ಬೆಂಗಳೂರು: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ, ಆರಿದ್ರಾ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಮಾಹಿತಿ ಇಲ್ಲಿದೆ.
ಮೇಷ ರಾಶಿ: ಆರಿದ್ರಾ ನಕ್ಷತ್ರದ ಅಧಿಪತಿ ರಾಹು ಆಗಿದ್ದಾನೆ. ಹೀಗಾಗಿ ಹೆಚ್ಚಿನ ಜನರಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಕೆಲಸದಲ್ಲಿ ಇಂದು ಪ್ರಗತಿ ಮುಂದುವರಿಯುತ್ತಿವೆ.
ವೃಷಭ ರಾಶಿ: ಈ ರಾಶಿಯವರಿಗೆ ಇಂದು ಕಷ್ಟಕರವಾದ ದಿನವಾಗಿದೆ. ಮನೆಯ ವಿಚಾರದಲ್ಲಿ ಇಂದು ಸ್ವಲ್ಪ ತೊಂದರೆಯನ್ನು ಎದುರಿಸಬೇಕಾಗಿ ಬರಬಹುದು.
ಮಿಥುನ ರಾಶಿ: ಇಂದು ಈ ರಾಶಿಗೆ ಕಷ್ಟಕರವಾದ ದಿನವಾಗಿದೆ. ಕೆಲವೊಂದು ವೈಯಕ್ತಿಕ ವಿಚಾರವಾಗಿ ನೀವು ತೊಂದರೆಯನ್ನು ಎದುರಿಸಬೇಕಾಗಿ ಬರಬಹುದು. ಹೀಗಾಗಿ ಮುಖ್ಯ ನಿರ್ಧಾರದಲ್ಲಿ ಬೇರೆಯವರ ಸಲಹೆಗಳು ಅಗತ್ಯವಾಗಿ ಇರುತ್ತದೆ.
ಕಟಕ ರಾಶಿ: ಕಟಕ ರಾಶಿ ಅವರಿಗೆ ಇಂದು ಕಷ್ಟಕರವಾದ ದಿನವಾಗಿದೆ. ಮುಖ್ಯವಾದ ಯಾವುದೇ ನಿರ್ಧಾರಗಳನ್ನು ಮಾಡಲು ಹೋಗಬೇಡಿ. ಪ್ರೇಮ,ಪ್ರೀತಿ ವಿಚಾರದಲ್ಲೂ ನಿಮಗೆ ಬೇಸರ ಉಂಟಾಗಬಹುದು.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಿದೆ. ಇಷ್ಟಾರ್ಥ ಸಿದ್ದಿ ಯಾಗಲಿದ್ದು ದೊಡ್ಡದಾದ ಧನ ಲಾಭದ ಸೂಚನೆಗಳು ಇವೆ. ಅದರೆ ಕೆಲವೊಂದು ವಿಚಾರದಲ್ಲಿ ನಿರ್ಧಾರ ಕೈಗೊಳ್ಳುವಾಗ ಜಾಗೃತರಾಗಿರಿ
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಕಾರ್ಯಕ್ಷೇತ್ರದಲ್ಲಿ ಇಂದು ಹೆಚ್ಚಿನ ಪ್ರಗತಿಯನ್ನು ನೀವು ಕಾಣಬಹುದು. ಅಂದುಕೊಂಡ ಕೆಲಸ ಕಾರ್ಯಗಳು ಯಶಸ್ವಿಯಾಗಿ ನಡೆಯಲಿದೆ.
Vastu Tips: ವೈವಾಹಿಕ ಜೀವನದಲ್ಲಿ ನೆಮ್ಮದಿ ಬೇಕಾ? ಬೆಡ್‌ರೂಂನಲ್ಲಿ ಹೀಗಿರಲಿ ವಾಸ್ತು
ತುಲಾ ರಾಶಿ: ತುಲಾ ರಾಶಿ ಅವರಿಗೆ ಉತ್ತಮವಾದ ದಿನವಾಗಿದೆ. ಆದರೆ ಕೆಲವೊಂದು ವಿಚಾರದಲ್ಲಿ ಸರಿಯಾದ ಪರಿಶೀಲನೆ ಇಂದು ಅಗತ್ಯವಾಗಿ ಇರುತ್ತದೆ.
ವೃಶ್ಚಿಕ ರಾಶಿ: ಈ ರಾಶಿಗೆ ಇಂದು ಕಷ್ಟಕರವಾದ ದಿನವಾಗಿದೆ. ಮುಖ್ಯವಾದ ಯಾವುದೇ ನಿರ್ಧಾರವನ್ನು ಇಂದು ಮಾಡಲು ಹೋಗಬೇಡಿ. ದಾಂಪತ್ಯದ ವಿಚಾರದಲ್ಲಿ ನೀವು ತೊಂದರೆಯನ್ನು ನೋಡಬಹುದು.
ಧನಸ್ಸು ರಾಶಿ: ಧನಸ್ಸು ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಬೇರೆಯವರಿಂದ ಸಹಕಾರ, ನೆಮ್ಮದಿ ನಿಮಗೆ ಸಿಗುತ್ತದೆ.
ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಶತ್ರು ನಾಶ ಹಾಗೂ ಧ್ವಂಸವಾಗುತ್ತದೆ. ಬುದ್ಧಿವಂತಿಕೆ ಉಪಯೋಗಿಸಿ ಮಾಡುವ ಕೆಲಸದಲ್ಲಿ ಯಶಸ್ಸು ನಿಮ್ಮದಾಗುತ್ತದೆ.
ಕುಂಭ ರಾಶಿ: ಈ ರಾಶಿಗೆ ಇಂದು ಕಷ್ಟಕರವಾದ ದಿನವಾಗಿದೆ. ಮಕ್ಕಳ ವಿಚಾರದಲ್ಲಿ ತೊಂದರೆ. ಆದರೆ ಹೆತ್ತವರು ಇಂದು ಮಕ್ಕಳ ವಿಚಾರವಾಗಿ ಹೆಚ್ಚಿನ ಗಮನವನ್ನು ನೀಡಬೇಕಾಗುತ್ತದೆ.
ಮೀನ ರಾಶಿ: ಮೀನ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಕೋರ್ಟ್, ಕಛೇರಿ ವ್ಯವಹಾರದಲ್ಲಿ ಜಾಗೃತಿ ಅಗತ್ಯ.ಸಂಸಾರ ಹಾಗೂ ತಾಯಿಯ ಆರೋಗ್ಯದ ಬಗ್ಗೆಯೂ ಗಮನ ಹರಿಸಿ