ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ದಿನ ಭವಿಷ್ಯ, ಮಾರ್ಚ್ 15, 2026: ಈ ರಾಶಿಗೆ ಇಂದು ಆಕಸ್ಮಿಕ ಧನಯೋಗದ ಸಾಧ್ಯತೆ

Horoscope Today March 15: ಇಂದು ವಿಶ್ವಾವಸು ನಾಮ ಸಂವತ್ಸರದ, ಉತ್ತರಾಯಣ, ಶರದೃತು ಫಾಲ್ಗುಣ ಮಾಸೆ, ಕೃಷ್ಣೆ ಪಕ್ಷದ, ಏಕಾದಶಿ ತಿಥಿ ಶ್ರವಣ ನಕ್ಷತ್ರದ ಮಾರ್ಚ್ 15ನೇ ತಾರೀಖಿನ ಭಾನುವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ.

ಈ ರಾಶಿಗೆ ಇಂದು ಹಿಂದಿನ ಕಷ್ಟಗಳೆಲ್ಲ ದೂರವಾಗುವ ದಿನ!

ಇಂಟರ್ ನೆಟ್ ಚಿತ್ರ -

Profile
Pushpa Kumari Mar 15, 2026 7:00 AM

ಬೆಂಗಳೂರು: ಇಂದು ವಿಶ್ವಾವಸು ನಾಮ ಸಂವತ್ಸರದ ಉತ್ತರಾಯಣ ಶರದೃತು, ಫಾಲ್ಗುಣ ಮಾಸೆ, ಶ್ರವಣ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದಂತೆ ನಿಮ್ಮ ಭವಿಷ್ಯ ಹೇಗಿದೆ ಎಂದು ತಿಳಿಯಿರಿ.

ಮೇಷ ರಾಶಿ: ಇಂದು ಶ್ರವಣ ನಕ್ಷತ್ರ ಇದ್ದು ಅಧಿಪತಿ ಚಂದ್ರ ಆಗಿದ್ದಾನೆ. ಹಾಗಾಗಿ ಹೆಚ್ಚಿನವರಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಯವರಿಗೆ ಅತೀ ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇದ್ದು ಇಷ್ಟಾರ್ಥ ಸಿದ್ದಿಯಾಗುತ್ತದೆ. ಎಲ್ಲ ರಿಂದಲೂ ನಿಮಗೆ ಜಯ ಪ್ರಾಪ್ತಿಯಾಗುತ್ತದೆ.

ವೃಷಭ ರಾಶಿ: ಇಂದು ವೃಷಭ ರಾಶಿ ಅವರಿಗೆ ಅತೀ ಉತ್ತಮವಾದ ಫಲ ಇರುತ್ತದೆ. ಮನಸ್ಸಿಗೆ ನೆಮ್ಮದಿ ಸಿಗಲಿದ್ದು ಹಿಂದಿನ ಎರಡು ಮೂರು ದಿನದಲ್ಲಿ ಇದ್ದ ಮನಸ್ಸಿನ ನೋವೆಲ್ಲ ಮಾಯವಾಗುತ್ತದೆ.

ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರಿಗೆ ಕಷ್ಟಕರವಾದ ದಿನವಾಗಿದೆ. ಅತೀ ಭಾವುಕತೆಯಿಂದ ನಿಮ್ಮ ಮಿತ್ರರ ಜೊತೆ ಸಮಯ ಕಳೆಯುತ್ತೀರಿ. ಧ್ಯಾನಧಿಗಳನ್ನು ಮಾಡಿ ನೀವು ಸಮಯ ಕಳೆಯಬೇಕಾಗುತ್ತದೆ.

ಕಟಕ ರಾಶಿ: ಕಟಕ ರಾಶಿ ಅವರಿಗೆ ಭಾಗ್ಯೋದಯವಾದ ದಿನ ವಾಗುತ್ತದೆ. ಮನಸ್ಸಿಗೆ ನೆಮ್ಮದಿ ಇದ್ದು ನಿಮ್ಮ ಪ್ರೀತಿ ಪಾತ್ರರ ಜೊತೆ ಉತ್ತಮವಾದ ದಿನವನ್ನು ಕಳೆಯುತ್ತೀರಿ.

ಸಿಂಹ ರಾಶಿ: ಸಿಂಹ ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಸಾಮಾಜಿಕ ಚಟುವಟಿಕೆಯಲ್ಲಿ ನಿಮಗೆ ಜಯ ಪ್ರಾಪ್ತಿಯಾಗುತ್ತದೆ. ನಿಮಗೆ ಈ ಹಿಂದೆ ಇದ್ದ ಅಡೆ- ತಡೆಗಳು ಇಂದು ಮಾಯವಾಗುತ್ತದೆ.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಸ್ವಲ್ಪ ಕಷ್ಟಕರವಾದ ದಿನವಾಗಿದೆ. ದಾಂಪತ್ಯ ಹಾಗೂ ಪ್ರೀತಿ ಪ್ರೇಮ ವಿಚಾರದಲ್ಲಿ ಕಲಹ ಉಂಟಾಗುವ ಸಾಧ್ಯತೆ ಇರುತ್ತದೆ. ಮಕ್ಕಳಿಂದ ಕೂಡ ಕಿರಿ ಕಿರಿ ಉಂಟಾಗುವ ಸಾಧ್ಯತೆ ಇರುತ್ತದೆ

Vastu Tips: ಮನೆ ಗುಡಿಸುವುದಕ್ಕೆ ಮಾತ್ರವಲ್ಲ ಒರೆಸುವುದಕ್ಕೂ ಇದೆ ವಾಸ್ತು ನಿಯಮ! ಈ ಸಮಯದಲ್ಲಿ ನೆಲ ಒರೆಸಿದ್ರೆ ಅಪಾಯ ತಪ್ಪಿದ್ದಲ್ಲ

ತುಲಾ ರಾಶಿ: ತುಲಾ ರಾಶಿಯವರಿಗೆ ಇಂದು ಕಷ್ಟಕರವಾದ ದಿನವಾಗಿದೆ. ಇಂದು ಅಷ್ಟೊಂದು ಪ್ರಾಶಸ್ತ್ಯವಾದ ದಿನ ಆಗಿರುವುದಿಲ್ಲ. ಹಾಗಾಗಿ ಯಾವುದೇ ಮುಖ್ಯ ನಿರ್ಧಾರ ಮಾಡಲು ಹೋಗಬೇಡಿ

ವೃಶ್ಚಿಕ ರಾಶಿ: ವೃಶ್ಚಿಕ ರಾಶಿ ಅವರಿಗೆ ಉತ್ತಮವಾದ ದಿನವಾಗಿದೆ. ಮಾಧ್ಯಮದಲ್ಲಿ ಕೆಲಸ ಮಾಡೋರಿಗೆ ಲಾಭದಾಯಕವಾಗಿದ್ದು ಆರ್ಥಿಕ ಲಾಭ ವಾಗಲಿದೆ.

ಧನಸ್ಸು ರಾಶಿ: ಧನಸ್ಸು ರಾಶಿಗೆ ಸಂಸಾರದ ವಿಚಾರದಲ್ಲಿ ಹೆಚ್ಚಿನ ನೆಮ್ಮದಿ ಇರುತ್ತದೆ. ಕಾರ್ಯಕ್ಷೇತ್ರದಲ್ಲಿ ಕೂಡ ಅತೀ ಹೆಚ್ಚಿನ‌ ಲಾಭ ನೀವು ಕಾಣುತ್ತೀರಿ.

ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಸಿಗಲಿದ್ದು ಹಿಂದಿನ ದಿನದಲ್ಲಿ ಇದ್ದ ನೋವೆಲ್ಲ ಮಾಯವಾಗುತ್ತದೆ. ಮುಂದೆ ಏನು ಮಾಡಬೇಕು ಎನ್ನುವ ಮಾರ್ಗದರ್ಶನ ನಿಮಗೆ ಸಿಗುತ್ತದೆ.

ಕುಂಭರಾಶಿ: ಈ ರಾಶಿಯವರಿಗೆ ಕಷ್ಟಕರವಾದ ದಿನವಾಗುತ್ತದೆ‌. ಇಂದು ಹಣ ವ್ಯಯವಾಗುವ ಸಾಧ್ಯತೆ ಕೂಡ ಇರುತ್ತದೆ. ಯಾವುದೇ ನಿರ್ಧಾರ ಮಾಡಲು ಹೋಗಬೇಡಿ.

ಮೀನ ರಾಶಿ: ಮೀನ ರಾಶಿಗೆ ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇದ್ದು ಇಷ್ಟಾರ್ಥ ಸಿದ್ದಿಯಾಗುತ್ತದೆ.