೊಸೆ ಜಗಳವೇ ಇರೊಲ್ಲ!

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಕಾರ್ಯಕ್ಷೇತ್ರದಲ್ಲಿ ಭಾವುಕತೆ ಉಂಟಾಗುವ ಸಾಧ್ಯತೆ ಇದೆ. ಹಾಗಾಗಿ ಹೆಚ್ಚಿನ ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕಾಗುತ್ತದೆ.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ‌ಸಿಗಲಿದ್ದು, ಅದೃಷ್ಟದ ದಿನ ನಿಮ್ಮದಾಗುತ್ತದೆ.

ತುಲಾ ರಾಶಿ: ತುಲಾ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಮುಖ್ಯವಾದ ಯಾವುದೇ ನಿರ್ಧಾರಗಳು ಬೇಡ. ಯಾರ ಸಹಕಾರ ಕೂಡ ನಿಮಗೆ ಸಿಗುವುದಿಲ್ಲ.

ವೃಶ್ಚಿಕ ರಾಶಿ: ವೃಶ್ಚಿಕ ರಾಶಿಯವರಿಗೆ ಉತ್ತಮ ದಿನವಾಗಲಿದೆ. ದಾಂಪತ್ಯದಲ್ಲೂ ಹೆಚ್ಚಿನ ನೆಮ್ಮದಿ ಸಿಗುತ್ತದೆ. ಕಾರ್ಯಕ್ಷೇತ್ರದಲ್ಲೂ ಯಶಸ್ಸು ಸಿಗುತ್ತದೆ.

ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಅತ್ಯುತ್ತಮ ದಿನವಾಗಲಿದೆ. ಶತ್ರುಗಳು ಹಿಮ್ಮೆಟ್ಟಬಹುದು. ಯಾರಿಂದಲೂ ತೊಂದರೆ ನಿಮಗೆ ಉಂಟಾಗುವುದಿಲ್ಲ.

ಮಕರ ರಾಶಿ: ಮಕರ ರಾಶಿಯವರಿಗೆ ಕಷ್ಟದ ದಿನವಾಗಿದೆ. ಮಕ್ಕಳ ಜತೆ ವ್ಯವಹಾರ ಏರುಪೇರು ಆಗಬಹುದು. ಆದರೆ ಬಿಸೆನೆಸ್ ವ್ಯವಹಾರದಲ್ಲಿ ಗಮನ ನೀಡಬೇಕು.

ಕುಂಭರಾಶಿ: ಈ ರಾಶಿಯವರಿಗೆ ಆಸ್ತಿ ವ್ಯವಹಾರ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ಕೋರ್ಟ್, ವ್ಯವಹಾರದ ಸಮಸ್ಯೆ ನಿಮಗೆ ಜಾಸ್ತಿಯಾಗಬಹುದು.

ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮಾಧ್ಯಮ, ಸೋಶಿಯಲ್ ಮೀಡಿಯಾದಲ್ಲಿ ಕೆಲಸ ಮಾಡೋರಿಗೆ ಉತ್ತಮ ದಿನವಾಗಲಿದೆ.